ಕಲಬುರಗಿ | ಬಂಗಾರದ ಬಳೆ ಮಾರಿ ಹಸಿದ ಮಕ್ಕಳಿಗೆ ಅನ್ನ ಹಾಕಿದ ಮಹಾನ್ ತ್ಯಾಗಮಯಿ ರಮಾಬಾಯಿ ಅಂಬೇಡ್ಕರ್:‌ ಅಶ್ವಿನಿ ಮದನಕರ್

Date:

ರಮಾಬಾಯಿ ಅಂಬೇಡ್ಕರ್ ಅವರು ಈ ದೇಶಕ್ಕೆ ಕೊಟ್ಟ ಕೊಡುಗೆ ಅಪಾರವಾದದ್ದು. ರಮಾಬಾಯಿ ಅಂಬೇಡ್ಕರ್ ಅವರು ತಮ್ಮ ಅನಾರೋಗ್ಯದ ನಿಮಿತ್ತ ಕರ್ನಾಟಕಕ್ಕೆ ಬಂದಿದ್ದು, ಧಾರವಾಡದ ಹಾಸ್ಟೆಲ್‌ನಲ್ಲಿ ನೆಲೆಸಿದ್ದರು. ಆ ಸಂದರ್ಭದಲ್ಲಿ ಯಾವುದೇ ಭೇದಭಾವವಿಲ್ಲದೆ ತನ್ನ ಬಂಗಾರದ ಬಳೆಗಳನ್ನು ಮಾರಿ ಹಸಿದ ಮಕ್ಕಳಿಗೆ ಅನ್ನ ಹಾಕಿದ ಭಾರತದ ಮಹಾನ್ ತ್ಯಾಗಮಯಿ ಎಂದು ನಾರಿಶಕ್ತಿ ಕರ್ನಾಟಕ ಮಹಿಳಾ ಸಂಘಟನೆಯ ಸಂಸ್ಥಾಪಕಿ ಅಶ್ವಿನಿ ಮದನಕರ್ ಸ್ಮರಿಸಿದರು.

ಕಲಬುರಗಿ ತಾಲೂಕಿನ ಸೈಯದ್ ಚಿಂಚೋಳಿ ಗ್ರಾಮದಲ್ಲಿ ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಅವರ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿದ್ದ “ರಮಾಬಾಯಿ ಅಂಬೇಡ್ಕರ್ ಅರಿವಿನ ರಥಯಾತ್ರೆ” ಕಾರ್ಯಕ್ರಮದಲ್ಲಿ ಮಾತನಾಡಿದರು.

“ರಮಾಬಾಯಿ ಅಂಬೇಡ್ಕರ್ ಅವರ ತ್ಯಾಗವನ್ನು ಸ್ಮರಿಸಬೇಕೆಂದರೆ ರಮಾಮಾಯಿಯವರನ್ನು ಜನಮಾನಸದಲ್ಲಿ ಪ್ರಚಾರಪಡಿಸಬೇಕು. ಜತೆಗೆ ರಮಾಬಾಯಿ ಅಂಬೇಡ್ಕರ್ ಅವರ ಸ್ಮರಣಾರ್ಥವಾಗಿ ಕರ್ನಾಟಕದಲ್ಲಿರುವ ಮಹಿಳಾ ಹಾಸ್ಟೆಲಗಳಿಗೆ ರಮಾಬಾಯಿ ಅಂಬೇಡ್ಕರ್ ಹೆಸರಿಡುವುದಕ್ಕಾಗಿ ನಾವು ಸರ್ಕಾರಕ್ಕೆ ಒತ್ತಾಯಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗದಗ | ಮರ್ಯಾದೆಗೇಡು ಹತ್ಯೆ: ಮಗಳನ್ನೇ ಕೊಂದಿದ್ದ ನಾಲ್ವರು ಹಂತಕರಿಗೆ ಮರಣದಂಡನೆ

ರಮಾಬಾಯಿ ಅಂಬೇಡ್ಕರ್ ಅರಿವಿನ ರಥಯಾತ್ರೆ ಕಾರ್ಯಕ್ರಮಕ್ಕೆ ಖ್ಯಾತ ಉದ್ಯಮಿ ಮಲ್ಲಿಕಾರ್ಜುನ್ ಗಾಯಕವಾಡ್ ಚಾಲನೆ ನೀಡಿದರು.

ರಮಾಬಾಯಿ ಅಂಬೇಡ್ಕರ್ ರಥಯಾತ್ರೆಯಲ್ಲಿ ಅತಿಥಿಗಳಾಗಿ ಎಸ್‌ಸಿ/ಎಸ್‌ಟಿ ವಕೀಲರ ಸಂಘದ ಅಧ್ಯಕ್ಷ ಮಸ್ತಾನ್ ದಂಡೆ, ರೈತ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ರಾಗಿ, ಗ್ರಾಮ ಪಂಚಾಯಿತಿ ಸದಸ್ಯರಾದ ಶರಣು ಅಂಬರಾಯ, ಚಿಂಚೋಳಿ ಈಶ್ವರ್ ಪ್ರಹ್ಲಾದ್ ಡಾಂಗೆ‌, ಸೈಯದ್ ಪಟೇಲ್, ಅಭಿಷೇಕ್ ಪೂಜಾರಿ ಹಾಗೂ ಸಮಸ್ತ ಗ್ರಾಮದ ಜನ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ರಾಹುಲ್ ಡಾಂಗೆ ಕಾರ್ಯಕ್ರಮ ನಿರ್ವಹಣೆ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...