ಕಲಬುರಗಿ | ಡೆಂಘೀ ಸೇರಿದಂತೆ ಸಾಂಕ್ರಾಮಿಕ ರೋಗ ತಡೆಗಟ್ಟಿ: ಸರ್ಕಾರಕ್ಕೆ ವೆಲ್ಫೇರ್ ಪಾರ್ಟಿ ಆಗ್ರಹ

Date:

“ಕಲಬುರಗಿ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಹಾವಳಿ ದಿನೇ ದಿನೇ ವ್ಯಾಪಕವಾಗುತ್ತಿದೆ. ಝೀಕಾ ವೈರಾಣು ಸೋಂಕು, ಚಿಕೂನ್ ಗುನ್ಯಾ ರಾಜ್ಯದಲ್ಲಿ ಸದ್ದು ಮಾಡುತ್ತಿವೆ. ಸರ್ಕಾರ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು” ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮುಬೀನ್ ಅಹ್ಮದ್ ಆಗ್ರಹಿಸಿದ್ದಾರೆ.

“ಮಾಧ್ಯಮಗಳ ವರದಿಯ ಪ್ರಕಾರ ಈಗಾಗಲೇ ಡೆಂಗ್ಯೂ ಪೀಡಿತರ ಸಂಖ್ಯೆ 7164ಕ್ಕೆ ಏರಿಕೆಯಾಗಿದೆ. ಈ ಸಾಂಕ್ರಾಮಿಕ ರೋಗ ತಡೆಗಟ್ಟಲು ಸರಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಬೇಕಾಗಿದೆ” ಎಂದು ತಿಳಿಸಿದ್ದಾರೆ.

ಹಾಗೆಯೇ ಝೀಕಾ ಸೋಂಕು, ಚಿಕೂನ್‌ ಗುನ್ಯಾ ಮುಂತಾದ ರೋಗಗಳು ಹರಡುವ ಸೂಚನೆಗಳು ಕೂಡ ಕಂಡುಬರುತ್ತಿದೆ. ಈ ರೋಗಗಳು ವ್ಯಾಪಕವಾಗಿ ಹರಡುವ ಮೊದಲೇ ಆರೋಗ್ಯ ಇಲಾಖೆ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕಾಗಿದೆ. ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಚಿಕಿತ್ಸೆ ದೊರೆಯಲು ಅವಕಾಶ ಮಾಡಿಕೊಡಬೇಕಾಗಿದೆ. ಅದರಲ್ಲೂ ಝೀಕಾ ವೈರಾಣು ಸೋಂಕಿಗೆ ನಿರ್ದಿಷ್ಟ ಚಿಕಿತ್ಸೆ ಲಭ್ಯವಿರದ ಕಾರಣ ಸರ್ಕಾರ ಈ ರೋಗ ನಿಯಂತ್ರಿಸಲು ಅಗತ್ಯಕ್ರಮ ಕೈಗೊಳ್ಳಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಆಗ್ರಹಿಸುತ್ತಿದೆ ಎಂದು ಮುಬೀನ್ ಅಹ್ಮದ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...