ಕಲಬುರಗಿಯ ಹಡಗಿಲ ಹಾರುತಿ ಬಳಿಯ ಅಫಜಲಪುರ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ವೃದ್ಧ ದಂಪತಿ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಅಫಜಲಪುರದಿಂದ ಕಲಬುರಗಿಯತ್ತ ಬರುತ್ತಿದ್ದ ಜೀಪ್ ಹಾಗೂ ಕೆಕೆಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬಳಿಕ ಅಪಘಾತಕ್ಕೀಡಾದ ಬಸ್‌ಗೆ ಹಿಂದಿನಿಂದ ಬಂದ ಮತ್ತೊಂದು ಬಸ್ ಡಿಕ್ಕಿ ಹೊಡೆದು ದುರಂತ ಮತ್ತಷ್ಟು ಗಂಭೀರವಾಗಿದೆ. ಈ ಅಪಘಾತದಿಂದ ಜೀಪ್ ಸಂಪೂರ್ಣ ಜಖಂಗೊಂಡಿದೆ.
ಅಪಘಾತದಲ್ಲಿ ತೆಲ್ಲೋಣಗಿ ಗ್ರಾಮದ ಚಂದ್ರಕಾಂತ ಶಿವರಾಯ (80), ಸುಲೋಚನಾ ಚಂದ್ರಕಾಂತ (70), ಮಿಟ್ಟುಸಾಬ್ ಪಟೇಲ್ (35) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜೀಪ್‌ನಲ್ಲಿ ಪ್ರಯಾಣಿಸುತ್ತಿದ್ದ ಶ್ರೀಶೈಲ್ ಭೂತಾಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಪ್ರಯಾಣಿಕರಾದ ಘತ್ತರಗಾದ ವಿಜಯಲಕ್ಷ್ಮಿ ಹಾಗೂ ಬಂದರವಾಡದ ಗುರುದೇವಿ ಗಾಯಗೊಂಡಿದ್ದಾರೆ.
ಇದನ್ನು ಓದಿದ್ದೀರಾ? ಕಲಬುರಗಿ | ಆನಂದ್ ಬಾಬು ಮನೋಹರ್‌ಗೆ ರಾಷ್ಟ್ರೀಯ ಪ್ರಶಸ್ತಿ
ಘಟನೆಯ ಸ್ಥಳಕ್ಕೆ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ., ಸಂಚಾರ ಎಸಿಪಿ ಸುಧಾ ಆದಿ ಮತ್ತು ಸಂಚಾರ ಠಾಣೆ-1ರ ಇನ್‌ಸ್ಪೆಕ್ಟರ್ ಶಕೀಲ್ ಅಂಗಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.





