ಕಲಬುರಗಿ | ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ : ಆರ್‌ಎಸ್‌ಎಸ್ ವಿರುದ್ಧ ಘೋಷಣೆ; ಟೈರ್‌ ಸುಟ್ಟು ಆಕ್ರೋಶ

Date:

ಸರ್ಕಾರಿ ಶಾಲೆಗಳ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿರ್ಬಂಧಿಸುವಂತೆ ಕೋರಿ ಪತ್ರ ಬರೆದ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ದುಷ್ಕರ್ಮಿಗಳು ಕರೆ ಮಾಡಿ ಬೆದರಿಸುತ್ತಿರುವುದನ್ನು ಖಂಡಿಸಿ ಗುರುವಾರ ನಗರದ ವಿವಿಧೆಡೆ ಪ್ರತಿಭಟನೆಗಳು ನಡೆದವು.

ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ಮತ್ತು ಪ್ರಿಯಾಂಕ್ ಖರ್ಗೆ ಅಭಿಮಾನಿಗಳು ಗುರುವಾರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

IMG 20251016 WA1282

‘ಸ್ಟ್ಯಾಂಡ್‌ ವಿತ್‌ ಪ್ರಿಯಾಂಕ ಖರ್ಗೆ’, ‘ಪ್ರಿಯಾಂಕ ಖರ್ಗೆ ಆಪ್ ಆಗೆ ಬಡೋ, ಹಮ್ ತುಮಾರೆ ಸಾಥ್ ಹೈ’ ಎಂಬ ಭಿತ್ತಿ ಪತ್ರಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯ ವಾಡಿ, ಚಿತ್ತಾಪುರ ಸೇರಿದಂತೆ ಅನೇಕ ಕಡೆಗಳಲ್ಲಿ ಟೈರುಗಳಿಗೆ ಬೆಂಕಿ ಹಚ್ಚಿ, ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಎದುರು ಯುವ ಕಾಂಗ್ರೆಸ್ ಮತ್ತು ಮಹಿಳಾ ಘಟಕದ ಕಾರ್ಯಕರ್ತರು ಜಮಾಯಿಸಿ ಘೋಷಣೆಗಳ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.

ಸಂವಿಧಾನ ತೆಗೆದು ಮನುಸ್ಮೃತಿ ತರುವುದು ಆರ್‌ಎಸ್‌ಎಸ್‌ ಹುನ್ನಾರ. ಹೀಗಾಗಿ ಸಂವಿಧಾನವನ್ನು ಪ್ರತಿಪಾದಿಸುವ ಸಚಿವ ಪ್ರಿಯಾಂಕ್‌ ಬೆಳವಣಿಗೆ ಸಹಿಸದೇ ಅವರ ವಿರುದ್ಧ ಕೀಳುಮಟ್ಟದ ಭಾಷೆ ಬಳಸಿ ನಿಂದಿಸಲಾಗುತ್ತಿದೆ. ಸಮಾಜದಲ್ಲಿ ಕೆಟ್ಟ ಆಲೋಚನೆಗಳಿಗೆ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಪುಷ್ಟಿಕೊಡುತ್ತಿದೆ. ರಾಜ್ಯ ಹಾಗೂ ದೇಶದಿಂದ ಆರ್‌ಎಸ್‌ಎಸ್‌ ಕೂಡಲೇ ನಿಷೇಧಿಸಬೇಕು’ ಎಂದು ಆಗ್ರಹಿಸಿದರು

361279

ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರವೀಣ್ ಪಾಟೀಲ್ ಹರವಾಳ, ಡಾ.ಕಿರಣ ದೇಶಮುಖ, ಫಾರೂಕ್ ಮನಿಯಾರ, ರಾಜೀವ್ ಜಾನೆ, ಶಿವಾನಂದ ಹೊನಗುಂಟಿ, ಈರಣ್ಣ ಪಾಟೀಲ್ ಝಳಕಿ, ದಿನೇಶ್ ದೊಡ್ಡಮನಿ, ಓವೈಸ್ ಶೇಖ್, ಖುಸ್ರೋ ಜಾಗಿರದಾರ, ಪ್ರಕಾಶ ಕಪನೂರ್, ರೇಣುಕಾ ಸಿಂಗೆ, ಗೌತಮ್ ಕರಿಕಲ್, ದೇವೇಂದ್ರ ಸಿನ್ನೂರ್, ಅಶ್ವಿನ್ ಸಂಕಾ, ಶೇಖ ಸಮರಿನ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...