ಕಲಬುರಗಿ | ನವ ಉದಾರೀಕರಣ ನೀತಿಗಳಿಗೆ ಮಣೆ ಹಾಕಿರುವ ರಾಜ್ಯ ಬಜೆಟ್‌ : ಶರಣಬಸಪ್ಪ ಮಮಶೆಟ್ಟಿ

Date:

ರಾಜ್ಯಾದ್ಯಂತ ವರದಿಯಾಗುತ್ತಿರುವ ರೈತರ ಕೃಷಿ ಕೂಲಿಕಾರರ ಆತ್ಮಹತ್ಯೆಗಳು, ವಲಸೆ-ಮರುವಲಸೆ ಸಂಕಟಗಳು, ತೀವ್ರ ಗತಿಯಲ್ಲಿ ಹೆಚ್ಚುತ್ತಿರುವ ಗ್ರಾಮೀಣ ನಿರುದ್ಯೋಗ ಮತ್ತು ಸಾಲಭಾಧೆಗೆ ಪರಿಹಾರ ಒದಗಿಸುವಲ್ಲಿ 2025-26ರ ರಾಜ್ಯ ಬಜೆಟ್ ಕೂಡ ವಿಫಲವಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಟೀಕಿಸಿದ್ದಾರೆ.

ʼಉದ್ದೇಶ ಮತ್ತು ಸ್ವರೂಪಗಳ ಪ್ರಸ್ತಾಪ ಇಲ್ಲದೇ ಹೊಸ ಭೂ ಕಂದಾಯ ಕಾಯ್ದೆಯ ಘೋಷಣೆ ಮಾಡಿರುವುದು, ಕೃಷಿ ಭೂಮಿ ಪಹಣಿಗಳಿಗೆ ಆಧಾರ್ ಜೋಡಿಸಿ ಡಿಜಿಟಲೀಕರಣಗೊಳಿಸುವುದು ಈಗಾಗಲೇ ಕೇಂದ್ರಿಕೃತವಾಗಿ ನಿರ್ವಹಿಸಲ್ಪಡುತ್ತಿರುವ ಇಂತಹ ದಾಖಲಾತಿಗಳು ಹೇಗೆ ಭೂಗಳ್ಳತನದಂತಹ ಹೊಸ ಸೈಬರ್ ಅಪರಾಧಗಳಿಗೆ ಕಾರಣವಾಗಬಹುದಾದ ಆತಂಕವನ್ನು ಉಂಟು ಮಾಡಿವೆ. ಈ ಹಿನ್ನೆಲೆಯಲ್ಲಿ ಇಂತಹ ಯಾವುದೇ ರೀತಿಯ ತೊಂದರೆಗೆ ರೈತರನ್ನು ಸಿಲುಕಿಸುವುದಿಲ್ಲ ಎಂದು ಸ್ಪಷ್ಟ ಶ್ವೇತಪತ್ರ ಹೊರಡಿಸದೇ ಇಂತಹ ಜೋಡಣೆ ಕೆಲಸಕ್ಕೆ ಮುಂದಾಗಬಾರದುʼ ಎಂದರು.

ʼನವ ಉದಾರೀಕರಣ ನೀತಿಗಳಿಗೆ ಮಣೆ ಹಾಕಿರುವ ಈ ಬಜೆಟ್ ಕೂಡ ಕೃಷಿ ಉತ್ಪಾದನೆ ಹಾಗೂ ಕೃಷಿ ಭೂಮಿ ರಕ್ಷಣೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಸಾಲಭಾಧೆಗೆ ತುತ್ತಾಗಿರುವ ಹಾಗೂ ಕೃಷಿ ಉತ್ಪನ್ನಗಳ ಬೆಲೆ ಕುಸಿತದಿಂದ ಕಂಗೆಟ್ಟಿರುವ ರೈತ ಸಮುದಾಯಗಳಿಗೆ ಯಾವುದೇ ಪರಿಣಾಮಕಾರಿ ಪರಿಹಾರ ಒದಗಿಸಿಲ್ಲ.ಕೃಷಿಕರ ಆದಾಯ ಮತ್ತು ಜೀವನ ಭದ್ರತೆ ಹಾಗೂ ಕೃಷಿ ಉತ್ಪಾದನೆಯಲ್ಲಿ ಗಣನೀಯ ಕೊಡುಗೆ ನೀಡುತ್ತಿರುವ ಬಗರ್ ಹುಕುಂ, ಅರಣ್ಯ ಸಾಗುವಳಿ, ಗೇಣಿ ರೈತರ ಕಲ್ಯಾಣವನ್ನು ಮತ್ತು ಅವರ ಹಕ್ಕು ಪತ್ರದ ಹಕ್ಕು ಅನ್ನು ನಿರ್ಲಕ್ಷಿಸಲಾಗಿದೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಬಲವಂತದ ಭೂ ಸ್ವಾಧೀನದ ವಿರುದ್ಧ ರಕ್ಷಣೆ ನೀಡುವಂತೆ, ಕೃಷಿ ಪಂಪ್ ಸೆಟ್ ಗಳಿಗೆ ಸ್ಮಾರ್ಟ್ ಮೀಟರ್ ಪ್ರೀಪೇಡ್ ಮೀಟರ್ ಅಳವಡಿಸುವ ಕೇಂದ್ರದ ವಿದ್ಯುತ್ ಖಾಸಗೀಕರಣ ನೀತಿಗೆ ನಿರಾಕರಣೆ, ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖಾತರಿ ಖರೀದಿಗೆ ವ್ಯವಸ್ಥೆ, ಸಾಲಭಾಧೆಯಿಂದ ಆತ್ಮಹತ್ಯೆಗೆ ತುತ್ತಾಗದಂತೆ ಕೇರಳ ಮಾದರಿಯಲ್ಲಿ ಋಣಮುಕ್ತ ಕಾಯ್ದೆ ಜಾರಿ ಮಾಡುವಂತೆ, ಕೈಗಾರಿಕಾ ಪ್ರದೇಶಾಭಿವೃದ್ಧಿ ಹೆಸರಿನಲ್ಲಿ ಭೂ ಮಾಪಿಯಾದ ಚಟುವಟಿಕೆಗಳನ್ನು ನಿಯಂತ್ರಿಸಿ ಕೃಷಿ ಭೂಮಿಯ ಕಾರ್ಪೊರೇಟ್ ಲೂಟಿ ತಡೆಯುವಂತೆ, ಗ್ರಾಮೀಣ ಜನತೆ ಭೂ ಹೀನತೆ ಹಾಗೂ ವಸತಿ ಹೀನತೆಗೆ ನಿವಾರಿಸುವಂತೆ ಬಜೆಟ್ ಪೂರ್ವ ದಲ್ಲಿ ತೀವ್ರ ಪ್ರತಿಭಟನೆ ಮೂಲಕ ಒತ್ತಾಯಿಸಿದ್ದರೂ ಈ ಬಜೆಟ್ ತೀವ್ರವಾಗಿ ಕಡೆಗಣಿಸಿದೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ʼನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ಆಗಿರುವ ನ್ಯಾಯಬದ್ಧ, ಶಾಸನಬದ್ದ ತೆರಿಗೆ ಪಾಲಿನಲ್ಲಿ ವಂಚನೆ, ಅಭಿವೃದ್ಧಿ ಅನುದಾನದಲ್ಲಿ ತಾರತಮ್ಯ, ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಅಗತ್ಯ ಅನುದಾನ ಒದಗಿಸದೇ ರಾಜ್ಯ ಸರ್ಕಾರಗಳ ಕತ್ತು ಹಿಸುಕುವ ಗಂಭೀರ ಸಮಸ್ಯೆ-ಸವಾಲುಗಳ ಮಧ್ಯೆಯೂ ಗ್ಯಾರಂಟಿ ಯೋಜನೆಗಳಿಗೆ ಹಾಗೂ ಕೆಲವು ಕಲ್ಯಾಣ ಕಾರ್ಯಕ್ರಮಗಳಿಗೆ ಪ್ರಯತ್ನ ನಡೆಸಲಾಗಿದೆʼ ಎಂದರು.

ʼಕೃಷಿ ಬಿಕ್ಕಟ್ಟು, ನಿರುದ್ಯೋಗ, ಬೆಲೆ ಏರಿಕೆ ಯಂತಹ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಒದಗಿಸದೇ ಕೇವಲ ಗ್ಯಾರಂಟಿ ಯೋಜನೆಗಳು ರಾಜ್ಯದ ಅರ್ಥಿಕ ಅಭಿವೃದ್ದಿಗೆ ಯಾವುದೇ ಪರಿಣಾಮಕಾರಿ ಕೊಡುಗೆ ನೀಡಲು ಸಾಧ್ಯವಿಲ್ಲ ಎಂಬುದನ್ನು ಕಳೆದ ಎರಡು ವರ್ಷಗಳ ಗ್ಯಾರಂಟಿ ಅನುಭವ ತೋರಿಸಿಕೊಟ್ಟಿದೆ. ಶಿಕ್ಷಣ, ಆರೋಗ್ಯ ,ಕೃಷಿ ಮಾರುಕಟ್ಟೆ ,ವಸತಿ ಮುಂತಾದ ಕ್ಷೇತ್ರಗಳಲ್ಲಿ ಖಾಸಗೀಕರಣ ಹಾಗೂ ಖಾಸಗಿ ಸಹಭಾಗಿತ್ವವನ್ನೇ ಪ್ರೊತ್ಸಾಹಿಸಲಾಗುತ್ತಿದೆ. ಇದು ಮತ್ತಷ್ಟು ನಿರುದ್ಯೋಗ, ಕೃಷಿ ಬಿಕ್ಕಟ್ಟು, ಬೆಲೆ ಏರಿಕೆಗೆ ಕಾರಣವಾಗಲಿದೆʼ ಎಂದರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಲುಂಬಿನಿ ಉದ್ಯಾನದಲ್ಲಿ ಗೌತಮ ಬುದ್ದ ಮೂರ್ತಿ ಸ್ಥಾಪನೆಗೆ ಆಗ್ರಹ

ʼಕಳೆದ ವಿಧಾನ ಸಭಾ ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಭರವಸೆಗಳಾದ ಕರಾಳ ಕೃಷಿ ಕಾಯ್ದೆಗಳು ಹಾಗೂ ಭೂ ಸ್ವಾಧೀನ ಕಾಯ್ದೆಗಳ ರದ್ದತಿ ಘೋಷಣೆ ಈ ಬಜೆಟ್ ನಲ್ಲೂ ಕೂಡ ಮಾಡಿಲ್ಲ. ಕೃಷಿ ಮಾರುಕಟ್ಟೆಯಲ್ಲಿ ಖಾಸಗಿ ಸಹಭಾಗಿತ್ವ ವನ್ನು ಪ್ರೋತ್ಸಾಹಿಸುವ ಪ್ರಸ್ತಾಪ ಅಪಾಯಕಾರಿಯಾಗಿದೆ. ಈಗಾಗಲೇ ಎಪಿಎಂಪಿ ಕಾಯ್ದೆಗಳನ್ನು ದುರ್ಬಲಗೊಳಿಸಿರುವ ಕಾರಣ ಹಾಗೂ ಖಾಸಗಿ ಸಗಟು ಮಾರುಕಟ್ಟೆಗಳಿಗೆ ಅವಕಾಶ ಕಲ್ಪಿಸಿರುವ ಕಾರಣ ಮತ್ತಷ್ಟು ತೊಂದರೆ ರೈತರಿಗೆ ಉಂಟಾಗಲಿದೆ. ಕೂಡಲೇ ಖಾಸಗಿ ಕೃಷಿ ಮಾರುಕಟ್ಟೆ ಪರ ಧೋರಣೆ ಕೈ ಬಿಟ್ಟು ಎಪಿಎಂಸಿ ಮಾರುಕಟ್ಟೆಗಳನ್ನು ಬಲಪಡಿಸಬೇಕು.
ಭೂ ಸುಧಾರಣೆ ಕಾಯ್ದೆ 2020 ಸೇರಿದಂತೆ ಎಲ್ಲಾ ಕರಾಳ ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕುʼ ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...