ಕಲಬುರಗಿ | ಉಗ್ರಪ್ಪನವರ ಹೇಳಿಕೆಯಿಂದ ಕುರುಬ ಸಮುದಾಯಕ್ಕೆ ಅಪಮಾನವಾಗಿದೆ: ಕೌಲಗಿ

Date:

ಮಾಜಿ ಸಂಸದ ಉಗ್ರಪ್ಪ ಅವರು ಕುರುಬರನ್ನು ಎಸ್.ಟಿ. ವರ್ಗಕ್ಕೆ ಸೇರಿಸಬಾರದು ಎಂದು ಬೆಂಗಳೂರಿನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ನೀಡಿದ ಹೇಳಿಕೆಯನ್ನು ಗೊಂಡ ಕುರುಬ ಎಸ್.ಟಿ ಹೋರಾಟ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಮಹಾಂತೇಶ ಕೌಲಗಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಗ್ರಪ್ಪ ಅವರ ಹೇಳಿಕೆ ಕುರುಬ ಸಮುದಾಯದ ಗೌರವಕ್ಕೆ ಧಕ್ಕೆ ಉಂಟುಮಾಡಿದೆ. ತಾವು ನೀಡಿದ ಹೇಳಿಕೆಯನ್ನು ತಕ್ಷಣ ವಾಪಾಸ್ ಪಡೆಯುವ ಜತೆಗೆ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ: ಕಲಬುರಗಿ | ಶೀಘ್ರ ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಮನೆತನದವರಾದ ನೀವೇ ಎಸ್.ಟಿ ಪಟ್ಟಿಯಲ್ಲಿ ಇರುವಾಗ, ನಾವು ಆದಿವಾಸಿ ಕುರುಬರು ನಾವ್ಯಾಕೆ ಇರಬಾರದು ಎಂದು ಅವರು ಪ್ರಶ್ನಿಸಿದರು. ರಾಜ್ಯದಲ್ಲಿ ಒಟ್ಟು 50 ಜನಾಂಗಗಳು ಎಸ್.ಟಿ ಪಟ್ಟಿಯಲ್ಲಿ ಸೇರಿವೆ. ಅದರಲ್ಲಿ ಗೊಂಡ, ಕಾಡುಕುರುಬ, ಜೇನುಕುರುಬ ಸೇರಿದಂತೆ ಅನೇಕ ಉಪಜಾತಿಗಳಿವೆ. ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಕುರುಬರು ಎಸ್.ಟಿ ಪಟ್ಟಿಯಲ್ಲಿದ್ದಾರೆ. ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ರಾಜ್ಯದ ಕುರುಬ ಸಮುದಾಯಕ್ಕೂ ಅದೇ ಹಕ್ಕು ದೊರಕಬೇಕು. ಈ ಕುರಿತು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬೈಲಪ್ಪ ನೆಲೋಗಿ, ರೇವಣಸಿದ್ಧ ಸಾತನೂರು, ಶರಣು ಕನಗೊಂಡ, ವಿಠ್ಠಲ ಪೂಜಾರಿ, ನಿಂಗಪ್ಪ ಸಾಗನೂರು, ವಿಜಯಲಕ್ಷ್ಮಿ ಮುಗಳಿ, ಲಕ್ಷ್ಮಣ ಪೂಜಾರಿ, ಶಂಕರ್ ಹೇರೂರು, ಸಿದ್ದಪ್ಪ ರಸ್ತಂಪೂರ ಹಾಗೂ ವಿಠ್ಠಲ ಬರಗಾಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...