ಕಲಬುರಗಿ | ವಿವಾದಿತ ಕಾಯ್ದೆಗಳ ರದ್ದತಿಗೆ ವೆಲ್ಫೇರ್ ಪಾರ್ಟಿ ಆಗ್ರಹ

Date:

ಬಿಜೆಪಿ ಸರ್ಕಾರವು ಕಳೆದ ಬಾರಿ ಜಾರಿಗೆ ತಂದ ʼಕರ್ನಾಟಕ ಜಾನುವಾರು ಸಂರಕ್ಷಣಾ ಕಾಯ್ದೆ-2021ʼ ಮತ್ತು ʼಕರ್ನಾಟಕ ಧರ್ಮ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆ-2021ʼಗಳು ಅತಿ ವಿವಾದಿತ, ಕೋಮು ಪ್ರಚೋದಿತ ಮತ್ತು ಸಂವಿಧಾನ ವಿರೋಧಿ ಕಾನೂನುಗಳಾಗಿದ್ದು, ಕೂಡಲೇ ಈ ಕಾನೂನುಗಳನ್ನು ರದ್ದು ಮಾಡಬೇಕು ಎಂದು ವೆಲ್ಫೇರ್‌ ಪಾರ್ಟಿ ಆಗ್ರಹಿಸಿದೆ.

ಈ ಕೆಳಕಂಡ ಹಕ್ಕೊತ್ತಾಯಗಳನ್ನು ಕಲಬುರಗಿ ಅಪರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿದೆ.
• ಈ ಕಾಯ್ದೆಯ ಅನುಷ್ಠಾನದಿಂದಾಗಿ ರಾಜ್ಯದಲ್ಲಿ ಭಯದ ವಾತಾವರಣ ಉಂಟಾಗಿದೆ. ಗೋ ಸಾಗಾಣಿಕೆದಾರರ ಮೇಲೆ ಪೊಲೀಸರಿಂದ ಶೂಟೌಟ್, ಮನೆ-ಮುಗ್ಗಟ್ಟುಗಳ ಜಪ್ತಿ ಮುಂತಾದ ಕಳವಳಕಾರಿ ಘಟನೆಗಳು ನಡೆದಿರುವುದು ಆತಂಕಕಾರಿಯಾಗಿದೆ.
•ಈ ಕರಾಳ ಕಾನೂನಿನಿಂದಾಗಿ ರೈತರು ತಾವು ಬೆಳೆಸಿದ ಜಾನುವಾರುಗಳನ್ನು ಮಾರಾಟ ಮಾಡಲು ಸಾಧ್ಯವಾಗದೆ, ತಮ್ಮ ನೆಚ್ಚಿನ ಕೃಷಿಯಾದ ಜಾನುವಾರು ಸಾಕಾಣಿಕೆಯನ್ನು ಮುಂದುವರೆಸಲಾಗದೆ ಕಂಗಾಲಾಗಿದ್ದಾರೆ. ಇದು ರೈತ ಸಮುದಾಯಕ್ಕೆ ಅನ್ಯಾಯವನ್ನುಂಟು ಮಾಡಿದೆ.
•ಕರ್ನಾಟಕ ಧರ್ಮ ಸ್ವಾತಂತ್ರ ಸಂರಕ್ಷಣಾ ಕಾಯ್ದೆ, 2021 (ಮತಾಂತರ ನಿಷೇಧ ಕಾಯ್ದೆ) ಕಾಯ್ದೆಯನ್ನು ನೆಪ ಇಟ್ಟುಕೊಂಡು ಕೋಮುವಾದಿಗಳು ಅಲ್ಪಸಂಖ್ಯಾತರ ಮೇಲೆ ನಿರಂತರ ದೌರ್ಜನ್ಯ ಎಸಗುತ್ತಿದ್ದಾರೆ.
•ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಯಾವುದೇ ಒತ್ತಡವಿಲ್ಲದೆ, ತಮಗೆ ಬೇಕಾದ ಧರ್ಮವನ್ನು ಒಪ್ಪಿ, ಆ ಪ್ರಕಾರ ನಡೆದುಕೊಂಡು ಹೋಗಲು ಅವಕಾಶ ಕಲ್ಪಿಸಿದೆ. ಆದರೆ ಈ ಕಾನೂನು ಚಾಲ್ತಿಯಲ್ಲಿರುವುದು ಸಂವಿಧಾನ ವಿರೋಧಿಯಾಗಿದೆ ಮತ್ತು ಇದು ಸಂಘ ಪರಿವಾರದ ಕೋಮು ಅಜೆಂಡಾದ ಭಾಗವಾಗಿದೆ.
•ಚುನಾವಣೆ ಪ್ರಣಾಳಿಕೆಯ ಆಶ್ವಾಸನೆ: 2023ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ಒಂದು ವರ್ಷದ ಒಳಗೆ ಇಂತಹ ಕರಾಳ ಮತ್ತು ಜನವಿರೋಧಿ ಕಾನೂನುಗಳನ್ನು ಹಿಂದಕ್ಕೆ ಪಡೆಯುವ ಬಗ್ಗೆ ಸ್ಪಷ್ಟವಾದ ಆಶ್ವಾಸನೆಯನ್ನು ನೀಡಿತ್ತು. ಆದ್ದರಿಂದ, ಪ್ರಸ್ತುತ ಸರಕಾರವು ತನ್ನ ಭರವಸೆಯನ್ನು ಈಡೇರಿಸುವ ತುರ್ತು ಅವಶ್ಯಕತೆಯಿದೆ.
•4% ಮುಸ್ಲಿಂ ಮೀಸಲಾತಿ ಮರುಸ್ಥಾಪನೆ: ಬಿಜೆಪಿ ಸರ್ಕಾರ ರದ್ದುಪಡಿಸಿದ 4% ಮುಸ್ಲಿಂ ಮೀಸಲಾತಿಯನ್ನು ತಕ್ಷಣವೇ ಮರುಸ್ಥಾಪಿಸಬೇಕು. ಇದು ಮುಸ್ಲಿಂ ಸಮುದಾಯದ ಸಾಮಾಜಿಕ ನ್ಯಾಯ ಮತ್ತು ಶಿಕ್ಷಣ, ಉದ್ಯೋಗದಲ್ಲಿ ಸಮಾನ ಅವಕಾಶವನ್ನು ಖಾತರಿಪಡಿಸಲು ಅತ್ಯವಶ್ಯಕವಾಗಿದೆ.

ಇದನ್ನೂ ಓದಿ: ಕಲಬುರಗಿ | ರಶೀದ್ ದಸ್ತಗೀರ್ ಮುತ್ಯಾ ಮೇಲೆ ಹಲ್ಲೆ, ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗಾಗಿ, ಮುಂಬರುವ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ಜಾನುವಾರು ಸಂರಕ್ಷಣಾ ಕಾಯ್ದೆ-2021 ಹಾಗೂ ಕರ್ನಾಟಕ ಧರ್ಮ ಸ್ವಾತಂತ್ರ ಸಂರಕ್ಷಣಾ ಕಾಯ್ದೆ-2021 ಅನ್ನು ರದ್ದುಪಡಿಸಬೇಕು. ರದ್ದುಪಡಿಸಲಾದ 4% ಮುಸ್ಲಿಂ ಮೀಸಲಾತಿಯನ್ನು ತಕ್ಷಣವೇ ಮರುಸ್ಥಾಪಿಸಬೇಕು. ಈ ಮೂಲಕ ರಾಜ್ಯದಲ್ಲಿ ರೈತರಿಗೆ, ಅಲ್ಪಸಂಖ್ಯಾತರಿಗೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಲ್ಲಿ ನಂಬಿಕೆ ಇಟ್ಟಿರುವ ಎಲ್ಲ ನಾಗರಿಕರಿಗೆ ನ್ಯಾಯ ಒದಗಿಸಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಈ ವೇಳೆ ವೆಲ್ಫೇರ್ ಪಾರ್ಟಿ ಕಲಬುರಗಿ ಜಿಲ್ಲಾಧ್ಯಕ್ಷ ಸಲೀಂ ಅಹ್ಮದ್ ಚಿತ್ತಾಪುರಿ, ರಾಜ್ಯ ಕಾರ್ಯದರ್ಶಿ ಮುಬೀನ್ ಅಹ್ಮದ್, ಜಂಟಿ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಅಫ್ಜಾಲ್ ಮಹಮೂದ್, ಬಗ್ಬಾನ್ ಜಮಾತ್ ಉಪಾಧ್ಯಕ್ಷ ಹೈದರ ಅಲಿ ಬಗ್ಬಾನ್, ಅಡ್ವೊಕೇಟ್ ಅಬ್ದುಲ್ ಜಬ್ಬಾರ್ ಗೋಲಾ , ಅಫ್ಜಲ್ ಮೆಹಮೂದ್ ಸಲೀಮ್ ಸಗರಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...