ಕಲಬುರಗಿ | ಕರ್ನಾಟಕ ಕಾನೂನು ಮಹಾವಿದ್ಯಾಲಯದಲ್ಲಿ ʻಸಾಮಾಜಿಕ ನ್ಯಾಯʼ ದಿನಾಚರಣೆ

Date:

ಸಾಮಾಜಿಕ ನ್ಯಾಯಕ್ಕಾಗಿ ಕಾನೂನು ಸೇವಾ ಪ್ರಾಧಿಕಾರ ನೊಂದ ಜನತೆಯ ಮನೆಬಾಗಿಲಿಗೆ ನೀಡುವ ನಿಟ್ಟಿನಲ್ಲಿ ಉಚಿತವಾಗಿ ಪರಿಣಿತ ವಕೀಲರನ್ನು ನೇಮಿಸುವುದರೊಂದಿಗೆ ಹಾಗೂ ಉಚಿತ ಕಾನೂನು ಅರಿವು–ನೆರವು ಕಾರ್ಯಕ್ರಮಗಳನ್ನು ಗ್ರಾಮ ಮಟ್ಟದಿಂದ ದೊಡ್ಡ ದೊಡ್ಡ ನಗರಗಳವರೆಗೆ ಆಯೋಜನೆ ಮಾಡುತ್ತಾ ಶ್ರಮಿಸುತ್ತಿದ್ದು, ನೊಂದವರು ಕಾನೂನು ಸೇವೆ ಪ್ರಾಧಿಕಾರದಿಂದ ಉಚಿತ ಸೇವೆಯನ್ನು ಪಡೆಯಬೇಕು ಎಂದು ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆಯವರು ಕೋರಿದರು.

ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಕರ್ನಾಟಕ ಕಾನೂನು ಮಹಾವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ಕರ್ನಾಟಕ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ʻಸಾಮಾಜಿಕ ನ್ಯಾಯ ದಿನಾಚರಣೆʼ ಕಾರ್ಯಕ್ರಮದಲ್ಲಿ ಮಾತನಾಡಿದರು.

ಉಪನ್ಯಾಸಕರಾಗಿ ಆಗಮಿಸಿದ ನ್ಯಾಯವಾದಿ ಹಾಗೂ ಮಹಾತ್ಮಗಾಂಧಿ ಗ್ರಾಹಕರ ಹಿತರಕ್ಷಣೆ ವೇದಿಕೆಯ ಕಾರ್ಯದರ್ಶಿ ವೈಜನಾಥ ಎಸ್‌ ಝಳಕಿ ಯವರು ಸಾಮಾಜಿಕ ನ್ಯಾಯ ದಿನಾಚರಣೆ ಕುರಿತು ವಿಶೇಷವಾದ ಉಪನ್ಯಾಸ ನೀಡುತ್ತಾ, “ಸಮಾಜದ ಕಟ್ಟಕಡೆಯ ವ್ಯಕ್ತಿಗೆ ನ್ಯಾಯ ಒದಗಿಸಿಕೊಡುವಲ್ಲಿ ನ್ಯಾಯಾಲಯಗಳ, ನ್ಯಾಯವಾದಿಗಳ ಹಾಗೂ ಕಾನೂನು ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿದ್ದು, ನೊಂದವರಿಗೆ ನ್ಯಾಯ ಒದಗಿಸಿಕೊಡುವಲ್ಲಿ ಹಾಗೂ ಸಂವಿಧಾನದ ಆಶೋತ್ತರಗಳನ್ನು ಈಡೇರಿಸುವಲ್ಲಿ ಕಾನೂನು ವಿದ್ಯಾರ್ಥಿಗಳು ಹೆಚ್ಚಾಗಿ ಶ್ರಮಿಸಬೇಕಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಾಲಯಗಳು ವಿಶೇಷ ಕಾಯ್ದೆಗಳಡಿ ನೊಂದ ಜನತೆಗೆ ಒದಗಿಸಿಕೊಟ್ಟ ಸಾಮಾಜಿಕ ನ್ಯಾಯದ ಕುರಿತು ಐತಿಹಾಸಿಕ ತೀರ್ಪುಗಳನ್ನು ಉಲ್ಲೇಖಿಸುತ್ತಾ ವಿವರವಾಗಿ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕಾನೂನು ಮಹಾವಿದ್ಯಾಲಯ ಕಾಲೇಜಿನ ಪ್ರಾಂಶುಪಾಲ ಜೆ ಜೋಸೆಫ್‌ ಅವರು ವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಮಾ.9ರಂದು ಲೋಕ ಅದಾಲತ್:‌ ನ್ಯಾ. ನೇರಳೆ ವೀರಭದ್ರಯ್ಯ ಭವಾನಿ

ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿ ವರ್ಗದವರಾದ ಎಚ್ ಕೆ ಕುನ್ನೂರ, ಜಾವೇದ್‌ ಇಶ್ರತ್‌, ಈರಮ್ಮ ಎಚ್‌ ಔರಾದ್‌, ಆಯಶಾ ಜಬೀನ್‌, ಅನುರಾಧಾ, ಶೃತಿ ಕಾಂದೆ, ರಾಜು ಹಾಗೂ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...