ಕಲಬುರಗಿ | ನಾನಾ ಕಾಮಗಾರಿಗಾಗಿ ರಸ್ತೆ ನಾಶ; ಗ್ರಾಮಸ್ಥರ ಆಕ್ರೋಶ

Date:

ಕಲಬುರಗಿ ಜಿಲ್ಲೆಯ ದಕ್ಷಿಣ ಕ್ಷೇತ್ರದ ಸೀತಾನೂರ ಗ್ರಾಮದಲ್ಲಿ ನಾನಾ ಯೋಜನೆಗಳ ಕಾಮಗಾರಿಗಾಗಿ ರಸ್ತೆಯನ್ನು ಹಗೆಯಲಾಗಿದ್ದು, ರಸ್ತೆ ಸಂಪೂರ್ಣ ಹಾಳಾಗಿದೆ. ರಸ್ತೆಯನ್ನು ರಿಪೇರಿ ಮಾಡದೇ, ಹಾಗೆ ಬಿಟ್ಟು ಹೋಗಿರುವ ಗುತ್ತಿಗೆದಾರರು ಮತ್ತು ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಹಿಡಿ ಶಾಪ ಹಾಕುತ್ತಿದ್ದಾರೆ.

ಜಲ ಜೀವನ ಮಷೀನ್ ಮನೆ ಮನೆಗೆ ನಲ್ಲಿ ನಿರ್ಮಿಸಿ ನೀರು ಬರುವಂತೆ ಮಾಡಿರುವುದರಿಂದ ಎಷ್ಟರ ಮಟ್ಟಿಗೆ ಫಲಕಾರಿ ಆಗಿದೆಯೋ ಗೊತ್ತಿಲ್ಲ? ಆದರೆ, ಜೆ.ಜೆ.ಎಮ್ ಕಾಮಗಾರಿ ಕಳಪೆ ಮಟ್ಟದಾಗಿದೆ ಎಂಬುವ ಆರೋಪ ಕೂಡ ಗ್ರಾಮದಲ್ಲಿ ಕೇಳಿಬರುತ್ತಿದ್ದು, ಈ ಕಾಮಗಾರಿಯಿಂದ ಎಷ್ಟು ಉಪಯೋಗವಾಗಿದೆಯೋ ಗೊತ್ತಿಲ್ಲ. ಇದರಿಂದ ರಸ್ತೆಯಂತೂ ಹಾಳಾಗಿದ್ದು ನಿಜ ಎನ್ನುತ್ತಾರೆ ಗ್ರಾಮಸ್ಥರು.

ಚನ್ನಾಗಿದ್ದ ರಸ್ತೆಗಳನ್ನು ಒಡೆದು ರಸ್ತೆ ಮಧ್ಯಭಾಗದಲ್ಲಿ ಪೈಪ್ ಅಳವಡಿಸಿದ್ದಾರೆ. ಈಗ ಈ ರಸ್ತೆಗಳ ಸ್ಥಿತಿ ನೋಡಲು ಆಗುತ್ತಿಲ್ಲ. ತುಂಬಾ ಭೀಕರ ಸ್ಥಿತಿಗೆ ರಸ್ತೆಗಳು ತಲುಪಿದ್ದು ಕಾಮಗಾರಿ ಮುಗಿದ ಬಳಿಕ ಒಡೆದ ರಸ್ತೆ ದುರಸ್ತಿ ಮಾಡದೇ ಹಾಗೆ ಬಿಟ್ಟಿರುವುದಕ್ಕೆ ಗ್ರಾಮಸ್ಥರು ನಿಷಾದ ವ್ಯಕ್ತ ಪಡಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಸ್ತೆ ಒಡೆದು ಪೈಪ್ ಹಾಕಿ ಕಾಂಕ್ರೇಟ್ ಚೂರುಗಳಿಂದ ಗುಂಡಿಗಳು ಮುಚ್ಚಿ ಬಿಟ್ಟಿದ್ದು, ಕಾಮಗಾರಿ ಮುಗಿದ ಬಳಿಕ ರಸ್ತೆ ಪ್ಯಾಚ್ ವರ್ಕ್ ಕೂಡ ಮಾಡದೇ ಬಿಟ್ಟಿದ್ದು, ಇರುವುದರಿಂದ ಬೈಕ್ ಸವಾರರಿಗೆ ತುಂಬಾ ತೊಂದರೆಯಾಗುತ್ತಿದ್ದು, ಬೈಕ್ ಕಂಟ್ರೋಲ್ ತಪ್ಪಿ ಗಾಡಿ ಸ್ಕಿಡ್ ಆಗಿ ಸವಾರರು ಬಿದ್ದಿರುವ ಘಟನೆಗಳು ನಡೆದಿವೆ. ಇದರಿಂದ ಬೈಕ್ ಸವಾರರು ತುಂಬಾ ಆತಂಕ, ಭಯದಿಂದ ಬೈಕ್ ಓಡಿಸುತ್ತಾರೆ ಎನ್ನುತ್ತಾರೆ ಸ್ಥಳೀಯರು.

ಸಣ್ಣ ಮಕ್ಕಳು, ವಯಸ್ಸಾದ ವೃದ್ಧರು, ಕಣ್ಣು ಕಾಣದೆ ಇರುವವರು ರಸ್ತೆಯಲ್ಲಿ ನಡೆದುಕೊಂಡು ಹೋಗಲು ಆಗುವುದಿಲ್ಲ. ಕಲ್ಲುಗಳು ಕಾಲಿಗೆ ತಾಗಿ ಬೀಳುತ್ತಿದ್ದಾರೆ. ಜೆ.ಜೆ.ಎಮ್ ಕಾಮಗಾರಿಯಿಂದ ಸಂಪೂರ್ಣ ರಸ್ತೆ ಹದಗೆಟ್ಟಿದೆ ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗಾ ಈ ರಸ್ತೆ ದುರಸ್ತಿ ಮಾಡಿಕೊಡಬೇಕು ಎಂದು ಸೀತಾನೂರು ಗ್ರಾಮಸ್ಥರು ಈ ದಿನ. ಕಾಮ್‌ ಮೂಲಕ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...