ಕಲಬುರಗಿ | ಬೈಕ್‌ಗಳ ಮುಖಾಮುಖಿ ಡಿಕ್ಕಿಯಿಂದ ಬೆಂಕಿ : ಓರ್ವ ಸವಾರ ಸಜೀವ ದಹನ

Date:

ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ಕಾಳಗಿ–ಕೊಡದೂರ ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.

ಕಾಳಗಿ ತಾಲ್ಲೂಕಿನ ಮಂಗಲಗಿ ಗ್ರಾಮದ ದಶರಥ ಪೀರಪ್ಪ ಮಡಿವಾಳ (28) ಮೃತಪಟ್ಟ ಸವಾರ. ಅವರ ದೇಹ ಬೆಂಕಿಗೆ ಸುಟ್ಟು ಕರಕಲಾಗಿದೆ. ಸಾಸರಗಾಂವ ಗ್ರಾಮದ ಮಲ್ಲಪ್ಪ ಅಣ್ಣಪ್ಪ ಪೂಜಾರಿ (35), ಅವಿನಾಶ ಮಲ್ಲಪ್ಪ (2) ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

ಮೃತ ದಶರಥ ಅವರ ಬೈಕ್ ಕಾಳಗಿ ಕಡೆಯಿಂದ ಮಂಗಲಗಿ ಕಡೆಗೆ ಹಾಗೂ ಮಲ್ಲಪ್ಪ ಅವರ ಬೈಕ್ ಕೊಡದೂರ ಕಡೆಯಿಂದ ಕಾಳಗಿ ಕಡೆಗೆ ಬರುತ್ತಿತ್ತು. ಮಾರ್ಗಮಧ್ಯೆ ಡಿಕ್ಕಿ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ. ದಶರಥ ಸಾವನ್ನಪ್ಪಿದರೆ, ಇನ್ನೊಂದು ಬೈಕಿನಲ್ಲಿದ್ದ ಅವಿನಾಶ ಮತ್ತು ಮಲ್ಲಪ್ಪ ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಾಯಾಳುಗಳಿಗೆ ಕಾಳಗಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಕಲಬುರಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಕಾಳಗಿ ಸಿಪಿಐ ಜಗದೇವಪ್ಪ ಪಾಳಾ, ಪಿಎಸ್ಐ ತಿಮ್ಮಯ್ಯ ಬಿ.ಕೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕಾಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂಓದಿ : ಎಸ್‍ಎಸ್‍ಎಲ್‍ಸಿ ಪತ್ರಿಕೆ ಮರು ಮೌಲ್ಯಮಾಪನ : ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದ ವಿದ್ಯಾರ್ಥಿನಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...