ಕಲಬುರಗಿ | ಆದಾಯ ಮೀರಿ ಆಸ್ತಿ ಗಳಿಕೆ : ಇಇ, ಪಿಡಿಒ ಕಚೇರಿ, ಮನೆಗಳ ಮೇಲೆ ಲೋಕಾಯುಕ್ತ ದಾಳಿ

Date:

ಆದಾಯ ಮೀರಿ ಹೆಚ್ಚು ಆಸ್ತಿ ಹೊಂದಿದ್ದ ಆರೋಪದ ಮೇಲೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಆರ್‌ಡಿಪಿಆರ್) ಇಇ ‌ಮಲ್ಲಿಕಾರ್ಜುನ ಅಲಿಪುರ್‌‌ ಹಾಗೂ ಕಲಬುರಗಿ ತಾಲ್ಲೂಕಿನ ಸಣ್ಣೂರ‌ ಗ್ರಾಮ‌ ಪಂಚಾಯತಿ ಪಿಡಿಓ ರಾಮಚಂದ್ರ ಅವರ ಮನೆ ಹಾಗೂ ಕಚೇರಿ ‌ಮೇಲೆ ಮಂಗಳವಾರ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿದರು.

ಎಂಜಿನಿಯರ್ ಮಲ್ಲಿಕಾರ್ಜುನ ಅಲಿಪುರ್ ಅವರ ಕಲಬುರಗಿ ನಗರದಲ್ಲಿನ ಕಚೇರಿ, ಜೇವರ್ಗಿ ಕ್ರಾಸ್ ಸಮೀಪ ಹಾಗೂ ಬೆಂಗಳೂರು ನಗರದಲ್ಲಿನ ಮನೆಗಳಲ್ಲಿ ಲೋಕಾಯುಕ್ತ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಮಲ್ಲಿಕಾರ್ಜುನ ಅಲಿಪುರ್ ಅವರು ಇನ್ನು ನಾಲ್ಕು ದಿನಗಳಲ್ಲಿ ನಿವೃತ್ತಿ ಆಗಲಿದ್ದರು ಎಂದು ಮೂಲಗಳು ತಿಳಿಸಿವೆ.

ಸಣ್ಣೂರು ಪಿಡಿಒ ರಾಮಚಂದ್ರ ಅವರ ಸೇಡಂ ರಸ್ತೆಯ ಮಾನಸ ರೆಸಿಡೆನ್ಸಿ ಲೇಔಟ್ ಹಾಗೂ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲ್ಲೂಕಿನ ಬೊಮ್ಮನಹಳ್ಳಿ ಮನೆಗಳಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೋಕಾಯುಕ್ತ ಎಸ್ಪಿ ಉಮೇಶ್ ಬಿ.ಕೆ. ನೇತೃತ್ವದಲ್ಲಿ ಡಿವೈಎಸ್ಪಿ ಗೀತಾ ಬಿನಾಳ,‌ ಹನುಮಂತರಾಯ, ಡಿವೈಎಸ್ಪಿ ಶಿಲವಂತ, ಇನ್ಸ್ಪೆಕ್ಟರ್ ರಾಜಶೇಖರ, ಸಂತೋಷ್ ಕಾರ್ಯಾಚರಣೆ ನಡೆಸಿದರು.

ಇದನ್ನೂ ಓದಿ : ಬೀದರ್ | ಅಧಿಕಾರ ದುರ್ಬಳಕೆ : ಕೊಳ್ಳೂರ ಪ್ರೌಢಶಾಲೆ ಮುಖ್ಯ ಶಿಕ್ಷಕ ಅಮಾನತು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...