ಕಲಬುರಗಿ | ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ವೆಲ್ಫೇರ್ ಪಾರ್ಟಿ ಆಗ್ರಹ

Date:

ಕಲಬುರಗಿ ನಗರದಲ್ಲಿ ಕುಡಿಯುವ ನೀರು ಸರಬರಾಜು ಅವ್ಯವಸ್ಥೆಯಿಂದ ಕೂಡಿದ್ದು, ಕೂಡಲೇ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಮುಂದಾಗಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ  ರಾಜ್ಯ ಕಾರ್ಯದರ್ಶಿ ಮುಬೀನ್ ಆಗ್ರಹಿಸಿದರು.

ಕಲಬುರಗಿಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, “ವಾರದಲ್ಲಿ ಒಂದೆರಡು ಬಾರಿ ಮಾತ್ರ ಕುಡಿಯುವ ಮಾತ್ರ ಸರಬರಾಜು ಮಾಡುತ್ತಾರೆ. ಅದರಲ್ಲೂ ಆ ನೀರು ಕಲುಷಿತವಾಗಿದ್ದು, ಜನರು ಬಳಸಲು ಯೋಗ್ಯವಾಗಿಲ್ಲ. ಸಾರ್ವಜನಿಕರು ದಿನಂಪ್ರತಿ 50-60 ರೂಪಾಯಿ ನೀಡಿ ಕುಡಿಯುವ ನೀರು ಖರೀದಿಸುತ್ತಿದ್ದಾರೆ. ಇದು ಜನಸಾಮಾನ್ಯರಿಗೆ ಮತ್ತಷ್ಟು ಭಾರವಾಗುತ್ತದೆ”‌ ಎಂದರು.

ಕುಡಿಯುವ ನೀರಿನ ಸಮಸ್ಯೆ ಕುರಿತು ಸರ್ಕಾರದ ಗಮನಕ್ಕೆ ತಂದಾಗ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್‌ ಅವರು ಸಭೆ ನಡೆಸಿ ಉನ್ನತಾಧಿಕಾರಿಗಳನ್ನು ಕರೆದು ತ್ವರಿತವಾಗಿ ಈ ಸಮಸ್ಯೆ ಪರಿಹರಿಸಬೇಕೆಂದು ಹೇಳಿದ್ದರು. ಅದು ಅನುಷ್ಠಾನವಾಗುತ್ತಿಲ್ಲ‍. ಎಲ್‌ ಆಂಡ್ ಟಿ ಕಂಪನಿ ಇದರ ಗುತ್ತಿಗೆ ಪಡೆದುಕೊಂಡಿದ್ದು, ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಪ್ರತಿ ದಿನ ನೀರು ಸರಬರಾಜು ಮಾಡಿ ಈ ಕುಡಿಯುವ ನೀರಿನ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸಲು ಮುಂದಾಗಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ಪೌರಕಾರ್ಮಿಕರ ಹಕ್ಕೊತ್ತಾಯ ಈಡೇರಿಸುವಂತೆ ಆಗ್ರಹ

ಪತ್ರಿಕಾಗೋಷ್ಟಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಎಂ ಎ ಕದೀರ್, ಉಪಾಧ್ಯಕ್ಷ ಸಿದ್ದಣ್ಣ ಚಕರಾ, ರಾಜ್ಯ ಕಾರ್ಯದರ್ಶಿ ಮುಬೀನ್ ಹಾಗೂ ಜಿಲ್ಲಾ ಕಾರ್ಯದರ್ಶಿ ಮುನೀರ್ ಹಾಶ್ಮಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...