ಕಲಬುರಗಿ | ಉದ್ಯೋಗ ಕೊಡಿಸುವುದಾಗಿ 23 ಲಕ್ಷ ರೂ. ವಂಚನೆ; ಆರೋಪಿ ನಾಪತ್ತೆ

Date:

ಕಲಬುರಗಿಯಲ್ಲಿ ಒಳ್ಳೆಯ ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ ಹಲವರಿಂದ 23 ಲಕ್ಷ ರೂ. ವಂಚಿಸಿದ್ದ ಆರೋಪದ ಮೇಲೆ ಕಂಪ್ಯೂಟರ್‌ ತರಬೇತಿ ಕೇಂದ್ರದ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಕಂಪ್ಯೂಟರ್ ತರಬೇತಿಗೆ ಬರುತ್ತಿದ್ದ ಅಭ್ಯರ್ಥಿಗಳಿಗೆ ಕೆಲಸ ಕೊಡಿಸುತ್ತೇನೆಂದು ಕೋಟನೂರ(ಡಿ) ಗ್ರಾಮದ ರಷ್ಮಿ ಕಂಪ್ಯೂಟರ್ ತರಬೇತಿ ಕೇಂದ್ರದ ಚೇತನ್ ಹಣಮಂತ ಬಿರಾದಾರ ಎಂಬವರು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಚನ್ನವೀರ ನಗರದ ನಿವಾಸಿ ರೇಷ್ಮಾ ಮದು ಚವ್ಹಾಣ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಕಲಬುರಗಿಯ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಂಪ್ಯೂಟರ್‌ ತರಬೇತಿಗೆ ಹೋಗುತ್ತಿದ್ದ ರೇಷ್ಮಾ, ಅಶ್ವಿನಿ ಪ್ರವೀಣ್, ಗಣೇಶ ಹಣಮಂತ, ಅಬ್ದುಲ್ ಮುಲ್ಲಾ ಹಾಗೂ ಇತರರಿಗೆ ಚೇತನ್ ಎಂಬಾತ ಒಳ್ಳೆಯ ಉದ್ಯೋಗ ಕೊಡಿಸುತ್ತೇನೆ ಎಂದು ಆಮಿಷವೊಡ್ಡಿದ್ದಾನೆ. ಅದಕ್ಕಾಗಿ ಇವರೆಲ್ಲರಿಂದ 23 ಲಕ್ಷ ರೂ. ಹಣ ಪಡೆದುಕೊಂಡಿದ್ದಾನೆ. ಆದರೆ, ಕೆಲಸ ಕೊಡಿಸದೆ ಸತಾಯಿಸಿದ್ದು, ಹಣವನ್ನೂ ವಾಪಸ್‌ ಕೊಟ್ಟಿಲ್ಲ. ಆತನೂ ಪತ್ತೆಯಾಗಿಲ್ಲ ಎಂದು ಆರೋಪಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...