ಕಲಬುರಗಿ | ಎಸ್‌ಯುಸಿಐ(ಕಮ್ಯೂನಿಸ್ಟ್)‌ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

Date:

ದೇಶದ 18ನೇ ಸಾರ್ವತ್ರಿಕ ಚುನಾವಣೆಯಲ್ಲಿ ಗುಲ್ಬರ್ಗಾ(ಎಸ್‌ಸಿ) ಲೋಕಸಭಾ ಕ್ಷೇತ್ರದಿಂದ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯೂನಿಸ್ಟ್) ಪಕ್ಷದ ಅಭ್ಯರ್ಥಿ ಎಸ್ ಎಂ ಶರ್ಮಾ ಅವರು ಮಂಗಳವಾರ ಕಲಬುರಗಿ ಜಿಲ್ಲಾ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ಕಲಬುರಗಿ ನಗರದ ರೈಲ್ವೆ ನಿಲ್ದಾಣದಿಂದ ಪಕ್ಷದ ಕಾರ್ಯಕರ್ತರು, ಬೆಂಬಲಿಗರು, ಹಿತೈಷಿಗಳು ಹಾಗೂ ಜನಸಾಮಾನ್ಯರು ಮೆರವಣಿಗೆಯ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು.

“ಮೆರವಣಿಗೆಯಲ್ಲಿ ಪಕ್ಷದ ಕೆಂಪು ಧ್ವಜಗಳು ಹಾಗೂ ಭಿತ್ತಿಪತ್ರಗಳು ರಾರಾಜಿಸುತ್ತಿದ್ದವು. ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ರಾಜ್ಯ ಸಮಿತಿ ಸೆಕ್ರೇಟರಿ ಸದಸ್ಯ ಕೆ ಸೋಮಶೇಖರ್ ಅವರು, ದೇಶವು ಸ್ವಾತಂತ್ರ್ಯಗೊಂಡು 76 ವರ್ಷಗಳು ಗತಿಸಿದರೂ ಕೂಡ ನಮ್ಮನ್ನು ಆಳಿರುವ ಕಾಂಗ್ರೆಸ್, ಬಿಜೆಪಿ ಹಾಗೂ ಸಮ್ಮಿಶ್ರ ಸರ್ಕಾರಗಳು ಜನಸಾಮಾನ್ಯರ ಜೀವನವನ್ನು ಮತ್ತಷ್ಟು ಅಧೋಗತಿಗೆ ಇಳಿಸಿವೆ. ಕೋಮುವಾದಿ, ಫ್ಯಾಸಿಸ್ಟ್‌ವಾದಿ, ಬಂಡವಾಳಶಾಹಿ ವಿರುದ್ಧ ಈ ಚುನಾವಣೆಯಲ್ಲಿ ಜನಪರ ಧ್ವನಿ ಮೊಳಗಬೇಕು. ಬಂಡವಾಳಶಾಹಿಗಳ ಏಜೆಂಟರುಗಳಾದ ಈ ಪಕ್ಷಗಳನ್ನು ತಿರಸ್ಕರಿಸಿ ಜನಹೋರಾಟದ ಮೂಲಕ ಹೊರಹೊಮ್ಮಿದ ನಮ್ಮ ಪಕ್ಷದ ಅಭ್ಯರ್ಥಿಯನ್ನು ಚುನಾಯಿಸಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಅಭಿವೃದ್ಧಿ ವಿಚಾರದಲ್ಲಿ ಬದಲಾವಣೆಯ ಗಾಳಿ: ಗೀತಾ ಶಿವರಾಜ್‌ಕುಮಾರ್

ಅಭ್ಯರ್ಥಿ ಎಸ್ ಎಂ ಶರ್ಮ ಮಾತನಾಡಿ, “ಜನರ ಸಮಸ್ಯೆಗಳನ್ನು ಹಾಗೂ ಜನಹೋರಾಟದ ಧ್ವನಿಯನ್ನು ಸಂಸತ್ತಿನಲ್ಲಿ ಪ್ರತಿಧ್ವನಿಸಲು ನಮ್ಮನ್ನು ಆಯ್ಕೆ ಮಾಡಬೇಕು” ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿಯ ಸದಸ್ಯರಾದ ವಿ ನಾಗಮ್ಮಳ, ಆರ್ ಕೆ ವೀರಭದ್ರಪ್ಪ, ಮಹೇಶ ನಾಡಗೌಡ, ರಾಮಣ್ಣ ಎಸ್ ಐ, ವಿ ಜಿ ದೇಸಾಯಿ, ಗಣಪತರಾವ ಕೆ ಮಾನೆ, ಮಹೇಶ ಸೇರಿದಂತೆ ಬಹುತೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...