ಕಲಬುರಗಿ | ದಿನಸಿ ಕಿಟ್ ನೀಡಿರುವುದು ಸ್ವಾಗತಾರ್ಹ; ಅವೈಜ್ಞಾನಿಕವಾಗಿ ಕಾರ್ಡ್ ಕಡಿತಕ್ಕೆ ಸಿಪಿಐಎಂ ವಿರೋಧ

Date:

ರಾಜ್ಯ ಸರ್ಕಾರ ನಗದು ಬದಲು ದಿನಸಿ ಕಿಟ್ ನೀಡಿರುವುದು ಸ್ವಾಗತಾರ್ಹ. ಆದರೆ ಅವೈಜ್ಞಾನಿಕವಾಗಿ ಪಡಿತರ ಕಾರ್ಡ್ ಕಡಿತ ಮಾಡಿರುವುದು ಖಂಡನೀಯ ಎಂದು ಸಿಪಿಐಎಂ ಕಲಬುರಗಿ ಜಿಲ್ಲಾ ಕಾರ್ಯದರ್ಶಿ ಸಿಪಿಐಎಂ ಕೆ ನೀಲಾ ಹೇಳಿದರು.

ಕಲಬುರಗಿ ನಗರದಲ್ಲಿ ಭಾರತ ಕಮ್ಯೂನಿಷ್ಟ್ ಪಕ್ಷ(ಮಾರ್ಕ್ಸ್‌ವಾದಿ) ಪರವಾಗಿ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದು, “ಒಕ್ಕೂಟ ಸರ್ಕಾರ ಹೆಚ್ಚುವರಿ ಐದು ಕೆ.ಜಿ ಅಕ್ಕಿ ನೀಡದ ಪ್ರಯುಕ್ತ, ರಾಜ್ಯ ಸರ್ಕಾರ ಬಿಪಿಎಲ್ ರೇಷನ್ ಕಾ‌ರ್ಡ್‌ದಾರರಿಗೆ ಅನ್ನಭಾಗ್ಯ ಯೋಜನೆಯಡಿ ನೀಡುತ್ತಿದ್ದ ನಗದು ಬದಲಿಗೆ, ಅಡುಗೆ ಎಣ್ಣೆ, ಬೇಳೆ, ಸಕ್ಕರೆ, ಉಪ್ಪು ಸೇರಿಸಿದ ದಿನಸಿ ಕಿಟ್ ನೀಡಲು ನಿರ್ಧರಿಸಿರುವುದನ್ನು ಭಾರತ ಕಮ್ಯುನಿಸ್ಟ್ ಸ್ವಾಗತಿಸುತ್ತದೆ. ಹಾಗೆಯೇ ಇದನ್ನು ಮುಂದುವರೆಸಿ ಇತರೆ ಅಗತ್ಯ ವಸ್ತುಗಳನ್ನು ಮಾರುಕಟ್ಟೆಯ ಅರ್ಧ ದರಕ್ಕೆ ಒದಗಿಸಲು ಅಗತ್ಯ ಕ್ರಮವಹಿಸುಬೇಕು” ಎಂದು ಮನವಿ ಮಾಡಿದರು.

“ರೇಷನ್ ಕಾರ್ಡ್‌ ರದ್ದತಿಗೆ ಕುಟುಂಬದ ಯಜಮಾನರ ಆದಾಯದ ಬದಲಿಗೆ ಕೂಡು ಕುಟುಂಬದ ಸದಸ್ಯರ ವಾರ್ಷಿಕ ಆದಾಯ ₹1.20 ಲಕ್ಷ ಮೀರಿದರೆ ಕಾರ್ಡ್ ರದ್ದುಮಾಡುವ ಚಿಂತನೆ ಅವೈಜ್ಞಾನಿಕವಾಗಿದೆ. ಕೂಡಲೇ ಅಂತಹ ಜನ ವಿರೋಧಿ ನಿಲುವನ್ನು ಕೈ ಬಿಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಲಬುರಗಿ | 15ನೇ ಹಣಕಾಸಿನಲ್ಲಿ ಅವ್ಯವಹಾರ; ಚರಂಡಿ ಸ್ವಚ್ಛತೆ ಕಾರ್ಯದಲ್ಲಿ ಲಕ್ಷಲಕ್ಷ ಲೂಟಿ, ಆರೋಪ

“ಅಗತ್ಯ ವಸ್ತುಗಳ ಬೆಲೆ ಕಡಿಮೆಯಾಗದೆ ದಿನೇ ದಿನೆ ಬೆಲೆ ಗಗನಕ್ಕೇರುತ್ತಿದೆ. ಇಂತಹ ಸಂದರ್ಭದಲ್ಲಿ, ಇಂತಹ ಯೋಚನೆಗಳು, ವ್ಯಾಪಕವಾಗಿ ಬಡ ಜನತೆಯನ್ನು ಮತ್ತಷ್ಟು ಗಂಭೀರ ಅಪೌಷ್ಠಿಕತೆಯೆಡೆಗೆ ಹಾಗೂ ಹಸಿವಿನಿಂದ ಸಾವಿನ ದವಡೆಗೆ ತಳ್ಳುವ ಸನ್ನಿವೇಶ ಎದುರಾಗುತ್ತದೆ. ಬಿಪಿಎಲ್ ಮಾನದಂಡವೇ ಅವೈಜ್ಞಾನಿಕವಾಗಿದೆ. ಅದನ್ನು ಕನಿಷ್ಠ ₹2.5 ಲಕ್ಷಕ್ಕೆ ಹೆಚ್ಚಿಸಬೇಕು” ಎಂದು ಆಗ್ರಹಿಸಿದರು.

“ವಾರ್ಷಿಕ ಆದಾಯ (ಕೂಡು ಕುಟುಂಬ)ದಲ್ಲಿ ಯಾರಾದರೂ ಆದಾಯ ಹೆಚ್ಚಳದ ದುಡಿಮೆಯಲ್ಲಿ ತೊಡಗಿದ್ದರೆ, ಅಂತಹ ವ್ಯಕ್ತಿಯನ್ನು ವೈಜ್ಞಾನಿಕ ನೀತಿಯಡಿ ಹೊರಗಿಡಬಹುದೇ ಹೊರತು ಕುಟುಂಬದ ಕಾರ್ಡ್ ರದ್ದುಗೊಳಿಸುವುದು ಸೂಕ್ತ ಕ್ರಮವಲ್ಲವೆಂದು ಭಾರತ ಕಮ್ಯೂನಿಷ್ಟ್ ಪಕ್ಷ(ಸಿಪಿಐಎಂ) ವಿಶ್ಲೇಷಿಸುತ್ತದೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...