ಕಲಬುರಗಿ | ನೇತಾಜಿ ಜನ್ಮದಿನಾಚರಣೆ; ವಿದ್ಯಾರ್ಥಿ ಸಂಘಟನೆಗಳ ಬೃಹತ್ ಮೆರವಣಿಗೆ

Date:

ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 128ನೇ ಜನ್ಮ ದಿನಾಚರಣೆ ಅಂಗವಾಗಿ ನೆನ್ನೆ ಅಖಿಲ ಭಾರತ ಪ್ರಜಾ ಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಒ) ಹಾಗೂ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಯೂತ್‌ ಆರ್ಗನೈಸೇಶನ್ (ಎಐಡಿವೈಒ) ನೇತೃತ್ವದಲ್ಲಿ ಕಲಬುರಗಿಯ ಚಿತ್ತಾಪುರ ತಾಲ್ಲೂಕಿನ ವಾಡಿ ಪಟ್ಟಣದ ಬಸವೇಶ್ವರ ವೃತ್ತದ ಬಳಿ ಬೃಹತ್ ಮೆರವಣಿಗೆ ಮಾಡಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ವಾಡಿಯ ರಮಾಬಾಯಿ ಅಂಬೇಡ್ಕರ್ ಕನ್ಯಾ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಬಸವರಾಜ ಹೊಸಮನಿ ಮಾತನಾಡಿ, “ಇಂದಿನ ಮಕ್ಕಳು ಮಹಾನ್ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟದ ನೇತಾರ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಆದರ್ಶ ಮೌಲ್ಯಗಳನ್ನು ಅಳವಡಿಸಿ ಕೊಳ್ಳುವುದು ಬಹಳ ಅವಶ್ಯಕತೆಯಿದೆ. ಚಿಕ್ಕ ವಯಸ್ಸಿನಲ್ಲೇ ಪ್ರಶ್ನೆ ಮಾಡುವ ಹಾಗೂ ಅನ್ಯಾಯದ ವಿರುದ್ಧ ಸಿಡಿದೇಳುವ ಮನೋಭಾವ ಬರಬೇಕು” ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

WhatsApp Image 2025 01 23 at 10.53.54 PM

ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ತುಳಜಾ ರಾಮ್ ಎನ್ ಕೆ ಮಾತನಾಡಿ, “ಇಂದು ನಮ್ಮನ್ನು ಆಳುತ್ತಿರುವ ಪಕ್ಷಗಳು ಶಿಕ್ಷಣವನ್ನು ಸಂಪೂರ್ಣವಾಗಿ ಖಾಸಗೀಕರಣ ಮಾಡುತ್ತಿವೆ. ಬಡ ಮಕ್ಕಳಿಗೆ ಶಿಕ್ಷಣ ಎಟುಕದ ಹೂವಾಗಿದೆ. ಮತ್ತೊಂದೆಡೆ ರೈತರ, ಕಾರ್ಮಿಕರ ವಿರೋಧಿ ನೀತಿಗಳನ್ನು ತಂದು ಶ್ರಮಿಕರನ್ನು ಸಂಕಷ್ಟದಲ್ಲಿ ದೂಡಿವೆ. ಶಿಕ್ಷಣದಲ್ಲಿ ಜಾತಿ, ಧರ್ಮದ ವಿಷಯಗಳನ್ನು ಹರಡುತ್ತಿವೆ. ಇನ್ನೊಂದೆಡೆ ಸಮಾಜದಲ್ಲಿ ನೈತಿಕ ಮೌಲ್ಯಗಳ ಕೊರತೆ ಯುವಕರನ್ನು ನೈಜ ವಿಷಯಗಳಿಂದ ದಾರಿ ತಪ್ಪಿಸುತ್ತಿವೆ. ಇದರಿಂದ ಪ್ರತಿದಿನ ವಯಸ್ಸಿನ ಮಿತಿ ಇಲ್ಲದೆ ಸಣ್ಣ ಮಕ್ಕಳಿಂದ ಹಿಡಿದು ವಯಸ್ಸಾದ ಮಹಿಳೆಯರ ಮೇಲೆ ಅತ್ಯಾಚಾರದಂತಹ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ನೇತಾಜಿ ಅವರಂತಹ ಮಹಾನ್ ವ್ಯಕ್ತಿಗಳ, ವ್ಯಕ್ತಿತ್ವಗಳ ಸಂಘರ್ಷ ಭರಿತ ಜೀವನ ಹಾಗೂ ವಿಚಾರಗಳ ಅವಶ್ಯಕತೆ ಇದೆ. ಅವೆಲ್ಲವೂ ಸ್ವಾಸ್ಥ್ಯ ಸಮಾಜ ಕಟ್ಟುವಲ್ಲಿ ಮೆಟ್ಟುಲುಗಳಾಗಬೇಕಿವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ನೇತಾಜಿ ಅವರ ಜಯಂತಿ ನಿಮಿತ್ತ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಈ ಸುದ್ದಿ ಓದಿದ್ದೀರಾ?: ಕಲಬುರಗಿ| ಕೊಳಚೆ ನಿರ್ಮೂಲನಾ ಮಂಡಳಿ ಮಂಜೂರು ಮಾಡಿದ ಮನೆಗಳ ಪ್ರಾರಂಭಕ್ಕೆ ಒತ್ತಾಯ

ಜನ ಧ್ವನಿ ಜಾಗೃತ ಸಮಿತಿ ಅಧ್ಯಕ್ಷ ವೀರಭದ್ರಪ್ಪ ಆರ್ ಕೆ, ಶರಣು ಹೇರೂರು, ವಾಡಿ ಅಶೋಕ ಹಾಳ್ವಿ , ಸಂಘಪ್ಪ ಐತಿವಾಲ್, ಸಿದ್ದಯ್ಯ ಶಾಸ್ತ್ರೀ ನಂದೂರಮಠ, ಮಲ್ಲಿನಾಥ ಹುಂಡೇಕಲ್, ಮಲ್ಲಿಕಾರ್ಜುನ ಗಂಧಿ, ಗೌತಮ ಪರತೂರಕರ್, ಗೋದಾವರಿ ಕಾಂಬ್ಳೆ, ವೆಂಕಟೇಶ್ ದೇವದುರ್ಗ, ದತ್ತು ಹುಡೆಕರ್, ಶಿವಕುಮಾರ ಆಂದೋಲ, ಅವಿನಾಶ್ ಒಡೆಯರ್, ರಾಜು ಒಡೆಯರ್, ಸಿದ್ದಾರ್ಥ್ ತಿಪ್ಪನೂರ್, ಸಂಪತ್, ಶ್ರೀ ಶರಣ ಹೊಸಮನಿ, ಸಪ್ನಾ ಹೊಸಮನಿ, ರೇಣುಕಾ ಹಾಗೂ ವಿವಿಧ ಶಾಲೆಯ ನೂರಾರು ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಣ ಪ್ರೇಮಿಗಳು, ಯುವಜನರು ಮತ್ತು ನಾಗರಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...