ಕಲಬುರಗಿ | ಮದ್ಯ ಸೇವನೆ ಚಟ ಬಿಡಿಸಲು ನಾಟಿ ವೈದ್ಯ ನೀಡಿದ ಔಷಧ ಸೇವನೆ : ಮೂವರ ಸಾವು

Date:

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಇಮಡಾಪುರದಲ್ಲಿ ಮದ್ಯ ಸೇವನೆ ಚಟ ಬಿಡಿಸಲು ನಾಟಿ ವೈದ್ಯ ನೀಡಿದ್ದ ಔಷಧ ಸೇವಿಸಿದ್ದ ಮೂವರು ಬುಧವಾರ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. 

ಸೇಡಂ ತಾಲೂಕಿನ ಬುರಗಪಲ್ಲಿ ಗ್ರಾಮದ ಲಕ್ಷ್ಮಿ ನರಸಿಂಹಲು ಬಟಗೇರಾ (55), ಮದಕಲ್ ಗ್ರಾಮದ ನಾಗೇಶ (32) ಹಾಗೂ ಶಹಾಬಾದ್ ಬಳಿಯ‌ ಡಕ್ಕಾ ತಾಂಡಾ ಗಣೇಶ ರಾಠೋಡ್ (30) ಮೃತರು ಎಂದು ತಿಳಿದು ಬಂದಿದ್ದು, ಲಕ್ಷ್ಮಿ ಅವರ ಮಗ ಲಿಂಗಪ್ಪ ಅವರ ಸ್ಥಿತಿ ಗಂಭೀರವಾಗಿದ್ದು, ಕಲಬುರಗಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಇಮಡಾಪುರ ಗ್ರಾಮದಲ್ಲಿ ಫಕೀರಪ್ಪ ಅಲಿಯಾಸ್ ಸಾಯಪ್ಪ ಅವರು ಕುಡಿತದ ಚಟ ಬಿಡಿಸಲು ಔಷಧ ನೀಡುತ್ತಿದ್ದರು. ನಾಲ್ವರು ಔಷಧ ಪಡೆದಿದ್ದರು ಎನ್ನಲಾಗಿದೆ. ಪ್ರಾಥಮಿಕ ಮಾಹಿತಿಯಂತೆ ಮದ್ಯ ಸೇವನೆ ವ್ಯಸನದಿಂದ ಹೊರಬರಲು ಕೆಲವರು ನಾಟಿ ಔಷಧ ಪಡೆದಿದ್ದರು. ಭಾನುವಾರ ಔಷಧ ಪಡೆದಿದ್ದ ಜನರು ಮತ್ತೆ ಬುಧವಾರವೂ ಬಂದು ಔಷಧ ಪಡೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಬೀದರ್‌ | ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಅಪಾಯಕಾರಿ : ಸಚಿವ ಈಶ್ವರ ಖಂಡ್ರೆ

ಈ ಸಂಬಂಧ ಸೇಡಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಔಷಧ ನೀಡಿದ ಫಕೀರಪ್ಪ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...