ಕಲಬುರಗಿ | ರಸ್ತೆ ಮೇಲೆ ಪಾಕಿಸ್ತಾನ ಧ್ವಜ ಅಂಟಿಸಿ ಆಕ್ರೋಶ; ಭಜರಂಗ ದಳದ ಆರು ಜನ ಪೊಲೀಸ್‌ ವಶಕ್ಕೆ

Date:

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಬಜರಂಗದಳದ ಕಾರ್ಯಕರ್ತರು ಶುಕ್ರವಾರ ಕಲಬುರಗಿ ನಗರದ ರಸ್ತೆ ಮೇಲೆ ಪಾಕಿಸ್ತಾನ ಧ್ವಜದ ಸ್ಟಿಕ್ಕರ್‌ಗಳನ್ನು ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಜಗತ್ ವೃತ್ತ, ಆಳಂದ ನಾಕಾ, ಮಾರ್ಕೆಟ್ ಚೌಕ್, ಸಾಥ್‌ ಗುಂಬಜ್ ಸೇರಿದಂತೆ ಹಲವೆಡೆ ರಸ್ತೆಯ ಮೇಲೆ ಪಾಕಿಸ್ತಾನ ಧ್ವಜದ ದೊಡ್ಡ ಸ್ಟಿಕ್ಕರ್‌ಗಳನ್ನು ಅಂಟಿಸಲಾಗಿತ್ತು. ಆರಂಭದಲ್ಲಿ ʼಇದು ಶಾಂತಿ–ಸೌಹಾರ್ದ ಕದಡಲು ಕಿಡಿಗೇಡಿಗಳು ನಡೆಸಿದ ಕೃತ್ಯʼ ಎಂಬ ಸುದ್ದಿ ಹರಡಿತ್ತು. ಆದರೆ, ಉಗ್ರರ ದಾಳಿ ಖಂಡಿಸಿ ಪ್ರತಿರೋಧ ವ್ಯಕ್ತಪಡಿಸಲು ಬಜರಂಗದಳವು ಹೀಗೆ ಮಾಡಿದೆ ಎಂಬುದು ಬಳಿಕ ಸ್ಪಷ್ಟವಾಯಿತು.

ವಿಷಯ ತಿಳಿದ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್‌.ಡಿ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪೊಲೀಸರು ಸ್ಟಿಕ್ಕರ್‌ಗಳನ್ನು ತೆರವುಗೊಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ‌ ಖಂಡಿಸಿ ಬಜರಂಗದಳದ ಕಾರ್ಯಕರ್ತರು ಪಾಕಿಸ್ತಾನದ ಧ್ವಜದ ಸ್ಟಿಕ್ಕರ್‌ಗಳನ್ನು ರಸ್ತೆಗೆ ಅಂಟಿಸಿ ಪ್ರತಿಭಟನೆ ದಾಖಲಿಸಿದ್ದಾರೆ. ಇದಕ್ಕೆ ಯಾವುದೇ ಅನುಮತಿ ಪಡೆದಿರಲಿಲ್ಲ. ಹೀಗಾಗಿ ಗೊಂದಲ ಸೃಷ್ಟಿಯಾಗಿತ್ತು. ಈ ಸಂಬಂಧ 6 ಮಂದಿಯನ್ನು ಬ್ರಹ್ಮಪುರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ’ ಎಂದು ನಗರ ಪೊಲೀಸ್‌ ಕಮಿಷನರ್‌ ಶರಣಪ್ಪ ಎಸ್‌.ಡಿ. ಪ್ರತಿಕ್ರಿಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...