ಕಲಬುರಗಿ | ₹1 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಡಿಎ

Date:

ರಸ್ತೆ ಕಾಮಗಾರಿ ಪೂರ್ಣಗೊಳಿಸಿದ ಪ್ರಮಾಣ ಪತ್ರ ನೀಡಲು ₹1 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದಡಿ ಕಾಳಗಿ ತಹಶೀಲ್ದಾರ್ ಕಚೇರಿಯ ದ್ವಿತೀಯ ದರ್ಜೆಯ ಸಹಾಯಕ (ಎಸ್‌ಡಿಎ) ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಕಾಳಗಿ ತಹಶೀಲ್ದಾರ್ ಕಚೇರಿಯ ದೇವಸ್ಥಾನ ಶಾಖೆಯ ಎಸ್‌ಡಿಎ ಶರಣಪ್ಪ ಲಂಚ ಪಡೆದ ಆರೋಪಿ. ಕಲಬುರಗಿಯ ಗುತ್ತಿಗೆದಾರ ಅಣಿವೀರಯ್ಯ ಹಿರೇಮಠ ಅವರು ನೀಡಿದ ದೂರಿನ ಅನ್ವಯ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಕಾಳಗಿಯ ಅಣಿವೀರಭದ್ರೇಶ್ವರ ದೇವಸ್ಥಾನ ಸಮೀಪದ ಸಿ.ಸಿ ರಸ್ತೆಯ ಕಾಮಗಾರಿಯನ್ನು ಪೂರ್ಣಗೊಳಿಸಿದ್ದರು. ಬಿಲ್‌ ಪಾವತಿಗೆ ಕಾಮಗಾರಿ ಪೂರ್ಣಗೊಳಿಸಿದ ಸಂಬಂಧ ದೇವಸ್ಥಾನ ಶಾಖೆಯಿಂದ ಪ್ರಮಾಣ ಪತ್ರದ ಅವಶ್ಯವಿತ್ತು. ಪ್ರಮಾಣ ಪತ್ರವನ್ನು ನೀಡದೆ ಅಣಿವೀರಯ್ಯ ಅವರನ್ನು ಶರಣಪ್ಪ ಸಾಕಷ್ಟು ಬಾರಿ ಕಚೇರಿಗೆ ಅಲೆದಾಡಿಸಿದ್ದರು ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

₹1 ಲಕ್ಷ ಲಂಚ ಕೊಟ್ಟರೆ ಪ್ರಮಾಣ ಪತ್ರಕ್ಕೆ ಸಹಿ ಮಾಡಿ ಕೊಡುವುದಾಗಿ ಬೇಡಿಕೆ ಇಟ್ಟಿದ್ದರು. ಅಣಿವೀರಯ್ಯ ಅವರು ಮಂಗಳವಾರ ಸಂಜೆ ₹1 ಲಕ್ಷದೊಂದಿಗೆ ಬಸ್‌ನಲ್ಲಿ ಬಂದು ಕಲಬುರಗಿಯ ಖರ್ಗೆ ಪೆಟ್ರೋಲ್‌ ಬಂಕ್‌ ಸಮೀಪದಲ್ಲಿ ಇಳಿದರು. ಅಲ್ಲಿಯೇ ನಿಂತಿದ್ದ ಶರಣಪ್ಪ ಲಂಚದ ಹಣ ಪಡೆಯುತ್ತಿದ್ದಂತೆ ದಾಳಿ ಮಾಡಿ ವಶಕ್ಕೆ ಪಡೆಯಲಾಗಿದೆ. ಆರೋಪಿಯ ವಿಚಾರಣೆಯೂ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಲೋಕಾಯುಕ್ತ ಎಸ್ಪಿ ಬಿ.ಕೆ.ಉಮೇಶ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿಗಳಾದ ಗೀತಾ ಬೇನಾಳ, ಶೀಲವಂತ ಹೊಸಮನಿ ನೇತೃತ್ವದಲ್ಲಿ ಇನ್‌ಸ್ಪೆಕ್ಟರ್‌ಗಳಾದ ರಾಜಶೇಖರ ಹಳಗೋಧಿ, ಅರುಣಕುಮಾರ್, ಸಿಬ್ಬಂದಿ ಮಲ್ಲಿನಾಥ, ಪ್ರಮೋದ, ಬಸವರಾಜ, ರಾಣೋಜಿ, ಪವಾಡಪ್ಪ ಅವರಿದ್ದ ತಂಡ ದಾಳಿ ನಡೆಸಿದೆ.

ಇದನ್ನೂ ಓದಿ : ಕೊಪ್ಪಳ ಜಿಲ್ಲಾಧಿಕಾರಿ ವರ್ಗಾವಣೆ : ಸುರೇಶ ಹಿಟ್ನಾಳ್‌ ನೂತನ ಡಿಸಿ; ಕೆಕೆಆರ್‌ಡಿಬಿ ಕಾರ್ಯದರ್ಶಿಯಾಗಿ ನಳಿನಿ ಅತುಲ್‌ ನೇಮಕ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...