ಕಲಬುರಗಿ | ಇಬ್ಬರು ಬಾಲಕಿಯರ ಅತ್ಯಾಚಾರ, ಕೊಲೆ : ಆರೋಪಿಗಳ ಕಠಿಣ ಶಿಕ್ಷೆಗೆ ಡಿವೈಎಫ್‌ಐ ಆಗ್ರಹ

Date:

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನಲ್ಲಿ ಇಂದಿರಾನಗರದ ಅಲೆಮಾರಿ ಬುಡ್ಗ ಜಂಗಮ ಸಮುದಾಯದ ಇಬ್ಬರು ಬಾಲಕಿಯರು ಚಿಂದಿ ಆಯುವ ವೇಳೆ ಅವರ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದು ಮೃತ ದೇಹಗಳನ್ನು ಕೆರೆಯಲ್ಲಿ ಎಸೆಯಲಾಗಿದೆ ಎನ್ನಲಾದ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಲಬುರಗಿಯಲ್ಲಿ ಡಿವೈಎಫ್‌ಐ ಸಂಘಟನೆ ಪ್ರತಿಭಟನೆ ನಡೆಸಿತು.

ಈ ಸಂಬಂಧ ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್ಐ) ಸಂಘಟನೆ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ʼ19 ವರ್ಷದ ಯುವತಿ ಹಾಗೂ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೆರೆಯಲ್ಲಿ ಎಸೆದು ಹೋಗಿದ್ದಾರೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ. ಆದರೆ ಈ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸದಿರುವುದು ಖಂಡನಾರ್ಹ. ಈ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಅಲೆಮಾರಿ ಸಮುದಾಯದವರಿಗೆ ಉಚಿತವಾಗಿ ವಸತಿ, ಶಿಕ್ಷಣ ಹಾಗೂ ಉದ್ಯೋಗದ ಭದ್ರತೆ ದೊರಕಿಸಬೇಕು. ಸಮಾಜದಲ್ಲಿ ಯಾವುದೇ ಭದ್ರತೆಯಿಲ್ಲದೇ ಜೀವನ ನಡೆಸುತ್ತಿರುವ ಈ ಅಲೆಮಾರಿ ಸಮುದಾಯದ ಹೆಣ್ಣುಮಕ್ಕಳ ಅನುಮಾನಾಸ್ಪದ ಸಾವಿನ ಪ್ರಕರಣದ ಸೂಕ್ತ ತನಿಖೆಯನ್ನು ಕೈಗೊಂಡು ಮೃತ ಯುವತಿಯರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ರಾಜಕೀಯ ಒತ್ತಡಕ್ಕೆ ಒಳಗಾಗಿ ಪ್ರಕರಣ ಮುಚ್ಚಿಹಾಕದೇ ಗಂಭೀರವಾಗಿ ಪರಿಗಣಿಸಿ ತುರ್ತು ಕ್ರಮಕೈಗೊಳ್ಳಬೇಕುʼ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | 15 ತಿಂಗಳಾದರೂ ಪದವೀಧರ ಶಿಕ್ಷಕರಿಗಿಲ್ಲ ನಾಲ್ಕು ತಿಂಗಳ ಪಗಾರ!

ಡಿವೈಎಫ್‌ಐ ರಾಜ್ಯ ಘಟಕ ಅಧ್ಯಕ್ಷೆ ಲವಿತ್ರ ವಸ್ತ್ರದ್ ಸೇರಿದಂತೆ ಸಂಘಟನೆಯ ಪ್ರಮುಖರಾದ ಸಲ್ಮಾನ್ ಖಾನ್, ದಿಲ್‌ಶಾದ್, ಪ್ರಿಯಾಂಕ್ ಮಾವಿನಕರ್‌, ಸುಜಾತಾ ವೈ ಹಾಗೂ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...