ಆಸ್ತಿ ಬಗ್ಗೆ ತಪ್ಪು ಮಾಹಿತಿ ಆರೋಪ; ಕಾಂಗ್ರೆಸ್‌ ಶಾಸಕಿಗೆ ಹೈಕೋರ್ಟ್‌ ನೋಟಿಸ್

Date:

ಚುನಾವಣೆ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದ್ದ ಅಫಿಡವಿಟ್‌ನಲ್ಲಿ ಆಸ್ತಿ ವಿವರ ಮತ್ತು ವಿದ್ಯಾರ್ಹತೆ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪ ಕಾಂಗ್ರೆಸ್‌ ಶಾಸಕಿ ಕನೀಜ್ ಫಾತಿಮಾ ಮೇಲಿದೆ. ಅವರಿಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಲಬುರಗಿ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿದ್ದಕನೀಜ್ ಫಾತಿಮಾ ಅವರು ಅಫಿಡವಿಟ್‌ನಲ್ಲಿ ಸಲ್ಲಿಸಿರುವ ಹಲವಾರು ಮಾಹಿತಿಗಳು ತಪ್ಪಾಗಿವೆ. ಉದ್ದೇಶಪೂರ್ವಕವಾಗಿಯೇ ಅವರು ಸತ್ಯವನ್ನು ಮರೆಮಾಚಿದ್ದಾರೆ ಎಂದು ಆರೋಪಿಸಿ ಎ.ಎಸ್‌ ಶರಣಬಸಪ್ಪ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಶರಣಬಸಪ್ಪ ಅವರು ಫಾತಿಮಾ ಅವರ ವಿರುದ್ಧ ಜೆಡಿಎಸ್‌ನಿಂದ ಸ್ಪರ್ಧಿಸಿ ಸೋಲುಂಡಿದ್ದರು.

“ಫಾತಿಮಾ ಅವರು ಎಸ್‌ಬಿಐ ಸ್ಟೇಷನ್ ಬ್ರಾಂಚ್‌‌ನಲ್ಲಿರುವ ತಮ್ಮ ಬ್ಯಾಂಕ್ ಖಾತೆಯ ವಿವರಗಳನ್ನು ಬಹಿರಂಗಪಡಿಸಿಲ್ಲ. ಫಾತಿಮಾ ಅವರು 2018 ರಲ್ಲಿ 14.5 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಘೋಷಿಸಿದ್ದರು. ಆದರೆ, ಐದು ವರ್ಷಗಳ ನಂತರ ಅದರ ಮೌಲ್ಯ ಕೇವಲ 14.64 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಈ ಮಾಹಿತಿ ನಂಬಬಹುದಾದ ರೀತಿಯಲ್ಲಿ ಇಲ್ಲ. ಅವರ ಆಯ್ಕೆಯನ್ನು ಅನೂರ್ಜಿತಗೊಳಿಸಬೇಕು” ಎಂದು ಅರ್ಜಿಯಲ್ಲಿ ವಾದಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶರಣಬಸಪ್ಪ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್‌ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿದೆ. ಆಕ್ಷೇಪಣೆ ಸಲ್ಲಿಸಲು ನಾಲ್ಕು ವಾರಗಳ ಅವಕಾಶ ನೀಡಿ ನೋಟೀಸ್‌ ಜಾರಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...