ಕಲಬುರಗಿ | ವಿದ್ಯುತ್ ದರ ಹೆಚ್ಚಳ ಹಿಂಪಡೆಯಲು ಆಗ್ರಹ

Date:

ಅವೈಜ್ಞಾನಿಕ ಹೊಸ ಸ್ವಾಬ ಪದ್ದತಿಯನ್ನು ರದ್ದು ಪಡಿಸಲು ಹಾಗೂ ಪ್ರತಿ ಯೂನಿಟಿಗೆ 70 ಪೈಸೆ ವಿದ್ಯುತ್‌ ದರ ಹೆಚ್ಚಿಸಿರುವುದನ್ನು ಹಿಂಪಡೆಯುವಂತೆ ಆಗ್ರಹಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್) ಕಲಬುರಗಿ ಜಿಲ್ಲಾ ಸಮಿತಿ ವತಿಯಿಂದ ಗುಲ್ಬರ್ಗಾ ವಿದ್ಯುತ್ ಸರಬರಾಜು ಮಂಡಳಿ ವ್ಯವಸ್ಥಾಪಕ ನಿರ್ದೇಶಕರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

“ಹಗಲು ದರೋಡೆಯ ಹೊಸ ಸ್ವಾಬ ಪದ್ಧತಿ ಹಾಗೂ ₹7.15 ರಷ್ಟು ಅವೈಜ್ಞಾನಿಕ ದರ ಹೆಚ್ಚಿಸಿರುವುದರಿಂದ ಜನಸಾಮಾನ್ಯರು ಬಹಳ ಆರ್ಥಿಕ ಹೊರೆಯನ್ನು ಹೊರುವಂತಾಗಿದೆ. ಹಳೆಯ ಸ್ವಾಬ ಪ್ರಕಾರ ಮೊದಲ 50 ಯೂನಿಟ್ ಬಳಕೆ ಮಾಡುವವರಿಗೆ ₹4.10ರಷ್ಟು ನಿಗದಿ ಮಾಡಲಾಗಿತ್ತು. ಬಳಿಕ 51 ರಿಂದ 100 ಯೂನಿಟ್‌ಗೆ ₹5.60, 101 ರಿಂದ 157 ಯೂನಿಟ್‌ವರೆಗೆ ಹಾಗೂ 157 ಯೂನಿಟ್‌ಗಿಂತ ಹೆಚ್ಚು ಬಳಸಿದರೆ ₹8.20 ಇತ್ತು” ಎಂದು ತಿಳಿಸಿದ್ದಾರೆ.

“ಈಗ ಈ ನಾಲ್ಕು ಮಾನದಂಡಗಳನ್ನು ರದ್ದುಗೊಳಿಸಿ ಕೇವಲ ಎರಡೇ ಮಾನದಂಡಗಳನ್ನು ಮಾಡಲಾಗಿದೆ. ಹೊಸ ಮಾನದಂಡ ಪ್ರಕಾರ ಮೊದಲ 100 ಯೂನಿಟ್‌ವರೆಗೂ ₹4.75 ಹಾಗೂ 100 ಯೂನಿಟ್‌ಗಿಂತ ಹೆಚ್ಚು ಬಳಸಿದರೆ ಅಂತಹವರಿಗೆ ₹7.00 ನಿಗದಿ ಪಡಿಸಿದ್ದಾರೆ. ಒಂದು ವೇಳೆ ಒಬ್ಬ ಗ್ರಾಹಕ 101 ಯೂನಿಟ್ ಬಳಸಿದರೂ ಅವರು ಒಟ್ಟು ಯೂನಿಟ್‌ಗೆ ₹7.00 ರಂತೆ ಪಾವತಿಸಬೇಕು. ಇದು ಜನರಿಗೆ ಬಹಳ ಹೊರೆಯಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗವು ಏಪ್ರಿಲ್ 1 ರಿಂದಲೇ ಜಾರಿಯಾಗುವಂತೆ ಪ್ರತಿ ಯೂನಿಟ್‌ಗೆ 70 ಪೈಸೆ ದರ ಹೆಚ್ಚಿಸಿರುವುದು ಹಾಗೂ ವಿದ್ಯುತ್ ಬಳಕೆಯ ನಿಗದಿತ ಶುಲ್ಕವನ್ನು ₹50 ಇದ್ದದ್ದನ್ನು ₹70ಕ್ಕೆ ಹೆಚ್ಚಿಸಿರುವುದನ್ನು ಸೋಷಲಿಸ್ಟ್ ಯೂನಿಟಿ ಸೆಂಟರ್‌ ಆಫ್ ಇಂಡಿಯಾ (ಕಮ್ಯುನಿಸ್ಟ್) ಕಲಬುರಗಿ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ.

“ಕಾರ್ಮಿಕರು, ರೈತರು, ಮಧ್ಯಮ ವರ್ಗದವರು ಸೇರಿದಂತೆ ಎಲ್ಲ ಜನಸಾಮಾನ್ಯರು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಈಗಾಗಲೇ ತತ್ತರಿಸುತ್ತಿದ್ದು, ಈ ವಿದ್ಯುತ್ ದರ ಏರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ. ಒಂದು ಕಡೆ ಜನಸಾಮಾನ್ಯರಿಗೆ 200 ಯೂನಿಟ್‌ವರೆಗೂ ಉಚಿತ ಎಂದು ಹೇಳಿ ಇನ್ನೊಂದೆಡೆ ವಿದ್ಯುತ್ ದರ ಏರಿಸಿರುವುದು ಇಬ್ಬಗೆ ನೀತಿಯಾಗಿದೆ. ಸಣ್ಣ ಹಾಗೂ ಮಧ್ಯಮ ಕೈಗಾರಿಕಾ ವಲಯ ಮತ್ತು ಅಂಗಡಿಗಳನ್ನು ಹೊಂದಿದವರಿಗೆ ಇದು ನುಂಗಲಾರದ ತುತ್ತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಎಲ್ಲ ಜನರಿಗೂ ಅವಶ್ಯವಾಗಿ ಬೇಕಾಗಿರುವ ವಿದ್ಯುತ್ ಶಕ್ತಿಯೂ ಈಗ ಜನರ ಜೀವನಾವಶ್ಯಕತೆಗಳಲ್ಲಿ ಒಂದಾಗಿದೆ. ಇದರ ಬೆಲೆ ಏರಿಕೆ ಜನರ ಮೇಲೆ ಹೊರೆಯಾಗಿದೆ. ನೂತನ ರಾಜ್ಯ ಸರ್ಕಾರವು ಇದರ ಬಗ್ಗೆ ಮೌನವಾಗಿದ್ದು, ಇದು ನಮ್ಮ ಸರ್ಕಾರದ ನಿರ್ಣಯವಲ್ಲ ಎಂದು ನೆಪ ಹೇಳುತ್ತಿರುವುದು ಸರಿಯಲ್ಲ. ಹಳೆಯ ಜನವಿರೋಧಿ ನೀತಿಗಳನ್ನು ಪರಿಷ್ಕರಿಸುತ್ತಿರುವ ತಮ್ಮ ಸರ್ಕಾರವು ವಿದ್ಯುತ್ ದರ ಏರಿಕೆ ಏಕೆ ಪರಿಷ್ಕರಿಸಬಾರದು?” ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಗೃಹಜ್ಯೋತಿ’ | ನೋಂದಣಿಗೆ ʼಆಧಾರ್‌ʼ ಸಾಕು ಎಂದು ಗೊಂದಲಗಳಿಗೆ ತೆರೆ ಎಳೆದ ಇಂಧನ ಇಲಾಖೆ

“ವಿದ್ಯುತ್ ದರ ಏರಿಕೆ ಪರಿಷ್ಕರಣೆ ವಿಷಯವನ್ನು ಕೂಡಲೇ ಸಚಿವ ಸಂಪುಟದಲ್ಲಿ ಪ್ರಸ್ತಾಪಿಸಿ ಹೊಸ ಸ್ವಾಬ ಪದ್ದತಿಯನ್ನು ಕೈಬಿಡಬೇಕು. ಹಾಗೂ ವಿದ್ಯುತ್‌ ದರ ಏರಿಕೆಯನ್ನು ಹಿಂಪಡೆಯಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಎಚ್ ಎ ದಿವಾಕರ್, ಎಸ್‌ಯುಸಿಐ(ಸಿ) ವಿ ನಾಗಮ್ಮಾಳ, ರಾಮಣ್ಣ ಎಸ್, ಇಬ್ರಾಹಿಂಪೂರ, ಗಣಪತರಾವ ಕೆ ಮಾನೆ, ಎಸ್ ಎಂ ಶರ್ಮಾ, ವಿ ಜಿ ದೇಸಾಯಿ, ಮಹೇಶ ಎಸ್ ಬಿ, ಜಗನ್ನಾಥ ಎಸ್ ಎಚ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...