ಕಲಬುರಗಿ | ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ; ರಾಜ್ಯಪಾಲರ ಅಧಿಕಾರ ದುರುಪಯೋಗಕ್ಕೆ ಸಿಪಿಐಎಂ ಖಂಡನೆ

Date:

ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದು, ರಾಜ್ಯಪಾಲರ ಅಧಿಕಾರ ದುರುಪಯೋಗ ಮಾಡಿಕೊಂಡಿರುವುದು ಖಂಡನೀಯ ಎಂದು ಸಿಪಿಐಎಂ ಕಲಬುರಗಿ ಜಿಲ್ಲಾ ಕಾರ್ಯದರ್ಶಿ ಕೆ ನೀಲಾ ಅಸಮಾಧಾನ ವ್ಯಕ್ತಪಡಿಸಿದರು.

ಕಲಬುರಗಿ ನಗರದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, “ಆರ್‌ಟಿಐ ಕಾರ್ಯಕರ್ತರೊಬ್ಬರ ಕೋರಿಕೆಯ ಮೇರೆಗೆ ಘನತೆವೆತ್ತ ರಾಜ್ಯಪಾಲರು ಈ ಹಿಂದೆ ದಿಢೀರನೆ ಅಂದೇ ಮುಖ್ಯಮಂತ್ರಿಗಳಿಗೆ ಶೋಕಾಸ್ ನೋಟೀಸ್ ನೀಡಿದ್ದರು. ಇದೀಗ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿರುವ ಒಂದು ಸರ್ಕಾರದ ಮುಖ್ಯಮಂತ್ರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿ ನೀಡಿರುವುದು ಪ್ರಜಾಪ್ರಭುತ್ವ ವಿರೋಧಿ ದುಷ್ಕೃತ್ಯವಾಗಿದೆಯೆಂದು ಸಿಪಿಐಎಂ ಕರ್ನಾಟಕ ರಾಜ್ಯ ಸಮಿತಿ ಬಲವಾಗಿ ಖಂಡಿಸಿದೆ” ಎಂದರು.

“ರಾಜ್ಯಪಾಲರೊಬ್ಬರು ಸಾಮಾನ್ಯ ಪ್ರಜೆಯೊಬ್ಬರ ಮನವಿ ಮೇರೆಗೆ ಮುಖ್ಯಮಂತ್ರಿಗಳಿಗೆ ಶೋಕಾಸ್ ನೀಡುವ ಮತ್ತು ಪ್ರಾಸಿಕ್ಯೂಷನ್‌ಗೆ ಅವಕಾಶ ನೀಡುವ ಈ ಪ್ರಜಾಪ್ರಭುತ್ವ ವಿರೋದಿ ಬೆಳವಣಿಗೆ ಎಲ್ಲ ಪ್ರಜಾಸತ್ತಾತ್ಮಕ ಶಕ್ತಿಗಳಲ್ಲಿ ಆತಂಕ ಮೂಡಿಸಿದೆ. ಮುಖ್ಯಮಂತ್ರಿಯವರು ಈಗಾಗಲೇ ಮೂಡಾ ಪ್ರಕರಣಕ್ಕೆ ಸಂಬಂಧಿಸಿ ವಿಧಾನ ಸಭೆ ಹಾಗೂ ನೇರ ರಾಜ್ಯಪಾಲರಿಗೂ ವಿವರವಾದ ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ತನಿಖೆಗೆ ಕ್ರಮವಹಿಸಿದ್ದಾರೆ. ಪರಿಸ್ಥಿತಿ ಹೀಗಿದ್ದಾಗಲೂ ಈ ರೀತಿಯ ಕ್ರಮ ಅಧಿಕಾರ ದುರುಪಯೋಗವಾಗಿರುವುದನ್ನು ಸ್ಪಷ್ಟವಾಗಿ ಎತ್ತಿ ತೋರಿಸುತ್ತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯ ಸರ್ಕಾರವನ್ನು ಅಧಿಕೃತವಾಗಿ ಪ್ರತಿನಿಧಿಸುವ ಘನತೆವೆತ್ತವರು ವಿರೋಧ ಪಕ್ಷದ ನಾಯಕರಂತೆ ಕ್ರಮವಹಿಸುತ್ತಿರುವುದು ಮತ್ತು ಬಿಜೆಪಿಯ ಒಕ್ಕೂಟ ಸರ್ಕಾರದ ದಾಳಕ್ಕೆ ತಕ್ಕಂತೆ ಕುಣಿಯುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ” ಎಂದರು.‌

“ಲೋಕಾಯುಕ್ತರು ತನಿಖೆ ಆಧಾರದಲ್ಲಿ ಈಗಿನ ಒಕ್ಕೂಟ ಸರ್ಕಾರದ ಸಂಪುಟ ದರ್ಜೆಯ ಸಚಿವ‌ ಎಚ್‌ ಡಿ ಕುಮಾರಸ್ವಾಮಿಯವರಿಗೆ ಸಂಬಂಧಿಸಿ ಮನವಿ ಮಾಡಿ ಸುಮಾರು ಹತ್ತು ತಿಂಗಳಾಗುತ್ತಿದ್ದರೂ ಏನೊಂದು ಕ್ರಮವಹಿಸದ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಮೇಲೆ ಕ್ರಮಕ್ಕೆ ಮುಂದಾಗಿದ್ದಾರೆ. ಇದು ರಾಜ್ಯಪಾಲರ ಕಚೇರಿಯನ್ನು ದುರುಪಯೋಗ ಮಾಡುವ ಬಿಜೆಪಿ ಹಾಗೂ ಒಕ್ಕೂಟ ಸರ್ಕಾರದ ಮುಂದುವರೆದ ದುರ್ನಡೆಯ ಭಾಗವಾಗಿ‌ರುವುದು ಬಹಳ ಸ್ಪಷ್ಟವಾಗಿ ಕಂಡುಬರುತ್ತಿದೆ” ಎಂದರು.

“ಬಿಜೆಪಿ ಮತ್ತು ಅದರ ಒಕ್ಕೂಟ ಸರ್ಕಾರ ವಿರೋಧ ಪಕ್ಷಗಳ ಸರ್ಕಾರಗಳನ್ನು ದುರ್ಬಲಗೊಳಿಸಲು ಇಲ್ಲವೇ ಅಗತ್ಯ ಬಹುಮತ ಇಲ್ಲದಿದ್ದರೂ ಬಲವಂತವಾಗಿ ಬಿಜೆಪಿ ಸರ್ಕಾರ ಸ್ಥಾಪನೆಗೆ ಕ್ರಮವಹಿಸಲು ರಾಜ್ಯಪಾಲರ ಕಚೇರಿ ಹಾಗೂ ಅವರ ವಿವೇಚನಾಧಿಕಾರವನ್ನು ದುರ್ಬಳಕೆ ಮಾಡಿಕೊಂಡಿರುವುದು ಅನುಭವವೇದ್ಯವಾಗಿದೆ” ಎಂದು ವಿವರಿಸಿದರು.

“ರಾಜ್ಯದ ಜನತೆ ಬರಗಾಲ, ಅತೀವೃಷ್ಟಿ, ಬೆಲೆ ಏರಿಕೆಯ ಹೊರೆಗಳಿಂದ ಬಳಲುತ್ತಿರುವಾಗ ಬಿಜೆಪಿ ಒಂದು ರಚನಾತ್ಮಕ ವಿರೋಧ ಪಕ್ಷವಾಗಿ ವಿಧಾನಸಭೆಯಲ್ಲಿ ತನ್ನ ಮಿತ್ರಪಕ್ಷದ ಬಲದೊಂದಿಗೆ ರಾಜ್ಯ ಸರ್ಕಾರದ ನಡೆಯನ್ನು ಜನಪರವಾಗಿ ಬದಲಾಯಿಸುವ ಮತ್ತು ತನ್ನ ಒಕ್ಕೂಟ ಸರ್ಕಾರದ ಬಲವನ್ನು ಉಪಯೋಗಿಸಿ ರಾಜ್ಯದ ನೈಜ ಅಭಿವೃ‌ದ್ಧಿಗೆ, ಸಂಕಷ್ಟದಲ್ಲಿರುವ ಜನತೆಗೆ ನೆರವಾಗಲು ಅಗತ್ಯ ಕ್ರಮವಹಿಸುವುದರ ಬದಲು ಒಂದೆಡೆ, ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಜಾಪ್ರಭುತ್ವ ವಿರೋಧಿಯಾಗಿ ವರ್ತಿಸಿದರೆ, ಮತ್ತೊಂದೆಡೆ ಸಂಕಷ್ಟದಲ್ಲಿರುವ ಜನತೆ ಸಂಕಷ್ಟದ ವಿರುದ್ದ ಗಮನಹರಿಸದಂತೆ ಅವರ ಗಮನವನ್ನು ಬೇರೆಡೆ ಸೆಳೆಯುವ ಕುತಂತ್ರವನ್ನು ಹೆಣೆದಿದೆ” ಎಂದು ಟೀಕಿಸಿದರು.

“ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ತನಗೆ ಮತದಾರರು ಉಂಟುಮಾಡಿದ ಹಿನ್ನಡೆಯಿಂದಾಗಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಮಾತ್ರವಲ್ಲಾ, ಲೂಟಿಕೋರ ಕಾರ್ಪೊರೇಟ್ ಸಂಸ್ಥೆಗಳೂ ವ್ಯಾಘ್ರಗೊಂಡಿವೆ. ಹೀಗಾಗಿ, ವಿರೋದ ಪಕ್ಷದ ರಾಜ್ಯ ಸರ್ಕಾರ‌ವನ್ನು ಅಸ್ಥಿರಗೊಳಿಸುವ ಮತ್ತು ಉರುಳಿಸುವ ಕೆಲಸಕ್ಕೆ ಕೈ ಹಾಕಿವೆ. ಇದರ ಭಾಗವಾಗಿಯೇ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಯಲ್ಲಿ ಕೇಂದ್ರೀಯ ತನಿಖಾ ಸಂಸ್ಥೆಯಾದ ಅನುಷ್ಠಾನ ನಿರ್ಧೇಶನಾಲಯ(ಇ.ಡಿ) ರಾಜ್ಯ ಸರ್ಕಾರದ ಉನ್ನತ ಸಚಿವರು ಹಗರಣದಲ್ಲಿದ್ದಾರೆಂದು ಹೇಳುವಂತೆ ತನ್ನನ್ನು ಹಿಂಸಿಸಲಾಗಿದೆಯೆಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯೊಬ್ಬರು ಪೋಲೀಸರಿಗೆ ದೂರು ಸಲ್ಲಿಸಿರುವುದನ್ನು ಮತ್ತು ಮೂಡಾ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿದ ನಂತರವೂ ಬಿಜೆಪಿ ಪಾದಯಾತ್ರೆಗೆ ಕ್ರಮವಹಿಸಿರುವುದು ಅಲ್ಲದೆ ಇದೀಗ ರಾಜ್ಯಪಾಲರ ನಡೆ ಈ ಎಲ್ಲವೂ ಅದನ್ನು ಸಮರ್ಥಿಸುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೋಲಾರ | ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ; ಜಿಲ್ಲಾ ಕಾಂಗ್ರೆಸ್ ಘಟಕದಿಂದ ಬೃಹತ್ ಪ್ರತಿಭಟನೆ

“ಕಳೆದ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವಿರೋಧಿ ನಡೆಗಾಗಿ ಜನತೆಯಿಂದ ಮುಖಕ್ಕೆ ನಾಮ ಇಕ್ಕಿಸಿಕೊಂಡರೂ ಕೂಡಾ ಬಿಜೆಪಿ ಪಾಠ ಕಲಿಯದಿರುವದನ್ನು ಇದು ಹೇಳುತ್ತದೆ. ಹಾಗಾಗಿ ಬಿಜೆಪಿ ಹಾಗೂ ಒಕ್ಕೂಟ ಸರ್ಕಾರಗಳು ರಾಜ್ಯ ಸರ್ಕಾರದ ಮೇಲೆ ನಡೆಸುತ್ತಿರುವ ಪ್ರಜಾಪ್ರಭುತ್ವ ಹಾಗೂ ಜನವಿರೋಧಿ ದುರ್ದಾಳಿಗಳನ್ನು ಕೂಡಲೆ ನಿಲ್ಲಿಸಬೇಕು” ಎಂದು ಸಿಪಿಐಎಂ ಪರವಾಗಿ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...