ಕಲಬುರಗಿ | ಎಸ್‌ಬಿಐ ಎಟಿಎಂ ದರೋಡೆ ಪ್ರಕರಣ; ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧನ

Date:

ಕಲಬುರಗಿ ನಗರದ ರಿಂಗ್ ರಸ್ತೆಯ ಎಸ್‌ಬಿಐ ಎಟಿಎಂ ದರೋಡೆ ಮಾಡಿದ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಸಬ್‌ ಅರ್ಬನ್ ಠಾಣೆಯ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಹರಿಯಾಣ ಮೂಲದ ದರೋಡೆ ಪ್ರಕರಣದ ಆರೋಪಿಗಳಾದ ತಸ್ಲೀಮ್(28) ಮತ್ತು ಷರೀಫ್(22) ಗಾಯಗೊಂಡವರು. ಜಿಮ್ಸ್ ಆವರಣದ ಟ್ರಾಮಾ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಲಬುರಗಿಯ ಬೇಲೂರ ಕ್ರಾಸ್ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಬೆಳಿಗ್ಗೆ ಆರೋಪಿಗಳನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದರು. ಕಾನ್‌ಸ್ಟೆಬಲ್‌ಗಳಾದ ಮಂಜು, ಫಿರೋಜ್ ಮತ್ತು ರಾಜಕುಮಾರ್ ಅವರ ಮೇಲೆ ದಾಳಿ ಮಾಡಿದ್ದರೆಂದು ಪೊಲೀಸ್ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶರಣಾಗುವಂತೆ ಸೂಚಿಸಿದರೂ ಕೂಡ ಆರೋಪಿಗಳು ದಾಳಿ ನಡೆಸುತ್ತಿದ್ದರು. ಅನಿವಾರ್ಯವಾಗಿ ಆತ್ಮರಕ್ಷಣೆಗಾಗಿ ಸಬ್‌ ಅರ್ಬನ್ ಠಾಣೆಯ ಸಿಪಿಐ ಸಂತೋಷ್ ತಟ್ಟೆಪಲ್ಲಿ ಹಾಗೂ ಪಿಎಸ್‌ಐ ಬಸವರಾಜ ಅವರು ತಸ್ಲೀಮ್ ಮತ್ತು ಷರೀಫ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಹಲ್ಲೆಯಿಂದ ಗಾಯಗೊಂಡ ಕಾನ್‌ಸ್ಟೆಬಲ್‌ಗಳು ಹಾಗೂ ಗುಂಡೇಟು ತಿಂದ ಆರೋಪಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆಯೆಂದು ಹೇಳಿವೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಉಗ್ರರ ದಾಳಿಗೆ ಮೃತರಾದ ಮಂಜುನಾಥ್ ಮನೆಗೆ ಎಚ್ ಆರ್ ಬಸವರಾಜಪ್ಪ ಭೇಟಿ ಸಾಂತ್ವನ

ಬಂಧಿತ ದರೋಡೆಕೋರರಾದ ತಸ್ಲೀಮ್ ವಿರುದ್ಧ 8 ಹಾಗೂ ಷರೀಫ್ ವಿರುದ್ಧ 3 ಪ್ರಕರಣಗಳು ಕರ್ನಾಟಕ ಸೇರಿದಂತೆ ಬೇರೆ ರಾಜ್ಯಗಳಲ್ಲಿ ಎಟಿಎಂ ದರೋಡೆ ಸಂಬಂಧ ಪ್ರಕರಣಗಳು ದಾಖಲಾಗಿವೆ.

ಕಲಬುರಗಿ ನಗರದ ರಿಂಗ್ ರಸ್ತೆಯ ರಾಮನಗರದಲ್ಲಿ ಏಪ್ರಿಲ್ 9ರಂದು ಇದೇ ಆರೋಪಿಗಳು ಎಸ್‌ಬಿಐ ಎಟಿಎಂ ಕೇಂದ್ರಕ್ಕೆ ನುಗ್ಗಿ, ಸಿಸಿಟಿವಿ ಕ್ಯಾಮೆರಾಗಳ ಮೇಲೆ ಕಪ್ಪು ಬಣ್ಣದ ಸ್ಪ್ರೇ ಎರಚಿ, ಎಟಿಎಂ ಯಂತ್ರವನ್ನು ಧ್ವಂಸಮಾಡಿ ₹18 ಲಕ್ಷ ದರೋಡೆ ಮಾಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...