ಕಲಬುರಗಿ |‌ ಸರ್ಕಾರಿ ಶಾಲೆಗೆ ತಡೆಗೋಡೆ ನಿರ್ಮಿಸುವಲ್ಲಿ ಶಾಸಕ ಶರಣಪ್ರಕಾಶ ಪಾಟೀಲ್ ವಿಫಲ; ಆರೋಪ

Date:

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ತಡೆಗೋಡೆ ನಿರ್ಮಾಣ ಮಾಡುವಂತೆ ಹಲವಾರು ವರ್ಷಗಳ ಬೇಡಿಕೆ ಈಡೇರಿಸುವಲ್ಲಿ ಕಲಬುರಗಿ ಜಿಲ್ಲೆಯ ಸೇಡಂ ಕಾರ್ಪೊರೇಷನ್ ಅಧಿಕಾರಿಗಳು, ಶಾಸಕ ಶರಣಪ್ರಕಾಶ ಪಾಟೀಲ್ ವಿಫಲರಾಗಿದ್ದಾರೆ.

‘ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದ ಕೆಇಬಿ ಕಾಲೋನಿಯ ಸರ್ಕಾರಿ ‌ಹಿರಿಯ ಪ್ರಾಥಮಿಕ ಶಾಲೆಗೆ ಸುಮಾರು ವರ್ಷಗಳಿಂದ ತಡೆಗೋಡೆ ನಿರ್ಮಾಣ ಮಾಡುವಂತೆ ಹಲವಾರು ವರ್ಷಗಳಿಂದ ಶಾಲೆಯ ಮುಖ್ಯೋಪಾಧ್ಯಾಯರು ಕಾರ್ಪೊರೇಷನ್ ‌ಕಚೇರಿಗೆ ಮನವಿ ಸಲ್ಲಿಸಿದರು, ಶಾಸಕರಿಗೆ ತಿಳಿಸಿದರೂ ಕೂಡಾ ಯಾವುದೇ ಪ್ರಯೋಜನವಾಗಿಲ್ಲ’ ಎನ್ನುತ್ತಾರೆ ಶಾಲೆಯ ಶಿಕ್ಷಕರು.

“ಈ ಶಾಲೆಯಲ್ಲಿ ಒಂದರಿಂದ ಏಳನೇ ತರಗತಿವರೆಗೆ ಒಟ್ಟು 162 ಮಂದಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಶಾಲೆಯಲ್ಲಿ ಪೋಸ್ಟ್‌ ಗ್ರಾಜ್ಯುಯೇಟ್ ಒಬ್ಬ ಶಿಕ್ಷಕರು, ಅತಿಥಿ ಶಿಕ್ಷಕರು ಸೇರಿದಂತೆ ಒಟ್ಟು ಎಂಟು ಮಂದಿ ಶಿಕ್ಷಕರು ಇದ್ದು, ವಿಜ್ಞಾನ ವಿಷಯವನ್ನು ಪೋಸ್ಟ್ ಗ್ರಾ‌ಜ್ಯುಯೇಟ್ ಶಿಕ್ಷಕರು ತೆಗೆದುಕೊಳ್ಳುತ್ತಾರೆ. ಇನ್ನುಳಿದ ವಿಷಯಗಳಾದ ಕನ್ನಡ, ಗಣಿತ, ಇಂಗ್ಲಿಷ್ ವಿಷಯಗಳಿಗೆ ವಿಷಯವಾರು ಶಿಕ್ಷಕರಿಲ್ಲ. ಹಾಗಾಗಿ ಶಾಲೆಯಲ್ಲಿರುವ ಶಿಕ್ಷಕರೇ ಎಲ್ಲ ವಿಷಯಗಳ ತರಗತಿ ನಡೆಸುವುದು ಅನಿವಾರ್ಯವಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಸರ್ಕಾರಿ ಶಾಲೆ ಶೌಚಾಲಯ

“ಶಾಲೆಯಲ್ಲಿ ಶೌಚಾಲಯ ವ್ಯವಸ್ಥೆಯಿಲ್ಲ. ಮಕ್ಕಳ ಶೌಚಾಲಯ ಬಿದ್ದು ಎರಡು ವರ್ಷಗಳಾಗಿವೆ, ಇದರಿಂದ ಮಕ್ಕಳು ಶೌಚಕ್ಕೆ ಹೋಗಲು ತುಂಬಾ ತೊಂದರೆಯಾಗುತ್ತಿದೆ” ಎಂದು ಶಾಲೆಯ ಶಿಕ್ಷಕರು ತಿಳಿಸಿದರು.

ಶಾಲೆಯ ಮುಖ್ಯ ಶಿಕ್ಷಕಿ ಅನುಸುಯಾ ಈ ದಿನ.ಕಾಮ್‌ನೊಂದಿಗೆ ಮಾತಾನಾಡಿ, “ಶಾಲೆಯ ತಡೆಗೋಡೆ ನಿರ್ಮಾಣ ಕುರಿತು ಅನೇಕ ಬಾರಿ ಕಾರ್ಪೊರೇಷನ್ ಕಚೇರಿ ಹಲವಾರು ಬಾರು ಮನವಿ ಸಲ್ಲಿಸಿದ್ದೇವೆ, ಮಾಡುತ್ತೇವೆಂದು ಹೇಳುತ್ತಾರೆ. ಆದರೆ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಶಾಲೆಯ ವಾತಾವರಣ ತುಂಬಾ ಹದಗೆಟ್ಟಿದೆ. ರಾತ್ರಿ ವೇಳೆ ನಮ್ಮ ಶಾಲೆಯ ಆವರಣದಲ್ಲಿ ಕುಡುಕರ, ಪುಂಡರ ಅಡ್ಡವಾಗಿ ಮಾರ್ಪಾಡಾಗುತ್ತದೆ. ಕುಡುಕರು ಕುಡಿದ ಅಮಲಿನಲ್ಲಿ ಬೀಡಿ, ಸಿಗರೇಟ್, ಗುಟುಕಾ ತಿಂದು ಹುಗುಳಿ ಹೊಲಸು ಮಾಡುತ್ತಾರೆ. ಶಾಲೆಯ ಗೋಡೆಗಳ ಮೇಲೆ ಗೀಚುತ್ತಾರೆ. ಇದರಿಂದ ನಮ್ಮ ಶಾಲೆಯ ‌ಅಂದ, ವಾತಾವರಣ ಎರಡೂ ಹಾಳಾಗುತ್ತಿವೆ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಆತ್ಮಗೌರವ, ಸ್ವಾಭಿಮಾನಕ್ಕಾಗಿ ನಡೆದ ಏಕೈಕ ಯುದ್ದ ಭೀಮಾ ಕೋರೆಗಾಂವ್: ಕವಿ ವೀರಪ್ಪ ತಾಳದವರ

“ಸಂಬಂಧಪಟ್ಟ ಶಾಸಕರು, ಅಧಿಕಾರಿಗಳು ಈಗಲಾದರೂ ಎಚ್ಚೆತ್ತುಕೊಂಡು ನಮ್ಮ ಶಾಲೆಗೆ ತಡೆಗೋಡೆ, ಶೌಚಾಲಯಗಳನ್ನು ನಿರ್ಮಾಣ ಮಾಡಿಕೊಡಬೇಕು” ಎಂದು ಮನವಿ ಮಾಡಿದರು.

WhatsApp Image 2024 11 08 at 12.18.37 667ed234 e1731048718511
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...