ಕಲಬುರಗಿ | ಅಂಬೇಡ್ಕರ್‌ ಭವನ ದುರಸ್ತಿ ಕಾಮಗಾರಿ ಕಳಪೆ; ಆರೋಪ

Date:

ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಕುಟನೂರ ಗ್ರಾಮದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಮುದಾಯ ಭವನದ ದುರಸ್ತಿ ಕಾಮಗಾರಿ ಕಳಪೆ ಮಟ್ಟದಿಂದ ನಡೆದಿದೆ ಎಂದು ಅಂಬೇಡ್ಕರ್ ಸೇನೆ ತಾಲೂಕು ಅಧ್ಯಕ್ಷ ಸಾಗರ ಆರೋಪಿಸಿದ್ದಾರೆ.

ʼಗ್ರಾಮ ಪಂಚಾಯಿತಿಯ 15ನೇ ಹಣಕಾಸು ಯೋಜನೆ ಅಡಿಯಲ್ಲಿ ಈ ಅಂಬೇಡ್ಕರ್‌ ಭವನ ದುರಸ್ತಿ ಕಾರ್ಯ ನಡೆಸಲಾಗಿದೆ. ಆದರೆ ಸರಿಯಾಗಿ ಕಾಮಗಾರಿ ನಡೆಸದೆ ಮನಬಂದಂತೆ ದುರಸ್ತಿಗೊಳಿಸಿ ಸುಳ್ಳು ಬಿಲ್‌ ಸೃಷ್ಟಿಸಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದುʼ ಎಂದು ಎಚ್ಚರಿಕೆ ‌ನೀಡಿದರು.

ಈ ವೇಳೆ ಲಗಮಣ್ಣ ಕೂಟನೂರ, ಸಂತೋಷ ಕೂಟನೂರ, ಕುಮಾರ ಕೂಟನೂರ, ಭಾಗಣ್ಣ ಕೂಟನೂರ, ಕ್ರಷ್ಣ ಕೂಟನೂರ ಮತ್ತು ಗ್ರಾಮದ ಹಿರಿಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...