ಕಲಬುರಗಿ | ನೌಕರರ ಮುಷ್ಕರದಿಂದಾಗಿ ಸಾರಿಗೆ ವ್ಯವಸ್ಥೆ ಬಂದ್: ದುಪ್ಪಟ್ಟು ದರ ತೆತ್ತು ಪ್ರಯಾಣಿಸಿದ ಸಾರ್ವಜನಿಕರು!

Date:

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ಮಂಗಳವಾರ ಕರೆ ನೀಡಿದ್ದ ಹಿನ್ನೆಲೆ ಇಂದು ಕಲಬುರಗಿ ಸಾರಿಗೆ ವ್ಯವಸ್ಥೆ ಬಸ್‌ಗಳ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ.

ಕಲಬುರಗಿ ನಗರದಿಂದ ವಿವಿಧ ತಾಲೂಕುಗಳಿಗೆ ತೆರಳಲು ಬಸ್ ಸಂಚಾರ ಸ್ಥಗಿತಗೊಂಡಿರುವುದರಿಂದ ಪ್ರಯಾಣಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ನಗರದ ಕೇಂದ್ರ ಬಸ್ ನಿಲ್ದಾಣ, ಶಹಾ ಬಝಾರ್ ನಾಕಾ, ಸೂಪರ್ ಮಾರ್ಕೆಟ್, ಗಂಜ್ ಪ್ರದೇಶ ಸೇರಿದಂತೆ ಇತರ ಕಡೆಗಳಲ್ಲಿ ಬಸ್‌ಗಳು ರಸ್ತೆಗೆ ಇಳಿಯದೇ ಇರುವುದರಿಂದ ಪ್ರಯಾಣಿಕರು ಖಾಸಗಿ ಬಸ್‌, ಕ್ರೋಜರ್ ಹಾಗೂ ಆಟೋ ರಿಕ್ಷಾಗಳ ಮೇಲೆ ಅವಲಂಬಿಸಿದ್ದು, ಖಾಸಗಿ ವಾಹನಗಳ ಟಿಕೆಟ್ ದರಕಿಂತ ಎರಡುಪಟ್ಟು ದುಪ್ಪಟ್ಟಾಗಿ ಹಣವನ್ನು ತೆಗೆದುಕೊಳ್ಳುತ್ತಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 08 05 at 11.24.05 AM

ಆಳಂದ ತಾಲೂಕಿಗೆ ಒಬ್ಬರಿಗೆ ಟಿಕೆಟ್ ದರ ಐವತ್ತು ರೂಪಾಯಿ ಇದ್ದರೆ ಇಂದು ನೂರು (100) ರೂಪಾಯಿ ತೆಗೆದುಕೊಳ್ಳುತ್ತಿರುವುದು ಕಂಡುಬಂತು. ಬಸ್ ಸಂಚಾರವಿಲ್ಲದಿರುವುದರಿಂದ ಅನಿವಾರ್ಯತೆಯಿಂದ ಸಾರ್ವಜನಿಕರು ಅವರು ಕೇಳಿದಷ್ಟು ಹಣ ಕೊಟ್ಟು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

WhatsApp Image 2025 08 05 at 11.24.04 AM

ಕಲಬುರಗಿಯ ಕೇಂದ್ರ ಬಸ್ ನಿಲ್ದಾಣಕ್ಕೆ ನಗರ ಪೊಲೀಸ್‌ ಆಯುಕ್ತ ಡಾ.ಶರಣಪ್ಪ ಎಸ್ ಡಿ ಭೇಟಿ ನೀಡಿ ಮುಷ್ಕರ ಹಾಗೂ ಪ್ರಯಾಣಿಕರ ಸಂಚಾರದ ಕುರಿತು ಮಾಹಿತಿ ಪಡೆದುಕೊಂಡರು. ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಕಮಿಷನರ್ ಸೂಚನೆ ನೀಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...