ಕಲಬುರಗಿ | ವಸತಿನಿಲಯಗಳಲ್ಲಿ ಸಿಬ್ಬಂದಿ ಕಡಿತ; ಸರ್ಕಾರದ ಆದೇಶ ಹಿಂಪಡೆಯುವಂತೆ ಆಗ್ರಹ

Date:

ವಸತಿನಿಲಯಗಳಲ್ಲಿ ಸಿಬ್ಬಂದಿ ಕಡಿತಗೊಳಿಸಿರುವ ಸರ್ಕಾರದ ನೀತಿ ವಿರೋಧಿಸಿ ಮತ್ತು ಬಾಕಿ ವೇತನ ಪಾವತಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ವಸತಿನಿಲಯ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಕಲಬುರಗಿ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.

ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ ಮಾತನಾಡಿ, “ಕರ್ನಾಟಕ ರಾಜ್ಯದಲ್ಲಿ ಸರ್ಕಾರದ ವಸತಿ ನಿಲಯಗಳು ಪ್ರಾರಂಭವಾದಾಗಿನಿಂದ 100‌ ಮಂದಿ ವಿದ್ಯಾರ್ಥಿಗಳಿರುವ ವಸತಿ ನಿಲಯಗಳಿಗೆ 5 ಮಂದಿ ಅಡುಗೆಗೆ, ಸ್ವಚ್ಛತಾ ಸಿಬ್ಬಂದಿ ನೇಮಿಸಲಾಗಿತ್ತು. ಆದರೆ ಈಗ ವಸತಿನಿಲಯಗಳಿಗೆ ರೊಟ್ಟಿ ಮಾಡುವ ಯಂತ್ರಗಳನ್ನು ಕೊಡುವ ನೆಪದಲ್ಲಿ 4 ಮಂದಿ ಸಿಬ್ಬಂದಿಗಳು ಇರಬೇಕೆಂಬ ಆದೇಶ ಹೊರಡಿಸಲಾಗಿದೆ. ಹೀಗಾಗಿ ರೊಟ್ಟಿ ತಿನ್ನುವ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ‌ ಅಡುಗೆ ಸಿಬ್ಬಂದಿಗೆ ಹೆಚ್ಚಿನ ಕೆಲಸದ ಹೊರೆಯಾಗಿ ಕೆಲಸ ಬಿಟ್ಟು ಓಡುವಂತಾಗಿದೆ” ಎಂದರು.

ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯಗಳ ನೌಕರರಿಗೆ ವೇತನಕ್ಕಾಗಿ ಸರ್ಕಾರದಿಂದ ಅನುದಾನ ಬಂದು ಒಂದು ತಿಂಗಳಾದರೂ ಎಲ್ಲ ನೌಕರರ ಬಾಕಿ ವೇತನ ಪೂರ್ತಿಯಾಗಿ ಪಾವತಿಯಾಗಿಲ್ಲ. ನೌಕರರ 6ರಿಂದ 8 ತಿಂಗಳ ವೇತನದಲ್ಲಿ 3ರಿಂದ 5 ತಿಂಗಳ ₹1000-₹1500 ಕಡಿಮೆ ವೇತನ ಪಾವತಿಸಲಾಗಿದೆ. ಅಲ್ಲದೆ ಬಿಸಿಎಂ ಇಲಾಖೆಯಲ್ಲಿಯೂ ಕೂಡ 4-6 ತಿಂಗಳ ವೇತನ ಪಾವತಿಯಾಗಿಲ್ಲ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಲ್ಲಿ 2 ತಿಂಗಳ ವೇತನ ಬಾಕಿ ಇದೆ. ಕ್ರೈಸ್ಟ್‌ ಅಡಿಯಲ್ಲಿರುವ ವಸತಿ ನಿಲಯಗಳಲ್ಲಿ 3 ತಿಂಗಳ ವೇತನ ಬಾಕಿ ಇದೆ. ಕಾರಣ ಎಲ್ಲ ವಸತಿನಿಲಯಗಳ ನೌಕರರ ಬಾಕಿ ವೇತನ ಕೂಡಲೇ ಪಾವತಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ 3 ವರ್ಷಗಳಿಂದ ಶಾರ್ಪ್‌(ಸ್ವಿಸ್) ಮ್ಯಾನ್ ಪವರ್ ಏಜೆನ್ಸಿ‌ಯವರು ಕಡಿಮೆ ವೇತನ ಪಾವತಿಸಿದ್ದು, ಇಪಿಎಫ್, ಇಎಸ್‌ಐ ತುಂಬಾಲಾರದ ಬಗ್ಗೆ ತನಿಖೆ ನಡೆಸಿ ಕಾರ್ಮಿಕರಿಗೆ ವ್ಯತ್ಯಾಸದ ಹಣ ಕೊಡಿಸಬೇಕು. ಖಾಯಂ ನೌಕರರ ಸ್ಥಳದಲ್ಲಿ ಮಾತ್ರ ಖಾಯಂ ನೌಕರರನ್ನು ವರ್ಗಾವಣೆ ಮಾಡಬೇಕು. ವಾರಕ್ಕೊಂದು ರಜೆ ತಪ್ಪದೇ ಕೊಡಬೇಕು. ಹತ್ತು ವರ್ಷಕ್ಕೂ ಹೆಚ್ಚು ಸೇವೆ ಸಲ್ಲಿಸಿ ಅರ್ಜಿ ಸಲ್ಲಿದ ನೌಕರರಿಗೆ ಕ್ಷೇಮಾಭಿವೃದ್ಧಿ ಯೋಜನೆಯಲ್ಲಿ ನೇಮಕ ಮಾಡಿಕೊಳ್ಳಬೇಕು. 100 ಮಂದಿ ವಿದ್ಯಾರ್ಥಿಗಳಿಗೆ 5 ಮಂದಿ ಅಡುಗೆ ಸಿಬ್ಬಂದಿ ಇರುವ ಹಿಂದಿನ ಆದೇಶ ಮುಂದುವರೆಸಬೇಕು. ವಿದ್ಯಾರ್ಥಿಗಳ ಹೆಚ್ಚಿನ ಸಂಖ್ಯೆಗನುಗುಣವಾಗಿ ಹೆಚ್ಚಿನ ಸಿಬ್ಬಂದಿ ಕೊಡಬೇಕು” ಎಂದು ಆಗ್ರಹಿಸಿದರು.

“ಹೊರಗುತ್ತಿಗೆಯಲ್ಲಿ ಮಿಸಲಾತಿ ಎಂಬುದು ಹೊಸದಾಗಿ ಮುಂದೆ ಪ್ರಾರಂಭಿಸುವ ವಸತಿನಿಲಯಗಳಲ್ಲಿ ಮಾತ್ರ ಜಾರಿಗೊಳಿಸಬೇಕು. ಹಾಸ್ಟೆಲ್ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಕೊಡಬೇಕು. ಕ್ರೈಸ್ ಅಡಿಯಲ್ಲಿರುವ ನೌಕರರಿಗೆ ಷರತ್ತಿನ ಚೌಂಡ ಬರೆಸಿಕೊಳ್ಳುವುದು ರದ್ದುಮಾಡಬೇಕು. ನೇರನೇಮಕಾತಿಯಿಂದ ಕೆಲಸಕಳೆದುಕೊಂಡ ನೌಕರರಿಗೆ ಸಮಾಜ ಕಲ್ಯಾಣ ಮತ್ತು ಬಿಸಿಎಂ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಖಾಲಿಯಾದ ಸ್ಥಳಗಳಲ್ಲಿ ಆದ್ಯತೆ ಕೊಟ್ಟು ನೇಮಕಾತಿ ಮಾಡಿಕೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ನೀಟ್-ಯುಜಿಸಿ ಪರೀಕ್ಷೆ ಭ್ರಷ್ಟಾಚಾರ ಹಗರಣ; ನ್ಯಾಯಕ್ಕಾಗಿ ಎಸ್ಎಫ್ಐ ಆಗ್ರಹ

ಸರ್ಕಾರವು ಸಿ‌ಬ್ಬಂದಿ ಕಡಿತಗೊಳಿಸಿರುವ ಅದೇಶ ಹಿಂಪಡೆಯಬೇಕು. ಜತೆಗೆ ನಮ್ಮ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಕಾಶಿನಾಥ ಬಂಡಿ, ಜಿಲ್ಲಾಧ್ಯಕ್ಷ ಪರಶುರಾಮ ಹಡಗಲ,  ರಾಜ್ಯಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಉಪಾಧ್ಯಕ್ಷ ಮೇಘರಾಜ ಕಠಾರೆ, ಅಧ್ಯಕ್ಷ ನಾಗರಾಜ ಕಟ್ಟಿಮನಿ ಸೇರಿದಂತೆ ಬಹುತೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...