ಕಲಬುರಗಿ | ಪ್ರಜಾಪ್ರಭುತ್ವ, ಸಂವಿಧಾನ, ಜನಜೀವನದ ಮೇಲಿನ ದಾಳಿಗೆ ಜನತಾ ತೀರ್ಪು ದೊರಕಿದೆ: ಸಿಪಿಐ(ಎಂ)

Date:

ಸತತ ಕಳೆದ ಎರಡು ಲೋಕಸಭಾ ಚುನಾವಣೆಗಳಲ್ಲಿ ಬಹುಮತ ಪಡೆದು ದಶಕಗಳ ಕಾಲ ಜನವಿರೋಧಿ ದುರಾಡಳಿತ ನಡೆಸಿದ್ದ ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳಿಗೆ ಹಿನ್ನಡೆಯನ್ನುಂಟು ಮಾಡುವ ಮೂಲಕ ತಾನು ಪ್ರಜಾಪ್ರಭುತ್ವ ಮತ್ತು ಸಂವಿಧಾನ ಹಾಗೂ ಜನ ಜೀವನದ ಮೇಲಿನ ದಾಳಿಗಳನ್ನು ಸಹಿಸುವುದಿಲ್ಲವೆಂಬ ಸಂದೇಶದೊಟ್ಟಿಗೆ ಜನತಾ ತೀರ್ಪು ಬಂದಿರುವುದಾಗಿ ಸಿಪಿಐ(ಎಂ)  ವಿಶ್ಲೇಷಿಸಿದೆ ಎಂದು ಸಿಪಿಐ(ಎಂ) ಕಲಬುರಗಿ ಜಿಲ್ಲಾ ಕಾರ್ಯದರ್ಶಿ ಕೆ ನೀಲಾ ಹೇಳಿದರು.

ಕಲಬುರಗಿ ನಗರದಲ್ಲಿ ಪತ್ರಿಕಾ ಹೇಳಿಕೆ ನೀಡಿದ ಅವರು, “ಜನತಾ ತೀರ್ಪು ಬಿಜೆಪಿ ಹಾಗೂ ನರೇಂದ್ರ ಮೋದಿಯವರಿಗೆ ಮುಖಭಂಗ ಉಂಟು ಮಾಡಿದೆ” ಎಂದು ಟೀಕಿಸಿದರು.

“ನಿರುದ್ಯೋಗ, ಬೆಲೆ ಏರಿಕೆ, ಕೃಷಿ ಸಂಕಷ್ಟ, ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಮೇಲಿನ ದಾಳಿ ಮತ್ತು ಕೋಮುದ್ವೇಷದ ವಿರುದ್ಧ ಇಂಡಿಯಾ ಒಕ್ಕೂಟ ನಿಂತಿದ್ದು, ಜತೆಗೆ ಜನತೆ ನಿಲ್ಲಲು ಕಾರಣವಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ನರೇಂದ್ರ ಮೋದಿಯವರು ನೀತಿ ಸಂಹಿತೆಯನ್ನು ಉಲ್ಲಂಘಿಸಿ ಮಾಡಿದ ದ್ವೇಷ ಭಾಷಣದ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಂಡಿದ್ದಲ್ಲಿ ಖಂಡಿತವಾಗಿ ಬಿಜೆಪಿ ಮತ್ತಷ್ಟು ಹಿನ್ನಡೆ ಅನುಭವಿಸುತ್ತಿತ್ತು. ಈ ಬಾರಿ ಸಿಪಿಐ(ಎಂ) 04, ಸಿಪಿಐ ಹಾಗೂ ಸಿಪಿಐ(ಎಂ,ಎಲ್) ತಲಾ 02ಸೇರಿ ಒಟ್ಟಾಗಿ ಎಡಪಕ್ಷಗಳು 08 ಸ್ಥಾನಗಳನ್ನು ಪಡೆದು ಹಿಂದಿಗಿಂತ ಉತ್ತಮ ಸ್ಥಿತಿ ಹೊಂದಿವೆ” ಎಂದು ಸಮಾಧಾನ ಪಟ್ಟರು.

“ಕರ್ನಾಟಕದಲ್ಲಿಯೂ ಬಿಜೆಪಿ, ಜೆಡಿಎಸ್ ಹಾಗೂ ಜನಾರ್ಧನ್‌ ರೆಡ್ಡಿ ಜೊತೆ ಕೈ ಜೋಡಿಸಿಯೂ ಮತ್ತು ಲಿಂಗಾಯತ ಹಾಗೂ ಒಕ್ಕಲಿಗ ಜಾತಿ ಸಮೀಕರಣ ಮಾಡಿ, ಕೋಮುವಾದ ಅಪ್ಪಿಕೊಂಡಿದ್ದರೂ, ನರೇಂದ್ರ ಮೋದಿ ಹಾಗೂ ದೇವೇಗೌಡರ ಪ್ರಚಾರ ನಡೆಸಿಯೂ ಅದು ಹಿನ್ನಡೆ ಅನುಭವಿಸಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಶೇ.5ರಷ್ಟು ಮತಗಳ ಹಿನ್ನಡೆ ಕಂಡಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಉಪಯೋಗಕ್ಕೆ ಬಾರದ ಬಸ್ ನಿಲ್ದಾಣ: ಅನೈತಿಕ ಚಟುವಟಿಕೆಗಳ ತಾಣ

“ಸಿಪಿಐ(ಎಂ) ಮತ್ತಿತರೆ ಪ್ರಜಾಸತ್ತಾತ್ಮಕ ಶಕ್ತಿಗಳ ಕರೆಗೆ ಓಗೊಟ್ಟು ಬಿಜೆಪಿಯನ್ನು ಹಿಮ್ಮೆಟ್ಟಿಸಿ, ಪ್ರಜಾಪ್ರಭುತ್ವ ಉಳಿಸಿಕೊಳ್ಳಲು ಮುಂದಾದದ ಜನತೆಯನ್ನು ಸಿಪಿಐ(ಎಂ) ಅಭಿನಂದಿಸುತ್ತದೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...