ಕಲಬುರಗಿ | ಸಾವಳೇಶ್ವರ ಗ್ರಾಮದ ದೇವಸ್ಥಾನದ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿಯೆಂದು ನಮೂದು: ರೈತ ಸಂಘದ ಕರೆಪ್ಪ ಕರಗೊಂಡ

Date:

ವಿಜಯಪುರದಲ್ಲಿ ಹಲವು ರೈತರ ಜಮೀನಿನ ಉತಾರದಲ್ಲಿ ವಕ್ಫ್‌ ಅಸ್ತಿ ಎಂಬುದಾಗಿ ಸೇರಿದ್ದರೆ, ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನ ಹಿಪ್ಪರಗಾ ಹೋಬಳಿ ಸಾವಳೇಶ್ವರ ಗ್ರಾಮದ ದೇವಸ್ಥಾನದ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ಎಂಬುದಾಗಿ ನಮೂದಾಗಿದೆ. ಇದಕ್ಕೆ ಸ್ಥಳೀಯರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಕರ್ನಾಟಕ ರಾಜ್ಯ ರೈತ ಸಂಘ ಕಾರ್ಯಧ್ಯಕ್ಷ ಕರೆಪ್ಪ ಕರಗೊಂಡ ಪತ್ರಿಕೆ ಹೇಳಿಕೆ ನೀಡಿದ್ದು, “ಸಾವಳೇಶ್ವರ ಗ್ರಾಮದ ಸರ್ವೇ ನಂಬರ್ 2 ರಲ್ಲಿ 1.34 ಗುಂಟೆ ಜಾಗವನ್ನು ಹಿಂದೂ ಬೀರದೇವರ ದೇವಸ್ಥಾನನಕ್ಕೆಂದು ಹಲವು ವರ್ಷಗಳಿಂದ ಬಳಸಲಾಗುತ್ತಿದೆ. ಈ ಜಾಗ ತಮ್ಮದೆಂದು ವಾದಿಸಿದ್ದ ವಕ್ಫ್ ಮಂಡಳಿ, ಕಂದಾಯ ಅಧಿಕಾರಿಗಳ ಸಹಾಯದಿಂದ ಪಹಣಿ ಪತ್ರದಲ್ಲಿ ವಕ್ಫ್‌ ಆಸ್ತಿಯೆಂದು ನಮೂದಿಸಿದೆ. ಇದರಿಂದ ಗ್ರಾಮದ ರೈತರಲ್ಲಿ ಗೊಂದಲ ಮತ್ತು ಆಕ್ರೋಶ, ಸೃಷ್ಟಿಯಾಗಿದೆ‌” ಎಂದು ತಿಳಿದರು.

ಪಹಣಿ

“ಸಾವಳೇಶ್ವರ ಗ್ರಾಮದ ಹಿಂದೂ ಸಮುದಾಯಕ್ಕೆ ಒಂದೇ ದೇವಸ್ಥಾನ. ವಕ್ಫ್‌ ಆಸ್ತಿ ಎಂಬುದಾಗಿ ಕಂದಾಯ ದಾಖಲೆಗಳು ಬದಲಾವಣೆಯಾಗಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾವುದೇ ನೋಟಿಸ್‌ ನೀಡದೇ, ಆಕ್ಷೇಪಣೆಗೆ ಕಾಲಾವಕಾಶವನ್ನೂ ನೀಡದೆ, ಹಿಂದೂ ದೇವಸ್ಥಾನದ ಪಹಣಿಯ ಹಕ್ಕಿನ ಕಾಲಂನಲ್ಲಿ ವಕ್ಫ್‌ ಆಸ್ತಿಯೆಂದು ಸೇರಿಸಲಾಗಿದೆ. ಇತ್ತೀಚೆಗೆ ಪಹಣಿ ಪರಿಶೀಲನೆ ಸಂದರ್ಭದಲ್ಲಿ ಇದು ಗ್ರಾಮಸ್ಥರ ಗಮನಕ್ಕೆ ಬಂದಿದೆ” ಎಂದು ತಿಳಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಒಳಮೀಸಲಾತಿ ಜಾರಿಗೆ ಮೂರು ತಿಂಗಳ ಕಾಲಾವಕಾಶ; ರವಿ ಬೆಳಮಗಿ ಖಂಡನೆ

“ಸವಳೇಶ್ವರ ಗ್ರಾಮದ ದೇವಸ್ಥಾನದ ಪಹಣಿಯಲ್ಲಿ ʼವಕ್ಫ್‌ ಆಸ್ತಿʼಯೆಂದು ಸೇರಿರುವುದು, ಗ್ರಾಮದ ದೇವಸ್ಥಾನದ ಭೂಮಿಯಲ್ಲಿ ವಕ್ಫ್‌ ಹೆಸರು ದಾಖಲಾಗಿರುವ ಸಂಗತಿ ಪ್ರಮುಖವಾಗಿ ಪ್ರಸ್ತಾಪವಾಗುವ ಸಾಧ್ಯತೆ ಇದೆ. ಸಾಮಾಜಿಕ ಜಾಲತಾಣಗಳಲ್ಲೂ, ನಾಲ್ಕು ಜನ ಸೇರಿದಲ್ಲಿ ಈ ವಿಷಯ ಚರ್ಚೆಗೆ ಬರುತ್ತಿದೆ” ಎಂದು ಹೇಳಿದರು.

“ಈ ಮಧ್ಯೆ ವಿವಿಧ ಗ್ರಾಮಗಳ ಜನರು ತಮ್ಮ ಸ್ವಂತ ಆಸ್ತಿ, ಊರಿನ ದೇವಸ್ಥಾನದ ಜಾಗದ ಪಹಣಿ ಪತ್ರಗಳಲ್ಲಿ ವಕ್ಫ್‌ ಹೆಸರು ನುಸುಳಿದೆಯೆ ಎಂದು ಪರಿಶೀಲಿಸಲು ಮುಂದಾಗಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...