ಕಲಬುರಗಿ | 5, 8, 9ನೇ ತರಗತಿಯ ಪಬ್ಲಿಕ್ ಪರೀಕ್ಷೆ ಈ ವರ್ಷ ಬೇಡ; ಎಐಡಿಎಸ್‌ಒ ಮನವಿ

Date:

5, 8, 9ನೇ ತರಗತಿಯ ಪಬ್ಲಿಕ್ ಪರೀಕ್ಷೆಯನ್ನು ಪ್ರಸ್ತುತ ಶೈಕ್ಷಣಿಕ ವರ್ಷ ರದ್ದುಗೊಳಿಸುವಂತೆ ಆಗ್ರಹಿಸಿ ಕಲಬುರಗಿಯ ಎಐಡಿಎಸ್‌ಒ ಜಿಲ್ಲಾ ಸಮಿತಿ, ಜಿಲ್ಲಾಧಿಕಾರಿ ಕಚೇರಿ ಎದುರು ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಿದೆ.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಸ್ನೇಹಾ ಕಟ್ಟಿಮನಿ 5, 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳ ಪಬ್ಲಿಕ್ ಪರೀಕ್ಷೆಗಳನ್ನು ರದ್ದುಗೊಳಿಸಬೇಕೆಂದು ಸುಪ್ರೀಂಕೋರ್ಟ್ ತೀರ್ಪು ಹೊರಡಿಸಿದೆ. ಆದರೆ, ರಾಜ್ಯ ಸರ್ಕಾರವು‌ ಆದೇಶ ಹೊರಡಿಸಿ ಪರೀಕ್ಷೆಗಳನ್ನು ಮಧ್ಯಂತರದಲ್ಲಿ  ತಡೆ ಹಿಡಿದಿದ್ದು, ಪರೀಕ್ಷೆಗಳನ್ನು ಮುಂದೂಡಿದೆ. ಒಂದೆಡೆ ಪರೀಕ್ಷೆ ರದ್ದು ಗೊಳಿಸಿ ಹಲವು ಆದೇಶಗಳನ್ನು ನ್ಯಾಯಾಲಯಗಳು ನೀಡುತ್ತಿದ್ದರೂ, ಪರೀಕ್ಷೆ ನಡೆಸಲೇ ಬೇಕು ಎಂದು ಸರ್ಕಾರ ಹಠಕ್ಕೆ ಬಿದ್ದಿರುವುದು ಏಕೆ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡುತ್ತಿದೆ ಎಂದರು.

ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿದ ನಂತರವೂ, ಪರೀಕ್ಷೆ ರದ್ದುಗೊಳಿಸುವ ಬದಲು, ರಾಜ್ಯ ಸರ್ಕಾರ ಪರೀಕ್ಷೆಯನ್ನು ಮುಂದೂಡಿದೆ. ರಾಜ್ಯದ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು ತೀವ್ರ ಆತಂಕಕ್ಕೊಳಗಾಗಿದ್ದಾರೆ. ಈ ಹಿನ್ನಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಶೈಕ್ಷಣಿಕ ವರ್ಷದ ಪರೀಕ್ಷೆಗಳನ್ನು ರದ್ದುಪಡಿಸಿ, ಮುಂದಿನ ವರ್ಷ ಪ್ರಜಾತಾಂತ್ರಿಕ ಪ್ರಕ್ರಿಯೆ ಮೂಲಕ ಪಬ್ಲಿಕ್ ಪರೀಕ್ಷೆಗಳನ್ನು ನಡೆಸುವ ಕುರಿತು ನಿರ್ಧಾರ ಕೈಗೊಳ್ಳಬೇಕೆಂದು ಎಐಡಿಎಸ್‌ಒ ರಾಜ್ಯ ಸಮಿತಿಯು‌ ಆಗ್ರಹಿಸುತ್ತದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ತುಳಜರಾಮ ಎನ್.ಕೆ, ಜಿಲ್ಲಾ ಉಪಾಧ್ಯಕ್ಷರಾದ ಪ್ರೀತಿ ದೊಡ್ಡಮನಿ, ಗೋವಿಂದ ಯಾಳವಾರ, ನಾಗರಾಜ ರಾವೂರ ಸದಸ್ಯರಾದ ಸಂತೋಷ ಸೇರಿ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...