ಕಲಬುರಗಿ | ಪೂರ್ವ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ವೆಲ್ಫೇರ್ ಪಾರ್ಟಿ ಮನವಿ

Date:

ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ಡಿಪ್ಲೊಮಾ (ಡಿಪಿಎಸ್‌ಇ – ಆಂಗ್ಲ ಮಾಧ್ಯಮ) ತರಬೇತಿ ಪಡೆದ ಅಭ್ಯರ್ಥಿಗಳನ್ನು ಸರ್ಕಾರಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗಳು ಹಾಗೂ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಕರಾಗಿ ನೇಮಕಾತಿ ಮಾಡಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಮನವಿ ಸಲ್ಲಿಸಿದೆ.

ಶುಕ್ರವಾರ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮುಬಿನ್ ಅಹ್ಮದ್ ಅವರ ನೇತೃತ್ವದಲ್ಲಿ ಪಕ್ಷದ ಪದಾಧಿಕಾರಿಗಳು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ರಾಜ್ಯ ಕಾರ್ಯದರ್ಶಿ ಮುಬಿನ್ ಅಹ್ಮದ್ ಮಾತನಾಡಿ, ‘2019 – 20ನೇ ಶೈಕ್ಷಣಿಕ ವರ್ಷದಿಂದ ಕಲಬುರಗಿ ಹಾಗೂ ಹೊಸದುರ್ಗದಲ್ಲಿನ ಸರ್ಕಾರಿ ತರಬೇತಿ ಸಂಸ್ಥೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಡಿಪಿಎಸ್‌ಇ ಕೋರ್ಸ್ ಆರಂಭಿಸಲಾಗಿದ್ದು, ಕಳೆದ ಆರು ವರ್ಷಗಳಲ್ಲಿ ನೂರಾರು ಅಭ್ಯರ್ಥಿಗಳು ಈ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಪೂರ್ವ ಪ್ರಾಥಮಿಕ ಹಂತದ ಮಕ್ಕಳಿಗೆ ಅಗತ್ಯವಿರುವ ಪಾಠಶಾಸ್ತ್ರೀಯ ಜ್ಞಾನ, ಮನೋವೈಜ್ಞಾನಿಕ ಅರಿವು ಹಾಗೂ ಬೋಧನಾ ಕೌಶಲ್ಯಗಳನ್ನು ಈ ಕೋರ್ಸ್ ಒಳಗೊಂಡಿದ್ದರೂ, ಇದುವರೆಗೆ ಈ ಅಭ್ಯರ್ಥಿಗಳಿಗೆ ಯಾವುದೇ ಸರ್ಕಾರಿ ನೇಮಕಾತಿ ಅವಕಾಶ ದೊರಕಿಲ್ಲ’ ಎಂದು ಆಕ್ಷೇಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಪ್ರಸ್ತುತ ರಾಜ್ಯದಲ್ಲಿ 1,500ಕ್ಕೂ ಹೆಚ್ಚು ಸರ್ಕಾರಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗಳು ಹಾಗೂ 276 ಕರ್ನಾಟಕ ಪಬ್ಲಿಕ್ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಇವುಗಳಲ್ಲಿ ಎಲ್‌ಕೆಜಿ, ಯುಕೆಜಿ ಜೊತೆಗೆ 1 ಮತ್ತು 2ನೇ ತರಗತಿಗಳು ಆರಂಭವಾಗಿವೆ. ಆದರೆ ಬಹುತೇಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಹಂತಕ್ಕೆ ತರಬೇತಿ ಪಡೆದ ಶಿಕ್ಷಕರ ಕೊರತೆ ಎದುರಾಗಿದೆ. ಈ ಹಿನ್ನಲೆಯಲ್ಲಿ ಡಿಪಿಎಸ್‌ಇ ತರಬೇತಿ ಪಡೆದ ಶಿಕ್ಷಕರನ್ನು ನೇಮಕ ಮಾಡಿದರೆ, ಮಕ್ಕಳ ಜೀವನದ ಮೊದಲ ಎಂಟು ವರ್ಷಗಳಲ್ಲಿ ಅಗತ್ಯವಿರುವ ಮಾನಸಿಕ, ಬೌದ್ಧಿಕ, ಸಾಮಾಜಿಕ ಮತ್ತು ಸೃಜನಾತ್ಮಕ ಬೆಳವಣಿಗೆಗೆ ಸಹಕಾರಿಯಾಗಲಿದೆ’ ಎಂದು ಹೇಳಿದರು.

‘ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ನಿರಂತರವಾಗಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುಸಿಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಬುನಾದಿ ಶಿಕ್ಷಣದ ದುರ್ಬಲತೆಯೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಪ್ರಾಥಮಿಕ ಹಂತದಲ್ಲೇ ಗುಣಮಟ್ಟದ ಶಿಕ್ಷಣ ಒದಗಿಸಿದಲ್ಲಿ ಮುಂದಿನ ಹಂತಗಳಲ್ಲಿ ಮಕ್ಕಳ ಶೈಕ್ಷಣಿಕ ಸಾಧನೆ ಉತ್ತಮಗೊಳ್ಳಲಿದೆ’ ಎಂದು ತಿಳಿಸಿದೆ.

ಇದನ್ನು ಓದಿದ್ದೀರಾ? ತಮಿಳುನಾಡು SIR: 97 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್, ಚೆನ್ನೈನಲ್ಲೇ 14.25 ಲಕ್ಷ ಮತದಾರರನ್ನು ಕೈಬಿಟ್ಟ ಆಯೋಗ

‘ಡಿಪಿಎಸ್‌ಇ ಕೋರ್ಸ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳಲ್ಲಿ ಸುಮಾರು 90 ಶೇಕಡಾ ಮಹಿಳೆಯರಾಗಿದ್ದು, ಹಲವರು ವಯೋಮಿತಿಯನ್ನು ಮೀರುವ ಹಂತಕ್ಕೆ ಬಂದಿದ್ದಾರೆ. ಹಲವು ವರ್ಷಗಳಿಂದ ಉದ್ಯೋಗ ನಿರೀಕ್ಷೆಯಲ್ಲಿ ಇರುವ ಈ ಅಭ್ಯರ್ಥಿಗಳ ಸ್ಥಿತಿಗತಿಯನ್ನು ಪರಿಗಣಿಸಿ, ಮಾನವೀಯ ದೃಷ್ಟಿಯಿಂದ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳು ಹಾಗೂ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಸಂಬಂಧಿಸಿದಂತೆ ಅಗತ್ಯ ವೃಂದ ಮತ್ತು ನೇಮಕಾತಿ ನಿಯಮಗಳು (ಸಿ & ಆರ್ ರೂಲ್ಸ್) ರೂಪಿಸಿ ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕೆಂದು’ ಆಗ್ರಹಿಸಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಫಿರೋಜ್ ಅಹ್ಮದ್ ಸೇರಿದಂತೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಪ್ರಮುಖ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...