ಕಲಬುರಗಿ | ಮಹಿಳೆಯರೊಂದಿಗೆ ಬಸ್‌ನಲ್ಲಿ ಜಿಲ್ಲಾ ಪಂ. ಉಪಾಧ್ಯಕ್ಷೆ ಪ್ರಯಾಣ

Date:

ಮಹಿಳೆಯರ ಯೋಜನೆಯನ್ನು ಮೊಟ್ಟ‌ಮೊದಲಿಗೆ ಜಾರಿಗೆ ತಂದಿದ್ದು, ಹೆಣ್ಣು ಮಕ್ಕಳಿಗೆ ಶಕ್ತಿ ತುಂಬುವ ಕಾರ್ಯ ಮಾಡಿದ್ದೇವೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಅನಿತಾ ಪವನಕುಮಾರ ವಳಕೇರಿ ಹೇಳಿದರು.

ಕಲಬುರಗಿ ತಾಲೂಕಿನ ನಂದಿಕೂರ ಗ್ರಾಮದ ಬಸ್ ನಿಲ್ದಾಣದಲ್ಲಿ ಮಹಿಳೆಯರಿಗೆ ಟಿಕೆಟ್ ನೀಡುವ ಮೂಲಕ ಶಕ್ತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

“ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆ ಸಿದ್ಧರಾಮಯ್ಯನವರು ಶಕ್ತಿ ಯೋಜನೆ ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದ ಸಮರ್ಥ ಮುಖ್ಯಮಂತ್ರಿಗಳಾಗಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಅನುಷ್ಠಾನದ ಬಗ್ಗೆ
ಸಚಿವ ಸಂಪುಟದಲ್ಲಿ ಐದಾರು ತಾಸುಗಳ ಸಮಯ ಚರ್ಚೆ ಆಗಿದೆ. ಹಾಗಾಗಿ ತಾಯಂದಿರ ಮೂಲಕವೇ ವಿನೂತನ ಯೋಜನೆಗೆ ಚಾಲನೆ ನೀಡಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗದಗ | ಅಧಿಕಾರಿಗಳು ಜನಪರ ಆಡಳಿತಕ್ಕೆ ಅಧಿಕಾರಿಗಳು ಶ್ರಮಿಸಬೇಕು: ಸಚಿವ ಎಚ್ ಕೆ ಪಾಟೀಲ್‌

“ಮೊಟ್ಟ ಮೊದಲ ಯೋಜನೆಗೆ ಶಕ್ತಿ ಎಂದು ಹೆಸರಿಟ್ಟಿರುವುದು ಅರ್ಥಪೂರ್ಣವಾಗಿದ್ದು, ಚುನಾವಣಾ ಪೂರ್ವದಲ್ಲಿ ಮಾತುಕೊಟ್ಟಂತೆ ನಾವು ನಡೆದುಕೊಂಡಿದ್ದೇವೆ. ಮಹಿಳೆಯರಿಗೆ ಶಕ್ತಿ ಕಾರ್ಡ್‌ ಕೊಡುವ ಪ್ರಕ್ರಿಯೆಯನ್ನು ಬೇಗನೇ ಪೂರ್ಣಗೊಳಿಸುತ್ತೇವೆ. ಜುಲೈ 1ರಿಂದ ಅನ್ನಭಾಗ್ಯ ಜಾರಿಯಾಗಲಿದೆ” ಎಂದು ತಿಳಿಸಿದರು.

ಗ್ರಾಮದ ಮುಖಂಡರುಗಳಾದ ಮಲ್ಲಣ್ಣ ಗೌಡರು, ಶಾಮರಾವ ಪಾಟೀಲ, ಶಿವಲಿಂಗ ಶರಣರು, ಶ್ರೀಕಾಂತ್ ಉಳ್ಳಿ, ಭೀಮಬಾಯಿ, ಕಾಂತಬಾಯಿ, ಲಕ್ಷ್ಮಣ ಪೂಜಾರಿ, ರಾಚಯ್ಯ ಸ್ವಾಮಿ ಸೇರಿದಂತೆ ಗ್ರಾಮಸ್ಥರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...