ಕಲಬುರಗಿ ನಗರದ ಶಹಾಬಾದ್ ರಿಂಗ್ ರಸ್ತೆಯ ಶಕ್ತಿ ನಗರದಲ್ಲಿರುವ ಭೀಮ್ ಆರ್ಮಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಹುಗ್ಗಿ ಅವರ ಮನೆ ಮುಂದೆ ನಿಲ್ಲಿಸಿದ ಕಾರಿಗೆ ಅಪರಿಚಿತ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಚಿತ್ತಾಪುರದಲ್ಲಿ ನಡೆಯಬೇಕಾಗಿದ್ದ ಆರ್‌ಎಸ್‌ಎಸ್ ಪಥಸಂಚಲನ ವಿರುದ್ಧದ ಹೋರಾಟದಲ್ಲಿ ಮುಂದಾಳತ್ವ ವಹಿಸಿದ್ದ ಸತೀಶ್ ಹುಗ್ಗಿ ಅವರ ಮನೆಗೆ ಮೂವರು ಬೈಕ್‌ನಲ್ಲಿ ಬಂದು ಜೈ ಶ್ರೀರಾಮ ಘೋಷಣೆ ಕೂಗಿ ಕಾರಿಗೆ ಬೆಂಕಿಯಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಸತೀಷ್ ಹುಗ್ಗಿ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಗುಲಬರ್ಗಾ ವಿಶ್ವವಿದ್ಯಾಲಯ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇದನ್ನೂ ಓದಿ : ಆಳಂದ ಕ್ಷೇತ್ರದಲ್ಲಿ ಮತಗಳ್ಳತನ: ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್‌ಗೆ ನಿರೀಕ್ಷಣಾ ಜಾಮೀನು





