ಕಲಬುರಗಿ | ಕರ್ತವ್ಯಲೋಪ ಆರೋಪ; ಪಿಡಿಒ ಅಮಾನತು

Date:

ಮನರೇಗಾ ಯೋಜನೆ ಅನುಷ್ಠಾನ ಮತ್ತು ಕಾಮಗಾರಿಯಲ್ಲಿ ಕಳಪೆ ಸಾಧನೆ ಹಾಗೂ ಗ್ರಾಮಗಳಲ್ಲಿ ನೈರ್ಮಲ್ಯ ಕಾಪಾಡುವಲ್ಲಿ ಬೇಜಬ್ದಾರಿತನ ಆರೋಪದ ಮೇಲೆ ಪಿಡಿಒ ಒಬ್ಬರನ್ನು ಅಮಾನತು ಮಾಡಲಾಗಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾಂಪುರಹಳ್ಳಿ ಪಿಡಿಒ ಬಸವರಾಜು ಭಾಸಗಿ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯಿತಿ ಸಿಇಒ ಭಂವರ್ ಸಿಂಗ್ ಮೀನಾ ಆದೇಶ ಹೊರಡಿಸಿದ್ದಾರೆ.

ರಾಂಪುರಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿ ಶುಚಿತ್ವ ಮತ್ತು ನೈರ್ಮಲ್ಯತೆ ಕಾಪಾಡುವಲ್ಲಿ ಹಾಗೂ ಸ್ವಚ್ಛತಾ ಕೆಲಸಗಳನ್ನು ನಿರ್ವಹಿಸುವಲ್ಲಿ ಪಿಡಿಒ ವಿಫಲರಾಗಿದ್ದಾರೆ. ಮನರೇಗಾ ಯೋಜನೆಯಡಿ ನೀಡಲಾಗುವ ಉದ್ಯೋಗಗಳ ಪ್ರಗತಿಯಲ್ಲಿ 50%ಗಿಂತ ಕಡಿಮೆ ಸಾಧನೆ ಮಾಡಲಾಗಿದೆ. ವಾಣಿಜ್ಯ ಕಟ್ಟಡಗಳ ತೆರಿಗೆ ಕುರಿತು ನಮೂನೆ-9ರಲ್ಲಿ ಭರ್ತಿ ಮಾಡುವಲ್ಲಿಯೂ ಬೇಜಬ್ದಾರಿತನ ಪ್ರದರ್ಶಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇತ್ತೀಚೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಂಪುರಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ತರಕಸಪೇಟೆ ಗ್ರಾಮಕ್ಕೆ ಭೇಟಿ ನೀಡಿದ್ದರು. ಆ ವೇಳೆ, ಗ್ರಾಮದಲ್ಲಿನ ಸಮಸ್ಯೆಗಳ ಬಗ್ಗೆ ಗಮನಿಸಿದ್ದ ಅವರು, ಪಿಡಿಒ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು ಎಂದು ಕೂಡ ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...