ಕಲಬುರಗಿ | ಬಾಲಕಿಗೆ ಲೈಂಗಿಕ ದೌರ್ಜನ್ಯ : ಆರೋಪಿಗೆ 35 ವರ್ಷ ಜೈಲು ಶಿಕ್ಷೆ

Date:

ಬಾಲಕಿಗೆ ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 35 ವರ್ಷ ಜೈಲು ಶಿಕ್ಷೆ ವಿಧಿಸಿ ಕಲಬುರಗಿ ಜಿಲ್ಲಾ ಮತ್ತು ಸತ್ರ (ವಿಶೇಷ ಪೋಕ್ಸೊ) ನ್ಯಾಯಾಲಯ ತೀರ್ಪು ನೀಡಿದೆ.

ಮಹಾರಾಷ್ಟ್ರದ ಠಾಣಾ ಜಿಲ್ಲೆಯ ಭಿವಂಡಿಯ ಶಾಂತಿನಗರ ನಿವಾಸಿ ಬಟ್ಟೆ ವ್ಯಾಪಾರಿ ಮಹ್ಮದ್ ಗೌಸ್ ಮಹಿಮೂದ್ ಶೇಖ್‌ ಎಂಬಾತನಿಗೆ ಗೆ 35 ವರ್ಷ ಜೈಲು ಹಾಗೂ ₹20 ಸಾವಿರ ದಂಡ ವಿಧಿಸಿ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಆದೇಶ ನೀಡಿದ್ದಾರೆ. ನೊಂದ ಬಾಲಕಿಗೆ ₹5 ಲಕ್ಷ ಕಾನೂನು ಸೇವಾ ಪ್ರಾಧಿಕಾರದಿಂದ ಪರಿಹಾರವಾಗಿ ಒಂದು ತಿಂಗಳು ಒಳಗೆ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.ಸರಕಾರದ ಪರ ವಿಶೇಷ ಸರಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ ವಾದಿಸಿದ್ದಾರೆ.

ಕಲಬುರಗಿ ನಗರದ ಬಡಾವಣೆಯೊಂದರ ನಿವಾಸಿಯಾಗಿದ್ದ ಅಪ್ರಾಪ್ತ ಬಾಲಕಿಯನ್ನು ಬಟ್ಟೆ ವ್ಯಾಪಾರಿ ಮಹ್ಮದ್ ಗೌಸ್ ಆಗಾಗ ಭೇಟಿ ಮಾಡುತ್ತಿದ್ದ. ನನ್ನೊಂದಿಗೆ ಬಂದರೆ ನನ್ನ ಹೆಂಡತಿಗೆ ವಿಚ್ಛೇಧನ ನೀಡುತ್ತೇನೆ ಎಂದು ನಂಬಿಸಿ ಮೂರ್ನಾಲ್ಕು ಬಾರಿ ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮುಂದೆ 2023ರ ಅ.16ರಂದು ದೂರವಾಣಿ ಮುಖಾಂತರ ತಮ್ಮೂರಿಗೆ ಬರುವಂತೆ ಹೇಳಿದ್ದಾನೆ. ನಂತರ ಬಾಲಕಿಯನ್ನು ಮನೆಯಲ್ಲಿಟ್ಟು ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಕುರಿತು ದೂರು ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೋದಿ ಪಾಲಿಗೆ ಬಿಸಿ ತುಪ್ಪವಾದ ಅದಾನಿ

ಈ ಕುರಿತು ವಿಚಾರಣೆ ನಡೆಸಿದ ಇನ್ಸ್‍ಪೆಕ್ಟರ್ ಕುಬೇರ್ ರಾಯಮಾನೆ ದೋಷಾರೋಪಣೆ ಪಟ್ಟಿ ಸಲ್ಲಿಕೆ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...