ಕಲಬುರಗಿ | ರಷ್ಯಾ ಸೇನೆಯಲ್ಲಿ ಸಿಕ್ಕಿಕೊಂಡಿದ್ದ ಯುವಕರು ತಮ್ಮೂರಿಗೆ ವಾಪಸ್

Date:

ಉಕ್ರೇನ್‌ ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾ ಸೇನೆಯಲ್ಲಿ ಸಿಲುಕಿಕೊಂಡಿದ್ದ ರಾಜ್ಯದ ಮೂವರು ಯುವಕರು ಕರ್ನಾಟಕಕ್ಕೆ ಮರಳಿ ಬಂದಿದ್ದಾರೆ. ತಮ್ಮನ್ನು ಸೆಕ್ಯೂರಿಟಿ ಕೆಲಕ್ಕೆಂದು ಕರೆದೊಯ್ದಿದ್ದ ಏಜೆಂಟ್‌, ಯುದ್ಧಭೂಮಿಯಲ್ಲಿ ಕೆಲಸ ಮಾಡಲು ರಷ್ಯಾ ಸೇನೆಗೆ ಒಪ್ಪಿಸಿದ್ದನೆಂದು ಯುವಕರು ಆರೋಪಿಸಿದ್ದಾರೆ.

ರಷ್ಯಾ ಸೇನೆಯಲ್ಲಿ ಸಿಲುಕಿಕೊಂಡಿದ್ದ ಆರು ಮಂದಿ ಭಾರತೀಯರು ದೇಶಕ್ಕೆ ಮರಳಿದ್ದಾರೆ. ಅವರಲ್ಲಿ ಮೂವರು ರಾಜ್ಯದ ಕಲಬುರಗಿ ಜಿಲ್ಲೆಯವರು. ಕಲಬುರಗಿ ನಗರದ ನೂರಾನಿ ಮೊಹಲ್ಲಾ ನಿವಾಸಿ ಸೈಯದ್ ಇಲಿಯಾಸ್ ಹುಸೇನಿ, ಇಸ್ಲಾಮಬಾದ ಕಾಲೋನಿಯ ನಿವಾಸಿ ಮೊಹಮ್ಮದ್​​ ಸಮೀರ್ ಹಾಗೂ ಮಿಜಗುರಿ ಪ್ರದೇಶದ ಮೊಹಮ್ಮದ್ ನಯೂಮ್ ತಮ್ಮೂರಿಗೆ ವಾಪಸ್ಸಾಗಿದ್ದಾರೆ.

ತಾವು ರಷ್ಯಾ ಸೇನೆಯಲ್ಲಿ ಎದುರಿಸಿದ ಸವಾಲುಗಳ ಬಗ್ಗೆ ಯುವಕರು ವಿವರಿಸಿದ್ದಾರೆ. “ಮುಂಬೈ ಮೂಲದ ಏಜೆಂಟ್‌ವೊಬ್ಬ ತಮಗೆ ವೆಬ್‌ಸೈಟ್‌ ಮೂಲಕ ಪರಿಚಯವಾಗಿದ್ದ. ರಷ್ಯಾದಲ್ಲಿ ಹೆಚ್ಚು ಸಂಬಳ ಬರುವ ಸೆಕ್ಯೂರಿಟಿ ಕೆಲಸ ಕೊಡಿಸುವುದಾಗಿ ಹೇಳಿ ರಷ್ಯಾಗೆ ಕರೆದೊಯ್ದಿದ್ದ. ಆದರೆ, ರಷ್ಯಾ ಸೆಕ್ಯೂರಿಟಿ ಕೆಲಸದ ಬದಲಾಗಿ ಯುದ್ಧ ಭೂಮಿಯಲ್ಲಿ ಕೆಲಸ ಮಾಡಲು ರಷ್ಯಾ ಸೇನೆಯ ವಶಕ್ಕೆ ನೀಡಿದ್ದ” ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ, ಈ ಮೂವರು ಮತ್ತು ಇತರ ಮೂವರು ಯುವಕರು ತಮ್ಮನ್ನು ರಷ್ಯಾ ಸೇನೆ ಬಲವಂತವಾಗಿ ಇರಿಸಿಕೊಂಡಿದೆ. ತಮ್ಮನ್ನು ರಕ್ಷಿಸಬೇಕೆಂದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ವಿಡಿಯೋ ವೈರಲ್ ಆದ ಬಳಿಕ, ಯುವಕರ ರಕ್ಷಣೆಗೆ ಕಾಂಗ್ರೆಸ್‌ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. “ವರದಿಗಳ ಪ್ರಕಾರ ಕಳೆದೊಂದು ವರ್ಷದಲ್ಲಿ ನೂರಕ್ಕೂ ಹೆಚ್ಚು ಯುವಕರನ್ನು ರಷ್ಯಾ ಸೇನೆ ತನ್ನ ಕೆಲಸಕ್ಕಾಗಿ ಬಳಸಿಕೊಂಡಿದೆ. ರಷ್ಯಾದಲ್ಲಿ ಸಿಲುಕಿ ಸಂಕಷ್ಟ ಎದುರಿಸಯತ್ತಿರುವ ಎಲ್ಲ ಭಾರತೀಯರು ಹಾಗೂ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಬೇಕು” ಎಂದು ಒತ್ತಾಯಿಸಿದ್ದರು.

ಅದಾಗ್ಯೂ, ಭಾರತೀಯರನ್ನು ದೇಶಕ್ಕೆ ಮರಳಿ ತರಲು ರಷ್ಯಾ-ಉಕ್ರೇನ್ ಯುದ್ಧವನ್ನೇ ಕೆಲ ಗಂಟೆಗಳ ಕಾಲ ನಿಲ್ಲಿಸಿದ್ದ ಎಂದು ಬಡಾಯಿಕೊಚ್ಚಿಕೊಳ್ಳುತ್ತಿದ್ದ ಪ್ರಧಾನಿ ಮೋದಿ, ಈ ಯುವಕರ ರಕ್ಷಣೆಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಆಕ್ರೋಶ ವ್ಯಕ್ತವಾಗಿತ್ತು.

ಇದೀಗ, ಯುವಕರು ತಮ್ಮೂರಿಗೆ ಮರಳಿದ್ದು, ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...