ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದಲ್ಲಿ ದರ್ಶನಕ್ಕೆ ಬಂದಿದ್ದ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.
ಗುರು ಪೂರ್ಣಿಮೆ ಹಿನ್ನೆಲೆ ಗಾಣಗಾಪುರದ ದತ್ತನ ಸನ್ನಿಧಿಯಲ್ಲಿ ದೇವರ ದರ್ಶನ ವೇಳೆ ಕಾಲ್ತುಳಿತದಿಂದ ದುರ್ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ.
ಬೀದರ್ ಜಿಲ್ಲೆಯ ಬಸವಕಲ್ಯಾಣ ಮೂಲದ ಕಲಾವತಿ (50) ಮೃತ ಮಹಿಳೆ ಎಂದು ತಿಳಿದು ಬಂದಿದೆ.ಗುರು ಪೂರ್ಣಿಮೆ ಹಿನ್ನೆಲೆ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಿಂದ ಅಪಾರ ಪ್ರಮಾಣದಲ್ಲಿ ಭಕ್ತರು ಬಂದಿದ್ದರು.
ಈ ವೇಳೆ ದರ್ಶನ ಪಡೆಯಲು ಮುಂದಾದಾಗ ಜನದಟ್ಟಣೆ ಉಂಟಾಗಿ ಕಾಲ್ತುಳಿತಕ್ಕೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಇದನ್ನೂ ಓದಿ : ಕಲಬುರಗಿ | ವಸತಿ ಶಾಲೆಗೆ ಸೇರಿಸಿದಕ್ಕೆ 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ!





