ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 35 ವರ್ಷ ಜೈಲು ಶಿಕ್ಷೆ

Date:

ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪ ಸಾಬೀತಾಗಿದ್ದರಿಂದ ಕಲಬುರಗಿಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇಷ ಪೋಕ್ಸೊ) ನ್ಯಾಯಾಲಯ ಅಪರಾಧಿಗೆ 35 ವರ್ಷ ಜೈಲು ಶಿಕ್ಷೆಯನ್ನು ಬುಧವಾರ ವಿಧಿಸಿದೆ.

ಆಳಂದ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ ನಿವಾಸಿ ಸೈಬಣ್ಣ ನಾಗಣ್ಣ (25) ಶಿಕ್ಷೆಗೆ ಒಳಗಾದ ಅಪರಾಧಿಯಾಗಿದ್ದಾರೆ.

ಅಪರಾಧಿ 15 ವರ್ಷದ ಬಾಲಕಿಗೆ ಮದುವೆ ಆಗುವುದಾಗಿ ನಂಬಿಸಿದ್ದ. ಆಳಂದದ ಸಾರ್ವಜನಿಕ ಮಹಿಳಾ ಶೌಚಾಲಯದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ಆ ಬಳಿಕ ಸ್ನೇಹಿತನ ಕಾರಿನಲ್ಲಿ ಬಾಲಕಿಯನ್ನು ಅಪಹರಿಸಿ ಹುಬ್ಬಳ್ಳಿಗೆ ತೆರಳಿದ. ಅಲ್ಲಿಂದ ಹರಿಯಾಣಕ್ಕೆ ಕರೆದೊಯ್ದು ಅಕ್ರಮ ಬಂಧನದಲ್ಲಿ ಇರಿಸಿ ಅತ್ಯಾಚಾರ ಎಸಗಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಪಿಎಸ್‌ಐ ತಿರುಮಲೇಶ, ಪಿಐ ಮಹಾದೇವ ಪಂಚಮುಖಿ ಅವರು ತನಿಖಾಧಿಕಾರಿಗಳಾಗಿ, ತನಿಖೆ ನಡೆಸಿ ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ವಾದ–ಪ್ರತಿವಾದ ಆಲಿಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಎಫ್‌ಟಿಎಸ್‌ಸಿ–1 ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು, ಸೈಬಣ್ಣಗೆ ಪೋಕ್ಸೊ ಕಾಯ್ದೆಯ ವಿವಿಧ ಸೆಕ್ಷನ್‌ ಅಡಿ 35 ವರ್ಷ ಜೈಲು ಶಿಕ್ಷೆ ಮತ್ತು ₹38 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ತಂದೆ ಸಾವಿನ ದುಃಖದ‌ ಮಧ್ಯೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ

ನೊಂದ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ₹7 ಲಕ್ಷವನ್ನು ಪರಿಹಾರವಾಗಿ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ.ತುಪ್ಪದ ಅವರು ವಾದ ಮಂಡಿಸಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...