ಕಲಬುರಗಿ | ವಿವಿಧ ಬೇಡಿಕೆ ಆಗ್ರಹಿಸಿ ನಾಗರೀಕರ ಹಿತರಕ್ಷಣಾ ವೇದಿಕೆಯಿಂದ ಸಾಂಕೇತಿಕ ಧರಣಿ

Date:

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ತಾಲೂಕು ನಾಗರೀಕರ ಹಿತರಕ್ಷಣಾ ವೇದಿಕೆ ಚಿಂಚೋಳಿ ವತಿಯಿಂದ ಮಂಗಳವಾರ ತಹಶಿಲ್ದಾರ ಕಚೇರಿ ಎದುರು ಸಾಂಕೇತಿಕ ಧರಣಿ ನಡೆಸಲಾಯಿತು.

ಧರಣಿಕಾರರು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಡಿ ಪುರಸಭೆ ವ್ಯಾಪ್ತಿಯ ವಿವಿಧ ಯೋಜನೆಗಳಡಿ ಎಸ್‌.ಎಮ್‌. ಕನಸ್ಟ್ರಕ್ಷನ್‌ ಸಂಸ್ಥೆ ನಿರ್ಮಿಸುತ್ತಿರುವ ಕಳಪೆ ಮನೆಗಳ ಕುರಿತು ತನಿಖೆ ನಡೆಸಿ, ನಿಧಾನಗತಿಯಲ್ಲಿ ಸಾಗುತ್ತಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿದರು. ಅವರು ತಹಶಿಲ್ದಾರರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ವೇದಿಕೆಯ ಸಂಚಾಲಕ ಕಾಶಿನಾಥ ಸಿಂಧೆ ಮಾತನಾಡಿ, ‘2006-07ರ ನರ್ಮ್ ಐಎಚ್‌ಎಸ್‌ಡಿಪಿ ಯೋಜನೆಯಡಿ ನಿರ್ಮಿಸಿದ 200 ಮನೆಗಳು ಇದುವರೆಗೆ ಹಂಚಿಕೆ ಆಗಿಲ್ಲ. ಮನೆಗಳು ವಸತಿಯೋಗ್ಯ ಸ್ಥಿತಿಯಲ್ಲಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಯೋಜನೆಗಳು ವಿಳಂಬವಾಗುತ್ತಿವೆ,’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಅವರು 2018-19 ಹಾಗೂ 2022ರ ಯೋಜನೆಗಳಡಿ ನಿರ್ಮಿಸಬೇಕಿದ್ದ ಮನೆಗಳ ಕಾಮಗಾರಿ ಪ್ರಾರಂಭವಾಗದೆ ಕಾಲಹರಣ ನಡೆಯುತ್ತಿದೆ ಎಂದು ಆರೋಪಿಸಿದರು. ಪುರಸಭೆ ಅನುಮತಿ ಪಡೆಯದೆ ನಿರ್ಮಾಣ ಕಾರ್ಯ ನಡೆದಿದ್ದು, ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ’ ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಸಮ್ಯಕ್ ಬುದ್ಧ ವಿಹಾರದ 5ನೇ ವಾರ್ಷಿಕೋತ್ಸವ : ರಮಾಬಾಯಿ ಅಂಬೇಡ್ಕರ್ ಜೀವನಚರಿತ್ರೆ ನಾಟಕ ಪ್ರದರ್ಶನ

ಮುಖ್ಯ ಬೇಡಿಕೆಗಳಾಗಿ ಅವರು ‘ಎಸ್‌.ಎಮ್‌. ಕನಸ್ಟ್ರಕ್ಷನ್‌ ಸಂಸ್ಥೆಗೆ ನೀಡಿದ ಟೆಂಡರ್‌ ರದ್ದುಪಡಿಸಲು, ಕಳಪೆ ಕಾಮಗಾರಿ ನಡೆಸಿದವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು, ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಅಮಾನತುಗೊಳಿಸಲು, ಎಲ್ಲಾ ಮನೆ ನಿರ್ಮಾಣ ಕಾಮಗಾರಿಗಳ ತನಿಖೆ ನಡೆಸಲು, ಪುರಸಭೆ ಅನುಮತಿ ಇಲ್ಲದೆ ನಿರ್ಮಿಸಿದ ಮನೆಗಳ ದಾಖಲೆಗಳನ್ನು ಬಹಿರಂಗಪಡಿಸಲು ಹಾಗೂ ಫಲಾನುಭವಿಗಳ ಪಟ್ಟಿ ಪುರಸಭೆ ನೋಟಿಸ್‌ ಬೋರ್ಡ್‌ನಲ್ಲಿ ಪ್ರಕಟಿಸಲು ಆಗ್ರಹಿಸಿದರು. ಫಲಾನುಭವಿಗಳಿಂದ ಅಕ್ರಮವಾಗಿ ಹಣ ವಸೂಲಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು’ ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಜಶೇಖರ ಹೊಸಮನಿ, ಗೋಪಾಲ್ ರಾಂಪುರೆ, ಪಾಂಡುರಂಗ ಲೊಡ್ಡನೂರ್, ವಿಶ್ವನಾಥ ಹೊಡಬೀರನಳ್ಳಿ, ಆನಂದ ರೆಡ್ಡಿ, ಓಂನರಾವ್, ಲೊಕೇಶ್ ಐನ್ನೂಳ್ಳಿ, ವಿಲಾಸ ದೇಗಲಮಡಿ, ಮನೋಹರ ಕೊರವಿ, ಸಮೀರ್ ಪಟೇಲ್ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...