ಕಲಬುರಗಿ | ನ.30ರಂದು ʼಈದಿನʼ ಓದುಗರ ಸಮಾವೇಶ

Date:

ಕರ್ನಾಟಕದ ಸಮುದಾಯ ಮಾಧ್ಯಮ ʼಈದಿನ’, ಇದೇ ನವೆಂಬರ್‌ 30ರಂದು ಕಲಬುರಗಿಯಲ್ಲಿ ತನ್ನ 2ನೇ ಓದುಗರ ಸಮಾವೇಶವನ್ನು ನಡೆಸಲು ಯೋಜಿಸಿದೆ.

ಇದೇ ದಿನ ಈದಿನ.ಕಾಮ್‌ ಹೊರತರುತ್ತಿರುವ “ಜೈ ಹಿಂದ್–ಜಯ ಕರ್ನಾಟಕ” ವಿಶೇಷ ಸಂಚಿಕೆ ಬಿಡುಗಡೆ ಹಾಗೂ ಕಲ್ಯಾಣ ಕರ್ನಾಟಕದ ಇತಿಹಾಸ–ಸಂಸ್ಕೃತಿಯ ಸಂವಾದ ಕಾರ್ಯಕ್ರಮ ರಾಜ್ಯದ ಪ್ರಮುಖ ವ್ಯಕ್ತಿತ್ವಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಐಟಿಬಿಟಿ ಹಾಗೂ ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ʼನ್ಯೂಸ್ ಮಿನಿಟ್ʼ ಸಂಪಾದಕಿ ಧನ್ಯಾ ರಾಜೇಂದ್ರನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ʼದಿ ವೈರ್‌ʼನ ಹಿರಿಯ ಪತ್ರಕರ್ತೆ ಆರಫಾ ಖಾನಂ ಶೇರ್ವಾನಿ ಅವರು ವಿಶೇಷ ಶುಭ ಸಂದೇಶ ನೀಡಲಿದ್ದಾರೆ. ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಗದಗ, ಬೀದರ್‌ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಓದುಗ ಪ್ರತಿನಿಧಿಗಳು ಕಾರ್ಯಕ್ರಮದ ಭಾಗವಾಗಲಿದ್ದಾರೆ.

ದಲಿತ ಸಂಘರ್ಷ ಸಮಿತಿಯ ಹಿರಿಯ ಮುಖಂಡ ಹಾಗೂ ಸ್ವಾಗತ ಸಮಿತಿಯ ಅಧ್ಯಕ್ಷ ಮರಿಯಪ್ಪ ಹಳ್ಳಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಖನೀಜಾ ಫಾತಿಮಾ, ಅಲ್ಲಮಪ್ರಭು ಪಾಟೀಲ್, ಮಹಾಪೌರರಾದ ವರ್ಷಾ ರಾಜು ಜಾನೆ, ಕೆಕೆಆರ್ಟಿಸಿ ಅಧ್ಯಕ್ಷ ಅರುಣ ಕುಮಾರ ಪಾಟೀಲ್, ಮಣ್ಣೂರ್‌ ಆಸ್ಪತ್ರೆ ಎಂಡಿ ಡಾ. ಫಾರೂಕ್‌ ಮಣ್ಣೂರ್‌, ದಸಂಸ ಮುಖಂಡ ಅರ್ಜುನ್‌ ಭದ್ರೆ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಹರವಾಳ, ಮಾಜಿ ಜಿಪಂ ಸದಸ್ಯ ಶಿವಾನಂದ ಪಾಟೀಲ್ ಸೇರಿದಂತೆ ಹಲವು ಗಣ್ಯರು ವೇದಿಕೆ ಅಲಂಕರಿಸಲಿದ್ದಾರೆ. ಮಧ್ಯಾಹ್ನ 2.30ರಿಂದ ‘ದಿ ಹಿಂದೂ’ ಪತ್ರಿಕೆಯ ಹಿರಿಯ ಸಹಾಯಕ ಸಂಪಾದಕ ಹೃಷಿಕೇಶ ಬಹದ್ದೂರ ದೇಸಾಯಿ ಅವರು, ‘ಕಲ್ಯಾಣ ಕರ್ನಾಟಕದ ಚರಿತ್ರೆ ಮತ್ತು ಸಂಸ್ಕೃತಿಯ ಹಿರಿಮೆ’ ಎಂಬ ವಿಷಯ ಮಂಡಿಸಲಿದ್ದಾರೆ. ಸಂಶೋಧಕಿ ಡಾ. ಸ್ವಾತಿ ಶಿವಾನಂದ, ಡಾ. ಲಕ್ಷ್ಮಣ ದಸ್ತಿ ಮತ್ತು ಹಿರಿಯ ಹೋರಾಟಗಾರ ಡಾ. ರಜಾಕ್ ಉಸ್ತಾದ್ ಚರ್ಚೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ನ.30ರಂದು ಕಲಬುರಗಿಯಲ್ಲಿ ʼಈ ದಿನʼ ಓದುಗರ ಸಮಾವೇಶ; ʼಜೈ ಹಿಂದ್-ಜಯ ಕರ್ನಾಟಕʼ ವಿಶೇಷ ಸಂಚಿಕೆ ಬಿಡುಗಡೆ

ನಟ ಮತ್ತು ಚಿಂತಕ ಪ್ರಕಾಶ್ ರೈ ಸಮಾರೋಪ ಭಾಷಣ ಮಾಡಲಿದ್ದಾರೆ. ಸಮಾರೋಪಕ್ಕೆ ಶಾಸಕ ಹಾಗೂ ಕರ್ನಾಟಕ ಯೋಜನಾ ಮಂಡಳಿಯ ಅಧ್ಯಕ್ಷ ಬಿ ಆರ್ ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದು, ಕೆಕೆಆರ್ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಮುಖ್ಯ ಅತಿಥಿಗಳಾಗಿರಲಿದ್ದಾರೆ. ಆರ್ ಕೆ ಹುಡಗಿ, ಮೀನಾಕ್ಷಿ ಬಾಳಿ, ಮಲ್ಲಿಕಾರ್ಜುನ ಸತ್ಯಂಪೇಟೆ, ಮರೆಪ್ಪ ಚಟ್ಟೇರಕರ್‌, ಸಿದ್ದಪ್ಪ ಮೂಲಗೆ, ಮಲ್ಲಿಕಾರ್ಜುನ ಕ್ರಾಂತಿ, ಮಹಾದೇವಿ ನಿಂಬಾಳ, ಗುರುರಾಜ್‌ ಹಾಗೂ ಉದಯ್‌ ಕುಮಾರ್‌ ಪಾಟೀಲ್‌ ಗಣ್ಯ ಉಪಸ್ಥಿತಿ ವಹಿಸಲಿದ್ದಾರೆ.

ಈದಿನದ ಓದುಗರನ್ನೂ, ಸ್ನೇಹಿತರನ್ನೂ, ಬೆಂಬಲಿಗರನ್ನೂ, ಸಂಗಾತಿಗಳನ್ನೂ ಒಗ್ಗೂಡಿಸುವ ಉದ್ದೇಶವನ್ನು ಈ ಕಾರ್ಯಕ್ರಮ ಹೊಂದಿದ್ದು, ನೀವೂ ಕಾರ್ಯಕ್ರಮದ ಭಾಗವಾಗಲು ಸ್ವಾಗತ ಸಮಿತಿ ಸದಸ್ಯರು ಹಾಗೂ ಈದಿನ ಬಳಗ ಹೃತ್ಪೂರ್ವಕವಾಗಿ ಆಹ್ವಾನಿಸುತ್ತಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...