ಕಲಬುರಗಿ | ಅನುದಾನ ಅವ್ಯವಹಾರದ ಬಗ್ಗೆ ಅಂಬೇಡ್ಕರ್ ಯುವ ಸೇನೆಯಿಂದ ದೂರು: ಗ್ರಾ.ಪಂ ಪಿಡಿಒ ಅಮಾನತು

Date:

ಅಂಬೇಡ್ಕರ್ ಯುವ ಸೇನೆ ಜೇವರ್ಗಿ ತಾಲೂಕು ಅಧ್ಯಕ್ಷರಾದ ರವೀಂದ್ರ ನಾಟೆಕರ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಅನುದಾನದ ಹಣದಲ್ಲಿ ಅವ್ಯವಹಾರ ನಡೆಸಿದ್ದ ಆರೋಪದ ಮೇಲೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಹರವಾಳ ಗ್ರಾ.ಪಂ ಪಿಡಿಒ ಅವರನ್ನು ಅಮಾನತು ಮಾಡಲಾಗಿದೆ.

ಜೇವರ್ಗಿ ತಾಲೂಕು ಹರವಾಳ ಗ್ರಾ.ಪಂ ಹಿಂದಿನ‌ ಪಿಡಿಒ ಗಂಗಾಧರ್ ರವರು 15ನೇ ಹಣಕಾಸು ಯೋಜನೆಯ ಅನುದಾನ ದುರ್ಬಳಕೆ ಮಾಡಿ ಭಾರೀ ಅವ್ಯವಹಾರ ಮಾಡಿರುತ್ತಾರೆಂದು ಅಂಬೇಡ್ಕರ್ ಯುವ ಸೇನೆ ಜೇವರ್ಗಿ ತಾಲೂಕು ಅಧ್ಯಕ್ಷ ರವೀಂದ್ರ ನಾಟೆಕರ್ ಅವರು ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.

15ನೇ ಹಣಕಾಸು ಯೋಜನೆಯಲ್ಲಿ ಭಾರೀ ಅವ್ಯವಹಾರ ಮಾಡಿದ್ದು, ಕಾಮಗಾರಿಯನ್ನು ಕೈಗೊಳ್ಳದೆ ರಶೀದಿ ಸೃಷ್ಟಿ ಮಾಡಿ ಅನುದಾನ ಲಪಟಾಯಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಈ ದೂರಿನ ತನಿಖೆ ಕೈಗೊಂಡ ಅಧಿಕಾರಿಗಳು, ಪಿಡಿಒ ಬಳಿ ದೂರಿನ ಕುರಿತು ವಿಚಾರಿಸಿದರೆ ಬೇರೆ ಬೇರೆ ನೆಪವೊಡ್ಡಿ ತನಿಖೆಯಿಂದ ತಪ್ಪಿಸಿಕೊಳ್ಳುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001783609

ನಂತರ ದೂರಿಗೆ ಸಂಬಂಧಿಸಿದ ಎಲ್ಲ ದಾಖಲೆಗಳೊಂದಿಗೆ ಖುದ್ದಾಗಿ ಹಾಜರಾಗಲು ಹಾಗೂ ತನಿಖೆಗೆ ಸಹಕರಿಸಲು ತಿಳಿಸಲಾಗಿತ್ತು. ಅನೇಕ ಬಾರಿ ದಾಖಲೆ ಸಲ್ಲಿಸುವಂತೆ ತಿಳಿಸಿದ್ದರೂ ಕೂಡ ತನಿಖಾಧಿಕಾರಿಗಳಿಗೆ ಸ್ಪಂದಿಸಿರುವುದಿಲ್ಲ.
ದಾಖಲೆ ಸಲ್ಲಿಸಲು ಹಿಂಜರಿಯುತ್ತಿದ್ದ ಪಿಡಿಒ ಗಂಗಾಧರ್ ಕಾಮಗಾರಿಯನ್ನು ಕೈಗೊಳ್ಳದೆ ಹಾಗೂ ಪರಿಕರಗಳನ್ನು ಖರೀದಿಸದೆ ರಶೀದಿ ಸೃಷ್ಟಿ ಮಾಡಿ ಭಾರೀ ಅವ್ಯವಹಾರ ಮಾಡಲಾಗಿದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ರೇವಣಸಿದ್ಧ ರವರು ಜಿಲ್ಲಾ ಪಂಚಾಯತಿಗೆ ವರದಿ ಸಲ್ಲಿಸಿದ್ದರು.

ಕಾರ್ಯನಿರ್ವಾಹಕ ಅಧಿಕಾರಿಗಳ ವರದಿ ಆಧರಿಸಿ ಜಿಲ್ಲಾ ಪಂಚಾಯತ್ ಕಲಬುರಗಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭಂವಾರ ಸಿಂಗ್ ಮೀನಾ ರವರು ಹರವಾಳ ಪಿಡಿಒ ಗಂಗಾಧರ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ವರದಿ: ಮಿಲಿಂದ್ ಸಾಗರ್,
ಸಿಟಿಜನ್ ಜರ್ನಲಿಸ್ಟ್

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...