ಕಲಬುರಗಿ | ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗಿರೀಶ್ ರಂಜೋಳಕರ್ ಅಮಾನತಿಗೆ ಆಗ್ರಹ

Date:

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗಿರೀಶ್ ರಂಜೋಳಕರ್ ಮತ್ತು ಸ್ವಿಸ್ ಮ್ಯಾನ್ ಪವಾರ ಏಜೆನ್ಸಿ ಬಗ್ಗೆ ತನಿಖೆ ನಡೆಸಿ ಸೇವೆಯಿಂದ ಅಮಾನತುಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಕಲಬುರಗಿ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಿದರು.

ಕಲಬುರಗಿ ನಗರದ ಸರ್ದಾರ್ ವಲಾಬ್ ಬಾಯಿ ಪಟೇಲ್ ವೃತ್ತದಿಂದ ಸಮಾಜ ಕಲ್ಯಾಣ ಇಲಾಖೆವರೆಗೆ ಬೃಹತ್ ಪ್ರಮಾಣದ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದು, “ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿರುವ ವಸತಿ ನಿಲಯಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಆಗ್ರಹಿಸಿದರು.

“ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಗಿರೀಶ ರಂಜೋಳಕರ್ ಮತ್ತು ಸ್ವಿಸ್ಟ್ ಮ್ಯಾನ್‌ ಪವರ್‌ ಏಜೆನ್ಸಿಯವರು ನಡೆಸಿದ ಅವ್ಯವಹಾರವನ್ನು ತನಿಖೆ ನಡೆಸಿ ಸೇವೆಯಿಂದ ಅಮಾನತುಗೊಳಿಸಬೇಕು. ಸಮಾಜ ಕಲ್ಯಾಣ ಇಲಾಖೆಯ ನೌಕರರು ಬ್ಯಾಂಕ್ ಸ್ಟೇಟ್‌ಮೆಂಟ್‌ ಸಮೇತ ಕೊಟ್ಟ ಅರ್ಜಿಗಳನ್ನು ತನಿಖೆ ನಡೆಸಿ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿಂದುಳಿದ ವರ್ಗಗಳ ವಸತಿನಿಲಯ ನೌಕರರ 5-6 ತಿಂಗಳ ಬಾಕಿ ವೇತನ ಪಾವತಿಸಬೇಕು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ನೌಕರರ 2-3 ತಿಂಗಳ ಬಾಕಿ ವೇತನ ಪಾವತಿಸಬೇಕು. ಕ್ರೈಸ್ ವಸತಿ ನಿಲಯಗಳ ನೌಕರರಿಗೆ ವೇತನ ಪಾವತಿಸಲು ಸ್ವಿಸ್ ಮ್ಯಾನ್ ಪವರ್‌ ಏಜೆನ್ಸಿಗೆ ನೀಡಿದ ಆದೇಶ ಪಡೆದು ಕೂಡಲೇ 3 ತಿಂಗಳ ವೇತನವನ್ನು ಇಲಾಖೆಯಿಂದಲೇ ಪಾವತಿಸಬೇಕು. ಈವರೆಗೆ ಸೇವೆ ಸಲ್ಲಿಸಿದ ಮ್ಯಾನ್ ಪವರ್‌ ಏಜೆನ್ಸಿಗಳಿಂದ ನೌಕರರ ನೇಮಕಾತಿ ಆದೇಶ ಪತ್ರಗಳನ್ನು ಕೊಡಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಮುಡಾ ಹಗರಣದ ಉನ್ನತ ಮಟ್ಟದ ತನಿಖೆಗೆ ಬಿಜೆಪಿ ಆಗ್ರಹ

ಜಿಲ್ಲಾ ಕಾರ್ಯದರ್ಶಿ ಮಲ್ಲಮ್ಮ ಕೋಡ್ಲಿ, ಜಂಟಿ ಕಾರ್ಯದರ್ಶಿಗಳಾದ ಕಾಶೀನಾಥ್ ಬಂಡಿ,
ಸಿದ್ದಾರಾಮ ಹರವಾಳ, ಉಪಾಧ್ಯಕ್ಷ ಮೇಘರಾಜ ಕಠಾರೆ, ಚಿಂಚೋಳಿ ಅಧ್ಯಕ್ಷೆ ಜಗದೇವಿ ಚಂದನಕೇರಾ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...