ಕಲಬುರಗಿ | ಕೆಇಎ ಕೌನ್ಸಿಲಿಂಗ್ ಮೂರನೇ ಸುತ್ತಿನ ಅವಕಾಶಕ್ಕೆ ಪ್ರಯತ್ನ; ವೈದ್ಯಕೀಯ ಸಚಿವ ಭರವಸೆ

Date:

ವೈದ್ಯಕೀಯ ವಿದ್ಯಾರ್ಥಿಗಳ ಪಿಜಿ ಪ್ರವೇಶ ಪರೀಕ್ಷೆ 2023ರ ಕೌನ್ಸಿಲಿಂಗ್‌ನ 2ನೇ ಸುತ್ತನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೌನ್ಸಿಲಿಂಗ್(ಕೆಇಎ) ಮುಂದೂಡಲು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ನೇತೃತ್ವದಲ್ಲಿ ವೈದ್ಯಕೀಯ ಸಚಿವ ಡಾ. ಶರಣಪ್ರಕಾಶ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

“2023ರ ಪಿಜಿ ಪ್ರವೇಶ ಪರೀಕ್ಷೆಯ 2ನೇ ಸುತ್ತಿನಿಂದ 3ನೇ ಸುತ್ತಿಗೆ ಮುಂದುವರಿಯಲು 2023ರ ನೀಟ್ ಆಕಾಂಕ್ಷಿಗಳಿಗೆ ಅವಕಾಶ ಕಲ್ಪಿಸಲು ಒಂದು ವ್ಯವಸ್ಥೆಯ ಅವಶ್ಯಕತೆಯಿದೆ. ನಿಷ್ಪಕ್ಷಪಾತದಿಂದ ಎಲ್ಲರಿಗೂ ನ್ಯಾಯಬದ್ಧ ಶಿಕ್ಷಣ ಒದಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿದ್ಯಾರ್ಥಿಗಳಿಗೆ ಸಮರ್ಪಕ ಅವಕಾಶಗಳನ್ನು ಕಲ್ಪಿಸಬೇಕು” ಎಂದು ವಿದ್ಯಾರ್ಥಿಗಳು ಕೋರಿದರು.

“ಮೆಡಿಕಲ್ ಸೆಂಟ್ರಲ್ ಕೌನ್ಸಿಲ್‌ನ 3ನೇ ಮತ್ತು ಕರ್ನಾಟಕ ಪಿಜಿ ಪ್ರವೇಶ ಪರೀಕ್ಷೆಯ 2ನೇ ಸುತ್ತಿನ ಕೌನ್ಸಿಲಿಂಗ್ ಎರಡೂ ಕೂಡ ಒಂದೇ ಸಮಯದಲ್ಲಿ ನಡೆಯುತ್ತಿವೆ. ಮೂರನೇ ಸುತ್ತಿಗೆ ಅವಕಾಶ ನೀಡದಿದ್ದಲ್ಲಿ ಉತ್ತಮ ಮೆರಿಟ್ ಹೊಂದಿರುವ ವಿದ್ಯಾರ್ಥಿಗಳು ಎರಡನೇ ಸುತ್ತಿನ ಸೀಟುಗಳನ್ನೇ ಪಡೆಯುವ ಅನಿವಾರ್ಯತೆ ಉಂಟಾಗುತ್ತದೆ. ಮೂರನೇ ಸುತ್ತಿಗೆ ಮುಂಬಡ್ತಿ ದೊರೆತಲ್ಲಿ ಎಲ್ಲ ವಿದ್ಯಾರ್ಥಿಗಳು ಉತ್ತಮ ಕಾಲೇಜಿಗೆ ಪ್ರವೇಶಾತಿ ಅವಕಾಶ ಪಡೆಯುತ್ತಾರೆ. ನೀಟ್ 2023ರಲ್ಲಿ ಅವರು ಪಡೆದಿರುವ ಅಂಕಗಳಿಗೆ ಇದು ನ್ಯಾಯಸಮ್ಮತವಾಗಿರುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೆಡಿಕಲ್ ಸೆಂಟ್ರಲ್ ಕೌನ್ಸಿಲಿಂಗ್‌ನ ಮೂರನೇ ಸುತ್ತಿನ ಅಕ್ಟೋಬರ್ 6 ರವರೆಗೂ ಪಿಜಿ ಪ್ರವೇಶ ಪರೀಕ್ಷೆಯ ಎರಡನೇ ಸುತ್ತನ್ನು ತಡೆ ಹಿಡಿದಲ್ಲಿ ಮೆಡಿಕಲ್ ಸೆಂಟ್ರಲ್ ಕೌನ್ಸಿಲಿಂಗ್‌ನಲ್ಲಿ ಸೀಟುಗಳನ್ನು ಪಡೆದಿರುವ ವಿದ್ಯಾರ್ಥಿಗಳು ಕರ್ನಾಟಕ ಪಿಜಿ ಪ್ರವೇಶ ಪರೀಕ್ಷೆಯ ಎರಡನೇ ಸುತ್ತಿನಿಂದ ಹೊರ ಹೋಗುತ್ತಾರೆ. ಇದರಿಂದಾಗಿ ಬಾಕಿ ಉಳಿದ ಸೀಟುಗಳು ಕರ್ನಾಟಕದ ಆಕಾಂಕ್ಷಿಗಳಿಗೆ ಲಭ್ಯವಾಗುತ್ತವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ವೈದ್ಯಕೀಯ ವಿದ್ಯಾರ್ಥಿಗಳಿಗೆ ಪಿಜಿ ಪ್ರವೇಶ ಪರೀಕ್ಷೆ 2023; 3ನೇ ಸುತ್ತಿಗೆ ಒತ್ತಾಯ

“ಅಭ್ಯರ್ಥಿಗಳ ಮೆರಿಟ್ ಹಾಗೂ ಪರಿಶ್ರಮಕ್ಕೆ ಇದು ನ್ಯಾಯ ಒದಗಿಸುತ್ತದೆ. ಕರ್ನಾಟಕದ ಒಂದು ಸಾವಿರ ವಿದ್ಯಾರ್ಥಿಗಳು ಇದರಿಂದ ಪ್ರಯೋಜನ ಹೊಂದುತ್ತಾರೆ. ನಿಜವಾದ ಸಾಮರ್ಥ್ಯ ಮತ್ತು ಅರ್ಹತೆಯೊಂದಿಗೆ ಪ್ರವೇಶ ಪಡೆಯುವ ಸಮಾನ ಹಕ್ಕನ್ನು ಎಲ್ಲ ಆಕಾಂಕ್ಷಿಗಳು ಹೊಂದುವಂತೆ ಮಾಡುವುದು ಅತ್ಯವಶ್ಯಕವಾಗಿದೆ. ಅಸಂಖ್ಯಾತ ಅಭ್ಯರ್ಥಿಗಳ ಕನಸು ಮತ್ತು ಆಕಾಂಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಈ ಪ್ರಸ್ತಾವನೆಯನ್ನು ಅತ್ಯಂತ ಸೂಕ್ತವೆಂದು ಪರಿಗಣಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.

ವೈದಕೀಯ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ಮನವಿ ಸ್ವೀಕರಿಸಿ ಪತಿಕ್ರಿಯಿಸಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೌನ್ಸಿಲಿಂಗ್ ಮೂರನೇ ಸುತ್ತಿಗೆ ಅವಕಾಶ ಕೊಡುವ ಪ್ರಯತ್ನ ಮಾಡುತ್ತೇವೆ” ಎಂದು ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...