ಕಲಬುರಗಿ | ಸಾವಿತ್ರಿ ಬಾಯಿ ಪುಲೆ ಪ್ರಶಸ್ತಿ ಪುರಸ್ಕೃತ ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

Date:

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದಲ್ಲಿ 75 ನೇ  ಗಣರಾಜ್ಯೋತ್ಸವ ಅಂಗವಾಗಿ ಗ್ರಾಮ್ ಪಂಚಾಯತ್ ಕಾರ್ಯಾಲಯದಲ್ಲಿ ಅಕ್ಷರದವ್ವ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ ಪಡೆದ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ವಿದ್ಯಾನಿಧಿ ಆರ್. ಕವಡೆ ಅವರನ್ನು ಗ್ರಾಮ ಪಂಚಾಯ್ತಿವತಿಯಿಂದ ಸನ್ಮಾನಿಸಲಾಯಿತು.

ಪಂಚಾಯಿತಿ ಆವರಣದಲ್ಲಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹಿಬೂಬ್ ಪಟೇಲ್ ಮಾತನಾಡಿ, ಉತ್ತಮ ಪ್ರಶಸ್ತಿಗಳಲ್ಲಿ ಒಂದಾಗಿರುವ ಸಾವಿತ್ರಿಬಾಯಿ ಫುಲೆ ಅವರ ಹೆಸರಿನ ಪ್ರಶಸ್ತಿ ನಮ್ಮ ಗ್ರಾಮ ಪಂಚಾಯಿತಿಯ ಅಂಗನವಾಡಿ ಕಾರ್ಯಕರ್ತೆ ವಿದ್ಯಾನಿಧಿ ಅವರಿಗೆ ಲಭಿಸಿದ್ದು ನಮ್ಮ ಗ್ರಾಮಕ್ಕೆ ಮತ್ತು ತಾಲೂಕಿಗೆ ಹೆಮ್ಮೆಯ ವಿಷಯ. ಇದು ಅವರಿಗಿರುವ ಅಕ್ಷರ ದಾಸೋಹದ  ಪ್ರೇಮವನ್ನು ಎತ್ತಿ ತೋರಿಸುತ್ತದೆ ಎಂದರು.

ಪ್ರಶಸ್ತಿ ಪುರಸ್ಕೃತೆ ವಿದ್ಯಾನಿಧಿ ಮಾತನಾಡಿ, ಇಂತಹ ಗೌರವವು ಕೇವಲ ನನ್ನ ಪರಿಶ್ರಮವಲ್ಲ ಅಕ್ಷರ ಕಲಿಸುವ ಹುಮ್ಮಸ್ಸು ಎಲ್ಲರಲ್ಲಿಯೂ ಇರುತ್ತದೆ. ಆದರೆ, ನನ್ನ ಪರಿಶ್ರಮಕ್ಕೆ ಎಲ್ಲರ ಸಹಾಯ ಸಹಕಾರವು ಅವಶ್ಯಕವಾಗಿದ್ದು, ನಮ್ಮ ಗ್ರಾಮದವರ ಮತ್ತು ಗ್ರಾಮ ಪಂಚಾಯತಿ ಅಧಿಕಾರಿಗಳ ಹಾಗೂ ಚುನಾಯಿತ ಪ್ರತಿನಿಧಿಗಳು ನೀಡಿರುವ ಸಹಕಾರಕ್ಕೆ ನಾನು ಚಿರಋಣಿ. ಈ ಪ್ರಶಸ್ತಿಯು ತಮ್ಮೆಲ್ಲರಿಗೂ ಸಲ್ಲುತ್ತದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಿವಲೀಲಾ ಪಾಳೇಕರ್, ಉಪಾಧ್ಯಕ್ಷರು ಶರಣಬಸಮ್ಮ ಕವಡೆ ಗ್ರಾಮ ಪಂಚಾಯತ ಸದಸ್ಯರು, ಜಿಲ್ಲಾ ಪಂಚಾಯತ್ ಮಾಜಿ ರಾಜಶೇಖರ್ ತಿಮ್ಮನಾಯಕ್, ತಾಲೂಕ ಪಂಚಾಯತ್ ಮಾಜಿ ಸದಸ್ಯ ಮುನಿಯಪ್ಪ ಕೊಳ್ಳಿ, ಮುಖಂಡರು ರಶೀದ್ ಪಠಾನ್, ಶಂಕರ್ ಕೊಳ್ಳಿ, ದಾವತ್ ಪಟೇಲ್ ಸೇರಿದಂತೆ ಗ್ರಾಮಸ್ಥರು,ಸಂಘಟಿಕರು, ಶಾಲೆಯ ಮಕ್ಕಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...