ಕಲಬುರಗಿ | ಪೌರಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯ

Date:

ಜೇವರ್ಗಿ ಪುರಸಭೆಯ ಪೌರಕಾರ್ಮಿಕರು ಮತ್ತು ಸ್ವಚ್ಛತಾ ಸಿಬ್ಬಂದಿಗೆ ಸರ್ಕಾರದ ಆದೇಶದಂತೆ ಹೆಚ್ಚುವರಿಯಾಗಿ ವೇತನ ಪಾವತಿ, ಎರಡು ಸಾವಿರ ಸಂಕಷ್ಟ ಭತ್ಯೆ, ಸಮವಸ್ತ್ರ ಸೇರಿದಂತೆ ರಕ್ಷಣಾ ಸಾಮಗ್ರಿಗಳನ್ನು ಒದಗಿಸಿ, ಬಾಕಿ ಉಳಿದಿರುವ ಐದು ಜನರಿಗೆ ನಿವೇಶನ ನೀಡಬೇಕು” ಎಂದು ದಲಿತ ಮುಖಂಡ ಸಿದ್ರಾಮ್ ಕಟ್ಟಿ ಆಗರಹಿಸಿದರು.

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ದಲಿತ ಸಂಘಟನೆಗಳ ಮುಖಂಡರು ಹಾಗೂ ಪೌರಕಾರ್ಮಿಕರು ಪ್ರತಿಭಟಿಸಿದರು. ನಂತರ ತಾಲೂಕು ದಂಡಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಪೌರಕಾರ್ಮಿಕರಿಗೆ ಮತ್ತು ಇತರೆ ಸಿಬ್ಬಂದಿಗೆ ಸ್ವಚ್ಛತೆ ಮತ್ತು ಆರೋಗ್ಯದ ದೃಷ್ಟಿಯಿಂದ ಸರಕಾರ ಕಾಳಜಿ ವಹಿಸಬೇಕು.  ಪ್ರಮುಖ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಈ ಕುರಿತಂತೆ ಪುರಸಭೆ ಮುಖ್ಯ ಅಧಿಕಾರಿಗಳು ನಿರ್ಲಕ್ಷ ವಹಿಸುತ್ತಿದ್ದಾರೆ. ನಾಲ್ಕು ತಿಂಗಳಿಂದ ಪೌರಕಾರ್ಮಿಕರಿಗೆ ಬೆಳಗಿನ ಉಪಹಾರ ನೀಡುವ ವ್ಯವಸ್ಥೆ ಮಾಡುತ್ತಿಲ್ಲ. ಅದನ್ನು ಕೂಡಲೇ ಪುನರ್ ಪ್ರಾರಂಭಿಸಬೇಕೆಂದು” ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ವೇಳೆ ಕ್ರಮ ಕೈಗೊಳ್ಳದಿದ್ದರೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಸಿದ್ರಾಮ್ ಅವರು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ಕಪ್ಪತಗುಡ್ಡದ ಜೀವ ವೈವಿಧ್ಯತೆ ಕಾಪಾಡಬೇಕಿದೆ: ಸಂಸದ…

ಈ ಪ್ರತಿಭಟನೆಯಲ್ಲಿ ಶಿವಕುಮಾರ್ ಹೆಗಡೆ, ಪರಮಾನಂದ ಯಲಗೋಡ, ಸೇರಿದಂತೆ ಪುರಸಭೆ ಪೌರಕಾರ್ಮಿಕರಾದ ಶಿವಕುಮಾರ್ ಬುಟ್ನಾಳ, ಮಲ್ಲಿಕಾರ್ಜುನ ಬಡಿಗೇರ್, ಭಗವಾನ್ ದೊಡ್ಡಮನಿ, ಬಸವರಾಜ್ ಧನಕರ್, ಮಹೇಶ್ ಬಿಲ್ಲಾರ್, ದೇವಿಂದ್ರ ಅಳಲೇಕರ್, ಮಾನಪ್ಪ ಗುಟ್ಟಾಳ್ ಮಲ್ಲಿನಾಥ್ ಹೆಗಡೆ, ಶರಣಪ್ಪ ಜಟ್ನಾಕ‌ರ್, ರಾಜಶೇಖರ ಪಡದಳ್ಳಿ,, ಲಕ್ಷ್ಮಣ ಮದನ್ನಾಕರ್, ವಿಶ್ವನಾಥ, ಕಸ್ತೂರಿಬಾಯಿ, ಮರೆವ್ವ, ಮರೆಮ್ಮ, ಶೀವಮ್ಮ, ಲೇವಿತಾ, ರೇಣುಕಾ, ಮರೆಮ್ಮ ಬಿ, ಭೀಮರಾಯ, ಷಣ್ಮುಖಪ್ಪ, ಯಲ್ಲಮ್ಮ, ಬಸವರಾಜ, ಮಹೇಶ, ಶೀವಪ್ಪ, ಕಲ್ಲಪ್ಪ, ಸಾಗರ, ರಾಜು, ಗುರಪ್ಪ, ಸಂಜೀವಕುಮಾರ, ಬಸವರಾಜ, ಮಲ್ಲಪ್ಪ, ಲಕ್ಷ್ಮೀಬಾಯಿ, ಸಂತೋಷ, ಸಾಯಿಕುಮಾರ ಇತರರು ಭಾಗವಹಿಸಿದ್ದರು..

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...