ಕಲಬುರಗಿ | ಇವಿಎಂ ಸಮಸ್ಯೆಯಿಂದ ಮತದಾನಕ್ಕೆ ಅಡಚಣೆ; ಮತದಾರರ ಬೇಸರ

Date:

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮತಗಟ್ಟೆ ಸಂಖ್ಯೆ 3ರಲ್ಲಿ ಇವಿಎಂ ಸಮಸ್ಯೆ ಎದುರಾಗಿದ್ದು, ಮತದಾರರಿಗೆ ಮತ ಚಲಾಯಿಸಲು ತೊಂದರೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಕೆಲವರು ಮತ ಚಲಾಯಿಸದೆ ಹಿಂತಿರುಗಿದ್ದಾರೆ ಎಂದು ತಿಳಿದುಬಂದಿದೆ.

ಮತಗಟ್ಟೆ ಕ್ರಮ ಸಂಖ್ಯೆ 3ರಲ್ಲಿ 2018ರ ಚುನಾವಣೆಯಲ್ಲಿ ಎರಡು ಬೂತ್‌ಗಳನ್ನು ರಚಿಸಲಾಗಿತ್ತು. ಈ ಬಾರಿ ಕೇವಲ ಒಂದೇ ಬೂತ್ ಇದ್ದು, ಅದೂ ಕೂಡ ಪದೇ ಪದೆ ಕೈ ಕೊಡುತ್ತಿದ್ದರಿಂದ ಬಹುತೇಕ ಮತದಾರರು ಮತ ಚಲಾಯಿಸಲು ಸಾಧ್ಯವಾಗಿಲ್ಲ ಎಂದು ಸ್ಥಳೀಯ ಮತದಾರರು ಅಸಮಾಧಾನ ವ್ಯಕ್ತಪಡಿಸಿದರು.

ಸ್ಥಳೀಯ ಮತದಾರರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಬೂತ್‌ ಸಂಖ್ಯೆ 3ರಲ್ಲಿ ಪ್ರತಿಬಾರಿ ಎರಡು ಮತಗಟ್ಟೆಗಳಿರುತ್ತಿದ್ದವು. ಪ್ರಸ್ತುತ ಚುನಾವಣೆಯಲ್ಲಿ ಒಂದೇ ಬೂತ್‌ನಲ್ಲಿ ಮತ ಚಲಾಯಿಸುವಂತೆ ಮಾಡಿದ್ದು ತುಂಬಾ ತೊಂದರೆಯಾಯಿತು. ಮತದಾರರ ಸಂಖ್ಯೆ ಹೆಚ್ಚಿದ್ದ ಕಾರಣ ಸುಮಾರು ಹೊತ್ತಿನಿಂದ ಕಾದು ನಿಂತ ಮತದಾರರು ಮತ ಚಲಾಯಿಸದೇ ಹೊರಟರು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಸೇಡಂ ಮತದಾರರ ಅಳಲು
ಸೇಡಂ ವಿಧಾನಸಭಾ ಕ್ಷೇತ್ರದ ಮತದಾರರು

ಇವಿಎಂ ಸಮಸ್ಯೆಯಿಂದ ಮತದಾನ ಪ್ರಕ್ರಿಯೆಗಳು ವೇಗವಾಗಿ ನಡೆಯದ ಕಾರಣ ದೂರದಿಂದ ಬಂದಿದ್ದವರು ಮತ ಚಲಾಯಿಸದೆ ಹೊರಟರು. ಚುನಾವಣೆಗೂ ಮುನ್ನವೇ ಚುನಾವಣಾಧಿಕಾರಿಗಳು ಅವೆಲ್ಲವನ್ನು ಗಮನಿಸಿಕೊಂಡು ಮತದಾನಕ್ಕೆ ಸರಾಗ ಮಾಡಿಕೊಟ್ಟು ಸಹಕರಿಸಬೇಕು. ಮುಂದಿನ ಚುನಾವಣೆಯಲ್ಲಾದರೂ ಮುಂಜಾಗೃತ ಕ್ರಮ ವಹಿಸಬೇಕು” ಎಂದು ಮತದಾರು ತಿಳಿಸಿದರು.

ಸೇಡಂ ಮತದಾರ

“ಮತದಾನ ಮಾಡಲು 200 ರಿಂದ 300 ಮಂದಿ ಸಾಲಿನಲ್ಲಿ ನಿಂತಿದ್ದರು. ತುಂಬಾ ಜನ ಇದ್ದಾರೆ, ವೇಗವಾಗಿ ಮತದಾನ ಪ್ರಕ್ರಿಯೆ ನಡೆಯುತ್ತಿಲ್ಲ ಅಂದುಕೊಂಡು ಕೆಲವೊಬ್ಬರು ನಿಂತು ಆಯಾಸಗೊಂಡು ಹೊರಗಡೆ ಹೋಗಿ ಕುಳಿತುಕೊಂಡಿದ್ದರು. 6 ಗಂಟೆ ಆಗುತ್ತಲೇ ಗೇಟ್ ಬಂದ್ ಮಾಡಿದ ಪೊಲೀಸ್ ಸಿಬ್ಬಂದಿಗಳು ಮತದಾರರಿಗೆ ಒಳಗೆ ಪ್ರವೇಶ ನೀಡಲಿಲ್ಲ ನಮ್ಮ ನೆಚ್ಚಿನ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಲಿಲ್ಲ” ಎಂದು  ಮತದಾರರು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಜಿಲ್ಲೆಯಲ್ಲಿ ಶೇ.78ರಷ್ಟು ಮತದಾನ: ಜಿಲ್ಲಾಧಿಕಾರಿ

“ಮತ ನೀಡುವಾಗ ಮತದಾರರಿಗೆ ಸಮಸ್ಯೆ ಎದುರಾಗಿದೆ. ಮತ ನೀಡಿ ಮೂರ್ನಾಲ್ಕು ನಿಮಿಷ ಆದರೂ ನಾವು ಯಾರಿಗೆ ಮತ ನೀಡಿದ್ದೇವೆ ಎನ್ನುವ ಸ್ಪಷ್ಟತೆ ನಮಗೆ ಸಿಗಲ್ಲಿಲ. ಚುನಾವಣಾಧಿಕಾರಿಗಳು ಸರ್ವರ್ ಸಮಸ್ಯೆ ನೆಪ ಹೇಳುತ್ತಿದ್ದಾರೆ” ಎಂದು ಆರೋಪಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...