‘ಪ್ರವಾದಿ ಮುಹಮ್ಮದ್ ಪೈಗಂಬರ್ ರವರ ಜನ್ಮ ದಿನಾಚರಣೆ ಪ್ರಯುಕ್ತ ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಸೆ.3ರಿಂದ ಸೆ.14 ರವರೆಗೆ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘಟನೆಯ ಕಲಬುರಗಿಯ ಮುಖಂಡರಾದ ಅಬ್ದುಲ್ ಖಾದರ್ ತಿಳಿಸಿದರು.
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಪ್ರವಾದಿ ಮುಹಮ್ಮದ್ ಅವರ ಜನ್ಮದಿನಾಚರಣೆ ಪ್ರಯುಕ್ತ ನಗರದ ಸಂತ್ರಾಸ್ ವಾಡಿಯ ಹಿದಾಯತ್ ಸೆಂಟರ್‌ನಲ್ಲಿ ಪ್ರವಾದಿ ಮಹಮ್ಮದ್ ಅವರ ಜೀವನ ಮತ್ತು ಸಾಧನೆಯ ವಿಷಯ ಕುರಿತು ಪ್ರಬಂಧ ಸ್ಪರ್ಧೆ ಸೇರಿದಂತೆ ಮುಂತಾದ ಕಾರ್ಯಕ್ರಮಗಳು ಏರ್ಪಡಿಸಲಾಗಿದೆ’ ಎಂದರು.
‘ಕಾರ್ಯಾಗಾರದಲ್ಲಿ ಪ್ರವಾದಿ ಮಹಮ್ಮದ್ ಅವರ ಜೀವನ ಮತ್ತು ಸಾಧನೆ ಒಳಗೊಂಡ ಪುಸ್ತಕ ಬಿಡುಗಡೆ ಮಾಡಲಾಗುವುದು. ಪ್ರವಾದಿ ಮುಹಮ್ಮದ್ ಅವರ ನ್ಯಾಯ ಮತ್ತು ಮಾನವೀಯ ಸಂದೇಶಗಳನ್ನು ನಾಡಿನ ಜನತೆಗೆ ತಲುಪಿಸುವುದು ಅಭಿಯಾನದ ಉದ್ದೇಶವಾಗಿದೆ’ ಎಂದು ತಿಳಿಸಿದರು.
ದೇಶದಲ್ಲಿ ಶಾಂತಿ, ಸೌಹಾರ್ದ, ಸಹೋದರತೆ, ಸಹಾನುಭೂತಿ ಅಗತ್ಯವಿದೆ. ಈ ನಿಟ್ಟಿನಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ಸೆ. 3- 14 | ಜಮಾಅತೆ ಇಸ್ಲಾಮಿ ಹಿಂದ್‌ನಿಂದ ರಾಜ್ಯಾದ್ಯಂತ ‘ನ್ಯಾಯದ ಹರಿಕಾರ, ಪೈಗಂಬರ್ ಮುಹಮ್ಮದ್’ ಅಭಿಯಾನ
ಸುದ್ದಿಗೋಷ್ಠಿಯಲ್ಲಿ ಜಾಕೀರ್ ಹುಸೇನ್, ಮಝರುದ್ದೀನ್, ಮುಬೀನ್ ಅಹ್ಮದ್ ಉಪಸ್ಥಿತರಿದ್ದರು.





