ಕಲಬುರಗಿ | ಬಲಗೈ ಸಮುದಾಯಕ್ಕೆ ಅನ್ಯಾಯ ಆರೋಪ: ಮಾ. 25ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟಕ್ಕೆ ಕರೆ

Date:

ನಾಗಮೋಹನ್ ದಾಸ್ ವರದಿಯಲ್ಲಿ ಬಲಗೈ ಸಮುದಾಯದ ಹಿತಾಸಕ್ತಿಯನ್ನು ಕಡೆಗಣಿಸಲಾಗಿದೆ ಎಂಬ ಆರೋಪದ ಹಿನ್ನೆಲೆ, ವರದಿಯನ್ನು ತಿರಸ್ಕರಿಸುವಂತೆ ಆಗ್ರಹಿಸಿ ಮಾರ್ಚ್ 25ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟ ಬಲಗೈ ಸಮುದಾಯದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಮಂಗಳವಾರ ಜೇವರ್ಗಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ‘ಬಲಗೈ ಹೋರಾಟ ಸಮಿತಿ’ಯ ಪೂರ್ವಭಾವಿ ನಡೆಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಾಂತಪ್ಪ ಕೂಡಲಗಿ ಮಾತನಾಡಿ, “ಸಮುದಾಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹೋರಾಟ ನಡೆಸುವುದು ಅಗತ್ಯವಾಗಿದೆ. ಜೇವರ್ಗಿ ತಾಲ್ಲೂಕಿನಿಂದ ಸುಮಾರು 1000ಕ್ಕೂ ಹೆಚ್ಚು ಜನರು ಹೋರಾಟದಲ್ಲಿ ಭಾಗವಹಿಸಲಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಮರಿಯಪ್ಪ ಬಡಿಗೇರ್ ಮಾತನಾಡಿ, “ಸಮುದಾಯದ ಹಕ್ಕುಗಳ ರಕ್ಷಣೆಗೆ ನಡೆಯುತ್ತಿರುವ ಈ ಹೋರಾಟಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು” ಎಂದು ಕರೆ ನೀಡಿದರು.

ಹಿರಿಯ ಮುಖಂಡರಾದ ಸುಭಾಷ್ ಚನ್ನೂರ ಹಾಗೂ ಪುಂಡಲೀಕ ಗಾಯಕ್ವಾಡ್ ಮಾತನಾಡಿ, ಹಕ್ಕೊತ್ತಾಯದ ಹೋರಾಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬೆಂಬಲ ನೀಡಬೇಕೆಂದು ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಒಳ ಮೀಸಲಾತಿ ಗೊಂದಲ ನಿವಾರಿಸಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸುವಂತೆ ಎಐಡಿಎಸ್‌ಒ ಆಗ್ರಹ

ಸಭೆಯಲ್ಲಿ ಭೀಮರಾಯ ನಗನೂರ, ಮಲ್ಲಣ್ಣ ಕೊಡಚಿ, ಬಸಣ್ಣ ಸರ್ಕಾರ್, ಹಯ್ಯಾಳಪ್ಪ ಗಂಗಾಕರ್, ವಕೀಲರಾದ ರಾಜಶೇಖರ್ ಶಿಲ್ಪಿ, ಮಲ್ಲಿಕಾರ್ಜುನ್ ಕಟ್ಟಿಮನಿ, ಸಿದ್ಧರಾಮಕಟ್ಟಿ, ಮಹಾದೇವ ಕೋಳಕೂರ, ಶ್ರೀಹರಿ ಕರ್ಕಳ್ಳಿ, ರವಿ ಕುಳಗೇರಿ, ದೌಲಪ್ಪ ಮದನ್, ಸಿದ್ದು ಕೆರೂರ್, ಮಾಪಣ್ಣ ಕಟ್ಟಿ, ಗುಂಡಪ್ಪ ಜಡಗಿ, ವಿಶ್ವಾರಾಧ್ಯ ಗೋಪಾಲ್ಕರ್, ರಾಯಪ್ಪ ಬಾರಗಿಡ, ಶ್ರೀಮಂತ ಧನ್ಯಕರ, ಹರಿಚಂದ್ರ ಕೊಡಚಿ, ನಿಜಲಿಂಗ ದೊಡ್ಡಮನಿ, ಶಾಂತು ಜಮಖಂಡಿ, ಸಂಗಮೇಶ ಕೊಂಬಿನ, ಶಿವಕುಮಾರ್ ಗೋಲ, ಬಾಗರೆಡ್ಡಿ ಆಂದೋಲ, ಮಲ್ಲಮ್ಮ ಕೊಬ್ಬಿನ, ಜಗದೇವಿ ಜಟ್ಟನಾಕರ್, ವಿಜಯ್ ಕುಮಾರ್ ಧರೆನ್, ಪ್ರಭಾಕರ್ ಸಾಗರ್, ಮರೆಪ್ಪ ಬೇಗಾರ್, ಶರಣು ಬಡಿಗೇರ್, ರಾಜು ಹಾಲಗಡ್ಲ, ಶಿವ ಶರಣಪ್ಪ ಮಾರಡಗಿ, ಸೂರ್ಯಕಾಂತ್ ಡುಗನ್ನರ್, ರೇವಣಸಿದ್ದ ಬಿರಾಳ್, ಯಶವಂತ ಬಡಿಗೇರ್, ಶ್ರೀಮಂತ ಕಿಲ್ಲೇದಾರ್ ಮಂಡೇವಾಲ್, ಹಣಮಂತ ಟೇಲರ್, ಮಿಲಿಂದ ಸಾಗರ್ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...

ಕಲಬುರಗಿ | ಪೋಕ್ಸೊ ಪ್ರಕರಣ : ಅಪರಾಧಿಗೆ 20 ವರ್ಷ ಜೈಲು, ₹1.50 ಲಕ್ಷ ದಂಡ

15 ವರ್ಷ ಅಪ್ರಾಪ್ತೆಯನ್ನು ಪುಸಲಾಯಿಸಿ ತಡರಾತ್ರಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...