ಕಲಬುರಗಿ ತಾಲ್ಲೂಕಿನ ಔರಾದ್ (ಬಿ) ಗ್ರಾಮದ ಬಳಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.
ಪೊಲೀಸರ ಮಾಹಿತಿ ಪ್ರಕಾರ, ಹುಮನಾಬಾದ್ ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಕಾರಿಗೆ ಕಲಬುರಗಿಯತ್ತ ಬರುತ್ತಿದ್ದ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ಮೃತರನ್ನು ಕಮಲಾಪುರ ತಾಲ್ಲೂಕಿನ ಶಿರಡೋಣ ಗ್ರಾಮದ ನಾಗೇಂದ್ರಪ್ಪ (33), ಶಿವರಾಜ್ (32), ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಚಂದ್ರಕಲಾ (70) ಮತ್ತು ದತ್ತಾತ್ರೇಯ (48) ಎಂದು ಗುರುತಿಸಲಾಗಿದೆ.
ಇದನ್ನು ಓದಿದ್ದೀರಾ? ಕಲಬುರಗಿ | ವಿವಿಧ ಬೇಡಿಕೆ ಆಗ್ರಹಿಸಿ ನಾಗರೀಕರ ಹಿತರಕ್ಷಣಾ ವೇದಿಕೆಯಿಂದ ಸಾಂಕೇತಿಕ ಧರಣಿ
ಅಪಘಾತದಲ್ಲಿ ಉತ್ತಮ (36) ಹಾಗೂ ಸುದೇಶ್ನಾ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಕಲಬುರಗಿ ಸಂಚಾರಿ ಠಾಣೆ 2 ಯಲ್ಲಿ ಪ್ರಕರಣ ದಾಖಲಾಗಿದೆ.





